Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಗೋಕರ್ಣ | ಬೋಟ್‌ನ ಮೀನು ಸಂಗ್ರಹದ ಕೋಣೆ...

ಗೋಕರ್ಣ | ಬೋಟ್‌ನ ಮೀನು ಸಂಗ್ರಹದ ಕೋಣೆ ಸ್ವಚ್ಛಗೊಳಿಸುವಾಗ ದುರಂತ: ಉಸಿರುಗಟ್ಟಿ ಮೂವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ27 Oct 2026 10:53 PM IST
share
ಗೋಕರ್ಣ | ಬೋಟ್‌ನ ಮೀನು ಸಂಗ್ರಹದ ಕೋಣೆ ಸ್ವಚ್ಛಗೊಳಿಸುವಾಗ ದುರಂತ: ಉಸಿರುಗಟ್ಟಿ ಮೂವರು ಮೃತ್ಯು

ಗೋಕರ್ಣ: ಮೀನು ಸಂಗ್ರಹಿಸುವ ಕೋಣೆಯನ್ನು ಸ್ವಚ್ಛಗೊಳಿಸಲು ಬೋಟ್‌ನೊಳಗೆ ಇಳಿದ ಮೂವರು ಮೀನುಗಾರರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ತದಡಿಯ ಕುಚೈಮಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ನೌಶಾದ್ (48), ಅಮೀನ್ (40) ಹಾಗೂ ಅಮನ್ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮೀನು ಹಿಡಿದು ಬಂದರಿಗೆ ಮರಳಿದ್ದ ಮೀನುಗಾರರು, ಬೋಟ್‌ನಲ್ಲಿದ್ದ ಮೀನುಗಳನ್ನು ಖಾಲಿ ಮಾಡಿದ ಬಳಿಕ ಮೀನು ಸಂಗ್ರಹಿಸುವ ಕೋಣೆಯನ್ನು ಸ್ವಚ್ಛಗೊಳಿಸಲು ಮುಂದಾಗಿದ್ದರು. ಈ ವೇಳೆ ಕೋಣೆಯೊಳಗೆ ಇಳಿದ ಮೀನುಗಾರರು ಉಸಿರಾಟದ ತೊಂದರೆಗೆ ಸಿಲುಕಿದ್ದಾರೆ ಎನ್ನಲಾಗಿದೆ. ಕೋಣೆಯೊಳಗೆ ವಿಷಕಾರಿ ಅನಿಲ ಸಂಗ್ರಹವಾಗಿದ್ದರಿಂದ ಅಥವಾ ಆಮ್ಲಜನಕದ ಕೊರತೆಯಿಂದ ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಘಟನೆ ಗಮನಕ್ಕೆ ಬರುತ್ತಿದ್ದಂತೆ ತಕ್ಷಣ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಇಬ್ಬರನ್ನು ಹೊರಗೆ ಕರೆತರಲಾಗಿದೆ. ಅವರಲ್ಲಿ ಓರ್ವನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಒಂದೇ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮೀನುಗಾರರು ಮೃತಪಟ್ಟಿರುವುದು ಮೀನುಗಾರರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags

GokarnaTragedycleaning boatfish storagesuffocation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X