Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಗೋಕರ್ಣ: ದುಬ್ಬನಸಶಿಯಲ್ಲಿ ಅನಧಿಕೃತ...

ಗೋಕರ್ಣ: ದುಬ್ಬನಸಶಿಯಲ್ಲಿ ಅನಧಿಕೃತ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆ; ಬಿಗಿ ಪೊಲೀಸ್ ಬಂದೋಬಸ್ತ್

ವಾರ್ತಾಭಾರತಿವಾರ್ತಾಭಾರತಿ9 March 2026 1:55 PM IST
share
ಗೋಕರ್ಣ: ದುಬ್ಬನಸಶಿಯಲ್ಲಿ ಅನಧಿಕೃತ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆ;  ಬಿಗಿ ಪೊಲೀಸ್ ಬಂದೋಬಸ್ತ್
24 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿ

ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿದ್ದ ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ತಾಲೂಕು ಆಡಳಿತವು ದಿಟ್ಟ ಕ್ರಮಕ್ಕೆ ಮುಂದಾಗಿದೆ.

ಅರಬ್ಬಿ ಸಮುದ್ರ ತೀರದ ದುಬ್ಬನಸಶಿ ಮತ್ತು ನಡುಮಸ್ಕೇರಿ ಭಾಗಗಳಲ್ಲಿ ಕಾನೂನುಬಾಹಿರವಾಗಿ ತಲೆಎತ್ತಿದ್ದ ಒಟ್ಟು 44 ರೆಸಾರ್ಟ್‌ಗಳನ್ನು ತೆರವುಗೊಳಿಸುವಂತೆ ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ. ಈ ಪೈಕಿ 16 ರೆಸಾರ್ಟ್ ಮಾಲೀಕರು ಈಗಾಗಲೇ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿರುವ ಕಾರಣ ಅವುಗಳ ತೆರವು ಪ್ರಕ್ರಿಯೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಉಳಿದ 28 ರೆಸಾರ್ಟ್‌ಗಳಲ್ಲಿ 7 ರೆಸಾರ್ಟ್‌ಗಳನ್ನು ಮಾಲೀಕರು ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿದ್ದರೆ, ಬಾಕಿ ಇರುವ 21 ರೆಸಾರ್ಟ್‌ಗಳನ್ನು ತಾಲೂಕು ಆಡಳಿತವೇ ಸೀಜ್ ಮಾಡಿ ನಿಯಮಾನುಸಾರ ನೆಲಸಮಗೊಳಿಸಲಿದೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ಈ ಬೃಹತ್ ಕಾರ್ಯಾಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದುಬ್ಬನಸಶಿ, ಗಂಗೆಕೊಳ್ಳ ಹಾಗೂ ಭಾವಿಕೊಡ್ಲ ಗ್ರಾಮಗಳಲ್ಲಿ ಮಾರ್ಚ್ 9ರ ಬೆಳಿಗ್ಗೆಯಿಂದ 24 ಗಂಟೆಗಳ ಕಾಲ ಬಿಎನ್ಎಸ್ 163 (BNS 163) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಸಹಾಯಕ ಆಯುಕ್ತ ಶ್ರವಣಕುಮಾರ್ ಆದೇಶಿಸಿದ್ದಾರೆ.

ಒಂದೆಡೆ ಆಡಳಿತ ಮಂಡಳಿ ತೆರವು ಕಾರ್ಯಾಚರಣೆಗೆ ಸಜ್ಜಾಗಿದ್ದರೆ, ಇನ್ನೊಂದೆಡೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಜೀವನೋಪಾಯಕ್ಕೆ ಅಡ್ಡಿಯಾಗುತ್ತಿದೆ ಎಂದು ಆರೋಪಿಸಿ ರೆಸಾರ್ಟ್ ಮಾಲೀಕರು ಮತ್ತು ಕಾರ್ಮಿಕರು ದುಬ್ಬನಸಶಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ ಅವರು, ರೆಸಾರ್ಟ್ ತೆರವುಗೊಳಿಸಲು ಬಿಡುವುದಿಲ್ಲ ಎಂದು ಘೋಷಿಸಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದರು. ಇದರಿಂದಾಗಿ ಗೋಕರ್ಣದ ಕರಾವಳಿ ತೀರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Tags

GokarnaDubbansashi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X