ಭಟ್ಕಳ: ಬಾವಿಗೆ ಬಿದ್ದು ಮಹಿಳೆ ಮೃತ್ಯು

ಭಟ್ಕಳ: ತಾಲೂಕಿನ ಗೋಳಿಕುಂಬ್ರಿ ಸಮೀಪದ ಉತ್ತರಕೊಪ್ಪ ಗ್ರಾಮದಲ್ಲಿ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಲತಾ ವಿಷ್ಣು ನಾಯ್ಕ (44) ಮೃತ ಮಹಿಳೆ. ಕೆಲ ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಶನಿವಾರ ಮನೆಯಿಂದ ಹೊರಹೋದ ಲತಾ ಅವರು ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದರು. ಈ ವೇಳೆ ಗ್ರಾಮದ ಬಾವಿಯೊಂದರಲ್ಲಿ ಅವರ ಮೃತದೇಹ ಪತ್ತೆಯಾಯಿತು.
ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮುರ್ಡೇಶ್ವರ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ಈ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story




