ಭಟ್ಕಳ: ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಭಟ್ಕಳ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಲ್ಲಿನ ಬಂದರ್ ತೀರದಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತರನ್ನು ಸ್ಥಳೀಯ ಜವಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ಮೂಲದ ರಿಝ್ವಾನ್ ಮತ್ತು ಫೈರೋಝ್ ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನ ಸಮುದ್ರಕ್ಕೆ ತೆರಳಿದ್ದ ಇವರು ಈಜುತ್ತಿರುವ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿದ್ದಾರೆ ಎಂದು ತಿಳಿದುಬಂದಿದೆ.
ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಕುರಿತು ಮೃತರ ಕುಟುಂಬದವರಿಗೆ ಮಾಹಿತಿ ನೀಡಲಾಗು ತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story




