Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ನಕಲಿ...

ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ನಕಲಿ ಲಾಟರಿ ಪ್ರಕರಣ: ಆರೋಪಿ ಸೆರೆ

ವಾರ್ತಾಭಾರತಿವಾರ್ತಾಭಾರತಿ17 July 2026 10:22 PM IST
share
ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ನಕಲಿ ಲಾಟರಿ ಪ್ರಕರಣ: ಆರೋಪಿ ಸೆರೆ

ಭಟ್ಕಳ: ಮುರುಡೇಶ್ವರ ದೇವಸ್ಥಾನದ ಹೆಸರನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ "ಶ್ರೀ ಮುರುಡೇಶ್ವರ ಅದೃಷ್ಟ ಡ್ರಾ" ಹೆಸರಿನಲ್ಲಿ ನಕಲಿ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡಿ ಸಾರ್ವಜನಿಕರಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಸುಮಾರು ಒಂದು ವರ್ಷದ ತನಿಖೆಯ ಬಳಿಕ ಮುರುಡೇಶ್ವರ ಪೊಲೀಸರು ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.

ಬಂಧಿತನನ್ನು ಬೀದರ ಜಿಲ್ಲೆಯ ಬಾಲ್ಕಿ ತಾಲ್ಲೂಕಿನ ಸಾಲಖನಗಾಂವ ನಿವಾಸಿ ನರಸಿಂಗ್ ವೆಂಕಟರಾವ್ ತಗರಖೇಡೆ (32) ಎಂದು ಗುರುತಿಸಲಾಗಿದೆ.

ಆರೋಪಿ ಮುರುಡೇಶ್ವರ ದೇವಸ್ಥಾನದ ಭಾವಚಿತ್ರ ಬಳಸಿ "ಶ್ರೀ ಮುರುಡೇಶ್ವರ ಅದೃಷ್ಟ ಡ್ರಾ" ಹೆಸರಿನ ನಕಲಿ ಕರಪತ್ರಗಳನ್ನು ಸೃಷ್ಟಿಸಿದ್ದಲ್ಲದೆ, ನಕಲಿ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ಲಕ್ಕಿ ಡ್ರಾ ನಡೆಯುತ್ತಿದೆ ಎಂದು ಸುಳ್ಳು ಪ್ರಚಾರ ನಡೆಸಿ ಸಾರ್ವಜನಿಕರಿಂದ ಹಣ ಪಡೆದು ವಂಚನೆ ಎಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮುರುಡೇಶ್ವರ ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಮದನ ಶೆಟ್ಟಿ (73) ಅವರು 2025ರ ಆಗಸ್ಟ್‌ 6ರಂದು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳೆದ ಒಂದು ವರ್ಷದಿಂದ ತನಿಖೆ ನಡೆಸುತ್ತಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಜಿ., ಡಿವೈಎಸ್ಪಿ ಗಿರೀಶ ಬಿ. ಹಾಗೂ ಸಿಪಿಐ ಜಗದೀಶ ಹಂಚಿನಾಳ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ಹಣಮಂತ ಬಿರಾದಾರ ಮತ್ತು ಪಿಎಸ್‌ಐ ಲೋಕನಾಥ ರಾಥೋಡ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ತಂಡವು ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಬೀದರ ಜಿಲ್ಲೆಗಳಲ್ಲಿ ಆರೋಪಿಯ ಸುಳಿವು ಪತ್ತೆಹಚ್ಚಿ ನಿರಂತರ ಕಾರ್ಯಾಚರಣೆ ನಡೆಸಿ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಯಿತು.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X