Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. Karwar | ಭಾರತದ ಕಡಲ ಕಾವಲಿಗೆ ಇಂದು...

Karwar | ಭಾರತದ ಕಡಲ ಕಾವಲಿಗೆ ಇಂದು ಸ್ವದೇಶಿ ‘ಸಮರ್ಥಕ್' ಸೇರ್ಪಡೆ

ನೌಕಾಪಡೆಗೆ ಸ್ವದೇಶಿ ಬಹುಪಯೋಗಿ ಯುದ್ಧನೌಕೆ

ವಾರ್ತಾಭಾರತಿವಾರ್ತಾಭಾರತಿ16 Oct 2026 12:05 PM IST
share
Karwar | ಭಾರತದ ಕಡಲ ಕಾವಲಿಗೆ ಇಂದು ಸ್ವದೇಶಿ ‘ಸಮರ್ಥಕ್ ಸೇರ್ಪಡೆ

ಕಾರವಾರ: ಸಮುದ್ರ ಕಣ್ಗಾವಲಿನಿಂದ ಹಿಡಿದು ವಿಪತ್ತು ಪರಿಹಾರ, ರಕ್ಷಣಾ ಕಾರ್ಯಾಚರಣೆ ಹಾಗೂ ಮಾನವರಹಿತ ತಂತ್ರಜ್ಞಾನಗಳ ಪ್ರಯೋಗದ ವರೆಗೆ ಹಲವು ಜವಾಬ್ದಾರಿಗಳನ್ನು ನಿಭಾಯಿಸಬಲ್ಲ ಭಾರತದ ಸ್ವದೇಶಿ ಬಹುಪಯೋಗಿ ಯುದ್ಧನೌಕೆ ‘ಐಎನ್ಎಸ್ ಸಮರ್ಥಕ್’ಅಕ್ಟೋಬರ್ 16ರಂದು ಕಾರವಾರದ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿದೆ.

ದೇಶದ ರಕ್ಷಣಾ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆಯಾಗಿರುವ ಈ ಮಹತ್ವದ ಕಾರ್ಯಕ್ರಮಕ್ಕೆ ಉಪ ರಾಷ್ಟ್ರಪತಿ ಚಂದ್ರಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅಧ್ಯಕ್ಷತೆ ವಹಿಸಲಿದ್ದು, ನೌಕಾಪಡೆಯ ಹಿರಿಯ ಅಧಿಕಾರಿಗಳು ಹಾಗೂ ರಕ್ಷಣಾ ಕ್ಷೇತ್ರದ ಗಣ್ಯರು ಸಾಕ್ಷಿಯಾಗಲಿದ್ದಾರೆ.

ಭಾರತ ಸರ್ಕಾರದ ‘ಮೇಕ್ ಇನ್ ಇಂಡಿಯಾ’ಕಾರ್ಯಕ್ರಮದಡಿ ತಮಿಳುನಾಡಿನ ಕಟ್ಟುಪಳ್ಳಿಯಲ್ಲಿರುವ ಲಾರ್ಸನ್ ಆ್ಯಂಡ್ ಟೂಬ್ರೊ (ಎಲ್ ಆಂಡ್ ಟಿ) ಸಂಸ್ಥೆ ಈ ನೌಕೆಯನ್ನು ನಿರ್ಮಿಸಿದೆ. ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಲಿರುವ ನಾಲ್ಕು ಬಹುಪಯೋಗಿ ನೌಕೆಗಳ ಸರಣಿಯಲ್ಲಿ ಸಮರ್ಥಕ್ ಮೊದಲನೆಯದಾಗಿದೆ. ಆಗಸ್ಟ್ 27ರಂದು ನಿರ್ಮಾಣ ಸಂಸ್ಥೆಯಿಂದ ನೌಕಾಪಡೆಗೆ ಹಸ್ತಾಂತರಗೊಂಡಿದ್ದ ಈ ನೌಕೆ, ಇದೀಗ ಅಧಿಕೃತ ಸೇವೆಗೆ ಪ್ರವೇಶಿಸಲು ಸಜ್ಜಾಗಿದೆ. ಹಡಗಿನಲ್ಲಿ ಶೇ.75ಕ್ಕಿಂತ ಹೆಚ್ಚು ಸ್ವದೇಶಿ ಅಂಶಗಳಿವೆ ಎಂದು ಹಸ್ತಾಂತರದ ಸಂದರ್ಭದಲ್ಲಿ ಪ್ರಕಟಿಸಲಾಗಿತ್ತು.

ಕಾರವಾರದ ನೌಕಾನೆಲೆಯಲ್ಲಿ ನಡೆಯಲಿರುವ ಸೇರ್ಪಡೆ ಸಮಾರಂಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಸೇರಿದಂತೆ ಹಿರಿಯ ನೌಕಾಪಡೆ ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳು, ಗಣ್ಯರು ಹಾಗೂ ಎಲ್ಆ್ಯಂಡ್ಟಿ ಸಂಸ್ಥೆಯ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಹಲವು ಜವಾಬ್ದಾರಿಗಳಿಗೆ ಒಂದೇ ನೌಕೆ

ಸಮುದ್ರದಲ್ಲಿ ಕಣ್ಗಾವಲು ಮತ್ತು ಗಸ್ತು ಕಾರ್ಯಾಚರಣೆ ನಡೆಸುವುದು ಸಮರ್ಥಕ್ನ ಪ್ರಮುಖ ಜವಾಬ್ದಾರಿಯಾಗಿದೆ. ಕಡಿಮೆ ತೀವ್ರತೆಯ ಸಮುದ್ರ ಕಾರ್ಯಾಚರಣೆಗಳಲ್ಲಿಯೂ ಇದು ಕಾರ್ಯನಿರ್ವಹಿಸಬಲ್ಲದು. ಸಮುದ್ರದಲ್ಲಿ ಗುರಿಗಳನ್ನು ನಿಯೋಜಿಸುವುದು, ವಿವಿಧ ವ್ಯವಸ್ಥೆಗಳ ಪರೀಕ್ಷೆ ಮತ್ತು ಮೌಲ್ಯಮಾಪನಕ್ಕೆ ವೇದಿಕೆ ಒದಗಿಸುವುದರ ಜೊತೆಗೆ ಮಾನವರಹಿತ ಹಾಗೂ ಸ್ವಾಯತ್ತ ವ್ಯವಸ್ಥೆಗಳಿಗೆ ತಾಯಿನೌಕೆಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನೂ ಹೊಂದಿದೆ. ಈ ಮೂಲಕ ಹೊಸ ತಂತ್ರಜ್ಞಾನಗಳ ಪ್ರಯೋಗ ಮತ್ತು ಅವುಗಳ ಕಾರ್ಯಾಚರಣೆಗೆ ನೌಕಾಪಡೆಗೆ ನೆರವಾಗಲಿದೆ.

ಯುದ್ಧ ಕಾರ್ಯಾಚರಣೆಗಳಷ್ಟೇ ಅಲ್ಲದೆ, ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಕಾರ್ಯಗಳಲ್ಲಿಯೂ ಸಮರ್ಥಕ್ ಪ್ರಮುಖ ಪಾತ್ರ ವಹಿಸಲಿದೆ. ಚಂಡಮಾರುತ, ಪ್ರವಾಹ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ನೆರವು ಒದಗಿಸುವುದು, ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ, ಮುಳುಗಿದ ವಸ್ತುಗಳ ಪತ್ತೆ ಹಾಗೂ ಎತ್ತುವ ಕಾರ್ಯಗಳಿಗೆ ಇದನ್ನು ಬಳಸಬಹುದಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಸೀಮಿತ ವೈದ್ಯಕೀಯ ಸೌಲಭ್ಯಗಳಿರುವ ಆಸ್ಪತ್ರೆ ನೌಕೆಯಾಗಿಯೂ ಕಾರ್ಯನಿರ್ವಹಿಸುವ ಸಾಮರ್ಥ್ಯ ಇದಕ್ಕಿದೆ.

5,000 ಟನ್ ತೂಕ; 7,200 ನಾಟಿಕಲ್ ಮೈಲುಗಳಿಗೂ ಅಧಿಕ ದೂರ ಕ್ರಮಿಸುವ ಸಾಮರ್ಥ್ಯ

100 ಮೀಟರ್ಗಿಂತಲೂ ಹೆಚ್ಚು ಉದ್ದವಿರುವ ಐಎನ್ಎಸ್ ಸಮರ್ಥಕ್ ಸುಮಾರು 5,000 ಟನ್ ತೂಕ ಹೊಂದಿದೆ. ಇಂಧನ ಮತ್ತು ಕಾರ್ಯಾಚರಣೆಯ ಪರಿಸ್ಥಿತಿಗಳಿಗೆ ಅನುಗುಣವಾಗಿ 7,200 ನಾಟಿಕಲ್ ಮೈಲುಗಳಿಗಿಂತಲೂ ಅಧಿಕ ದೂರ ಕ್ರಮಿಸುವ ಸಾಮರ್ಥ್ಯ ಹೊಂದಿರುವ ಈ ನೌಕೆಯಲ್ಲಿ ಸ್ವದೇಶಿ ಸಂವೇದಕಗಳು, ಶಸ್ತ್ರಾಸ್ತ್ರಗಳು ಹಾಗೂ ಇಲೆಕ್ಟ್ರಾನಿಕ್ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಸವಾಲಿನ ಸಮುದ್ರ ಪರಿಸ್ಥಿತಿಗಳಲ್ಲೂ ಕಾರ್ಯನಿರ್ವಹಿಸುವಂತೆ ಇದರ ವ್ಯವಸ್ಥೆಗಳನ್ನು ರೂಪಿಸಲಾಗಿದೆ ಎಂದು ನೌಕಾಪಡೆಯ ತಿಳಿಸಿದೆ.

ಬಹುಪಯೋಗಿ ಕಾರ್ಯಗಳಿಗೆ ವಿನ್ಯಾಸಗೊಳಿಸಿರುವ ಸಮರ್ಥಕ್ನ ಸೇರ್ಪಡೆಯಿಂದ ವಿಧ್ವಂಸಕ ನೌಕೆಗಳು, ಇತರ ಯುದ್ಧನೌಕೆಗಳು ಹಾಗೂ ವಿಮಾನವಾಹಕ ನೌಕೆಗಳಂತಹ ಪ್ರಮುಖ ಸಮರ ವೇದಿಕೆಗಳನ್ನು ಅವುಗಳ ಮುಖ್ಯ ಕಾರ್ಯಾಚರಣೆಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ಬಳಸಲು ಅವಕಾಶ ಸಿಗಲಿದೆ. ಗುರಿ ನಿಯೋಜನೆ, ಸಿಬ್ಬಂದಿ ತರಬೇತಿ, ಸಮುದ್ರ ಕಣ್ಗಾವಲು, ಸರಕು ಸಾಗಣೆ ಮತ್ತು ಅಗತ್ಯ ನೆರವು ಒದಗಿಸುವ ಕಾರ್ಯಗಳನ್ನೂ ಈ ನೌಕೆ ನಿರ್ವಹಿಸಲಿದೆ. ಇದರಿಂದ ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯ ವಿಸ್ತರಿಸುವ ನಿರೀಕ್ಷೆಯಿದೆ.

ಆನೆಯ ಲಾಂಛನ

ಐಎನ್ಎಸ್ ಸಮರ್ಥಕ್ನ ಲಾಂಛನದಲ್ಲಿ ಅಲೆಗಳಿಂದ ಮೇಲೇಳುವ ಆಕ್ರಮಣಕಾರಿ ಭಂಗಿಯ ಭಾರತೀಯ ಆನೆಯ ಚಿತ್ರವಿದೆ. ಆನೆಯು ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯದ ಸಂಕೇತವಾಗಿದೆ. ‘ವಿಜಯವೇ ನಮ್ಮ ಏಕೈಕ ಗುರಿ’ಎಂಬುದು ನೌಕೆಯ ಧ್ಯೇಯವಾಕ್ಯವಾಗಿದೆ.

ಯಾವುದೇ ಕಾರ್ಯವನ್ನು ಯಾವುದೇ ಸಮಯದಲ್ಲಿ ನಿರ್ವಹಿಸಲು ಸಿದ್ಧವಾಗಿರುವುದು ಹಾಗೂ ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ಸ್ಪಂದಿಸುವ ಸಾಮರ್ಥ್ಯ ಸಮರ್ಥಕ್ನ ಪ್ರಮುಖ ವೈಶಿಷ್ಟ್ಯಗಳಾಗಿವೆ. ಸ್ವದೇಶಿ ನಿರ್ಮಾಣ, ಬಹುಮುಖ ಕಾರ್ಯನಿರ್ವಹಣೆ ಮತ್ತು ಆಧುನಿಕ ತಂತ್ರಜ್ಞಾನಗಳ ಸಂಯೋಜನೆಯೊಂದಿಗೆ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗುತ್ತಿರುವ ಈ ನೌಕೆ, ದೇಶದ ರಕ್ಷಣಾ ಉತ್ಪಾದನಾ ಸಾಮರ್ಥ್ಯ ಹಾಗೂ ಸ್ವಾವಲಂಬನೆಯ ಪ್ರಯತ್ನಕ್ಕೆ ಮಹತ್ವದ ಸೇರ್ಪಡೆಯಾಗಲಿದೆ.

Tags

Indian Maritime DefenseKarwar‘Samarthak’
share
ವಾರ್ತಾಭಾರತಿ
ವಾರ್ತಾಭಾರತಿ
Next Story
X