Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಅಪೂರ್ಣ ಹೆದ್ದಾರಿ ಕಾಮಗಾರಿ; ಐಆರ್‌ಬಿ...

ಅಪೂರ್ಣ ಹೆದ್ದಾರಿ ಕಾಮಗಾರಿ; ಐಆರ್‌ಬಿ ಅಧಿಕಾರಿಗಳ ವಿರುದ್ಧ ಸಚಿವ ಮಾಂಕಾಳ್ ವೈದ್ಯ ಆಕ್ರೋಶ

ಕುಮಾಟಾ, ಶಿರೂರ್ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 July 2023 10:42 PM IST
share
ಅಪೂರ್ಣ ಹೆದ್ದಾರಿ ಕಾಮಗಾರಿ; ಐಆರ್‌ಬಿ ಅಧಿಕಾರಿಗಳ ವಿರುದ್ಧ ಸಚಿವ ಮಾಂಕಾಳ್ ವೈದ್ಯ ಆಕ್ರೋಶ

ಭಟ್ಕಳ: ಐ.ಆರ್.ಬಿ (IRB) ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ಎಸ್.ವೈದ್ಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕುಮಾಟಾ ಮತ್ತು ಶಿರೂರ್ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಅವರು ಗುರುವಾರ ಸಂಜೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಭಟ್ಕಳದ ರಂಗಿನಕಟ್ಟೆಯಿಂದ ಶಮ್ಸುದ್ದೀನ್ ವೃತ್ತದ ವರೆಗೆ ಹೊಳೆಯಾಗಿ ಮಾರ್ಪಟ್ಟಿದ್ದನ್ನು ಕಂಡು ಆಕ್ರೋಶಿತರಾದರು. ಅಲ್ಲೇ ಇದ್ದ ಐ.ಆರ್.ಬಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಚಿವರು “ನಿವು ಹೊಟ್ಟೆಗೆ ಅನ್ನ ತಿನ್ನುತ್ತೀರೋ ಬೇರೇನನ್ನಾದರೂ ತಿನ್ನುತ್ತಿರೋ ಎಂದು ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ನೀಡಲು ಹೋದ ಅಧಿಕಾರಿಯನ್ನು ತಡೆದ ಸಚಿವರು ಕೂಡಲೆ ಜಿಲ್ಲಾಧಿಕಾರಿಯನ್ನುದ್ದೇಶಿಸಿ ಇವರ ವಿರುದ್ಧ ಪ್ರಕರಣ ದಾಖಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಲು ಆದೇಶಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಪೂರ್ಣಗೊಂಡಿದ್ದರಿಂದ ಸ್ಥಳೀಯ ನಿವಾಸಿಗಳ ಜೀವನ ಅಸ್ತವ್ಯಸ್ತವಾಗಿರುವುದನ್ನು ಸಚಿವರು ತಮ್ಮ ಪರಿಶೀಲನೆಯ ವೇಳೆ ಗಮನಿಸಿದರು. ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾಗಿರುವ ಬಗ್ಗೆ ಅಧಿಕಾರಿಗಳು ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಐಆರ್‌ಬಿ (ಮೂಲಸೌಕರ್ಯ ಮತ್ತು ರಿಯಲ್ ಎಸ್ಟೇಟ್ ಅಭಿವೃದ್ಧಿ) ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸುವಂತೆ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಮೂಲಸೌಕರ್ಯ ಯೋಜನೆಗಳಲ್ಲಿ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X