Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಬೈಂದೂರು: ಎಂ.ಸಿ.ಸಿ ಬ್ಯಾಂಕಿನ 20ನೇ...

ಬೈಂದೂರು: ಎಂ.ಸಿ.ಸಿ ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Aug 2025 12:59 PM IST
share
ಬೈಂದೂರು: ಎಂ.ಸಿ.ಸಿ  ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ಬೈಂದೂರು: ಎಂ.ಸಿ.ಸಿ. ಬ್ಯಾಂಕ್ ನ 20ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ರವಿವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಅನಿಲ್ ಲೋಬೊ ಅವರು ಈ ಶಾಖೆಯನ್ನು ಉದ್ಘಾಟಿಸಿದರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್ ನ ಧರ್ಮಗುರುಗಳಾದ ರೆ. ಫಾ. ವಿನ್ಸೆಂಟ್ ಕುವೆಲ್ಲೊ ಅವರು ಆಶೀರ್ವದಿಸಿ, ಹೊಸ ಶಾಖೆಯ ಯಶಸ್ಸಿಗೆ ಪ್ರಾರ್ಥಿಸಿದರು.

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ಸೇಫ್ ಡೆಪಾಸಿಟ್ ಲಾಕರ್ ಉದ್ಘಾಟಿಸಿದರು. ಇ-ಸ್ಟ್ಯಾಂಪಿಂಗ್ ಸೌಲಭ್ಯವನ್ನು ಬೈಂದೂರಿನ ಸೈಂಟ್ ಥಾಮಸ್ ವಸತಿ ಶಾಲೆಯ ಪ್ರಾಂಶುಪಾಲ ರೆ. ಫಾ. ಫಿಲಿಪ್ ನೆಲಿವಿಲ್ಲಾ ಉದ್ಘಾಟಿಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸದಾಶಿವ ಡಿ. ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಸಿನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಬೈಂದೂರು ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ. ಅವರು ಅತಿಥಿಗಳಾಗಿದ್ದರು.

ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಅನಿಲ್ ಲೋಬೊ ಅವರು ಅಧ್ಯಕ್ಷೀಯ ಭಾಷಣ ಮಾಡಿದರು.

ಫಾ. ವಿನ್ಸೆಂಟ್ ಕುವೆಲ್ಲೋ, ಫಾ. ಫಿಲಿಪ್ ನೆಲಿವಿಲ್ಲಾ, ಬಾಬು ಶೆಟ್ಟಿ, ರಾಜು ಪೂಜಾರಿ ಅವರು ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್ಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಗಳಿಸಿದ ಬೈಂದೂರು ಪ್ರದೇಶದ ವಿದ್ಯಾರ್ಥಿಗಳನ್ನು ಹಾಗೂ ಬೈಂದೂರು ಶಾಖೆಯಲ್ಲಿ ಖಾತೆಗಳನ್ನು ತೆರೆದ ಗ್ರಾಹಕರನ್ನು ಮತ್ತು ವಿವಿಧ ಸ್ಥಳೀಯ ಸಂಘಗಳ ಪದಾಧಿಕಾರಿಗಳ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಟ್ಟಡದ ಮಾಲಿಕರಾದ ಜಗನ್ನಾಥ ಶೆಟ್ಟಿ ಮತ್ತು ಸಿವಿಲ್ ಎಂಜಿನಿಯರ್ ಕಾರ್ತಿಕ್ ಕಿರಣ್ ಅವರಿಗೆ ಈ ಸಂದರ್ಭದಲ್ಲಿ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.

ಬೈಂದೂರು ಶಾಖೆಗೆ ನೇಮಕಗೊಂಡ ಸಿಬ್ಬಂದಿಯನ್ನು ಜನರಲ್ ಮ್ಯಾನೇಜರ್ ಸುನಿಲ್ ಮಿನೆಜಸ್ ಪರಿಚಯಿಸಿದರು, ಅಧ್ಯಕ್ಷರು ಕೃತಜ್ಞತೆಯ ಸಂಕೇತವಾಗಿ ಅವರಿಗೆ ಹೂ ಗುಚ್ಛ ನೀಡಿದರು.

ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ ಮತ್ತು ನಿರ್ದೇಶಕರಾದ ಆಂಡ್ರ‍್ಯೂ ಡಿಸೋಜಾ, ಡೇವಿಡ್ ಡಿಸೋಜಾ, ಹೆರಾಲ್ಡ್ ಮೊಂತೇರೊ, ಮೆಲ್ವಿನ್ ವಾಸ್, ಜೆ.ಪಿ. ರೊಡ್ರಿಗಸ್, ರೋಶನ್ ಡಿಸೋಜಾ, ಡಾ| ಜೆರಾಲ್ಡ್ ಪಿಂಟೊ, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಅಲ್ವಿನ್ ಪಿ. ಮೊಂತೇರೊ, ಫೆಲಿಕ್ಸ್ ಡಿ'ಕ್ರೂಜ್ ಮತ್ತು ಜನರಲ್ ಮ್ಯಾನೇಜರ್ ಸುನಿಲ್ ಮೆನೆಜಸ್ ಉಪಸ್ಥಿತರಿದ್ದರು.

ನಿರ್ದೇಶಕ ಎಲ್ರಾಯ್ ಕಿರಣ್ ಕ್ರಾಸ್ಟೊ ಸ್ವಾಗತಿಸಿದರು. ಬೈಂದೂರು ಶಾಖೆಯ ಹಿರಿಯ ವ್ಯವಸ್ಥಾಪಕರಾದ ಸಂದೀಪ್ ಕ್ವಾಡ್ರಸ್ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮವನ್ನು ಸ್ಟೀವನ್ ಕುಲಾಸೊ ಉದ್ಯಾವರ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X