Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಬಡವರ ಆಹಾರ ಭದ್ರತೆಗೆ ಇಂದಿರಾ ಕ್ಯಾಂಟೀನ್...

ಬಡವರ ಆಹಾರ ಭದ್ರತೆಗೆ ಇಂದಿರಾ ಕ್ಯಾಂಟೀನ್ ಮಹತ್ವದ ಯೋಜನೆ: ಸಚಿವ ಮಂಕಾಳ್ ವೈದ್ಯ

ವಾರ್ತಾಭಾರತಿವಾರ್ತಾಭಾರತಿ1 Feb 2026 7:58 PM IST
share
ಬಡವರ ಆಹಾರ ಭದ್ರತೆಗೆ ಇಂದಿರಾ ಕ್ಯಾಂಟೀನ್ ಮಹತ್ವದ ಯೋಜನೆ: ಸಚಿವ ಮಂಕಾಳ್ ವೈದ್ಯ

ಭಟ್ಕಳ: ಹಳ್ಳಿಗಳು ಮತ್ತು ವಿವಿಧ ಊರುಗಳಿಂದ ಕೆಲಸಕ್ಕಾಗಿ ನಗರಗಳು ಹಾಗೂ ಪಟ್ಟಣಗಳಿಗೆ ಬರುವ ಬಡವರು ದಿನನಿತ್ಯದ ಆಹಾರಕ್ಕಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಡವರಿಗೆ ಪೌಷ್ಟಿಕ ಆಹಾರ ಒದಗಿ ಸುವ ಉದ್ದೇಶದಿಂದ ‘ಇಂದಿರಾ ಕ್ಯಾಂಟೀನ್’ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ವೈದ್ಯ ಹೇಳಿದರು.

ಅವರು ಭಾನುವಾರ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಝಾದ್ ನಗರದಲ್ಲಿ ನೂತನವಾಗಿ ನಿರ್ಮಿಸಲ್ಪ ಟ್ಟಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.

ಐದು ರೂಪಾಯಿಗೆ ತಿಂಡಿ ಹಾಗೂ ಹತ್ತು ರೂಪಾಯಿಗೆ ಊಟ ನೀಡುವ ಮೂಲಕ ಬಡವರಿಗೆ ಆರೋಗ್ಯಕರ ಆಹಾರ ಸಿಗುವಂತೆ ವ್ಯವಸ್ಥೆ ಮಾಡಲಾಗಿದ್ದು, ಉಳಿದ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ. ಇದರಿಂದ ಕಾರ್ಮಿಕರು ಹಾಗೂ ಸಾಮಾನ್ಯ ಜನರು ಆರೋಗ್ಯವಾಗಿರಲು ಸಹಕಾರಿಯಾಗುತ್ತದೆ ಎಂದು ಸಚಿವರು ತಿಳಿಸಿದರು.

ಮೊದಲ ಹಂತದಲ್ಲಿ ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದ್ದು, ನಂತರ ಈ ಯೋಜನೆಯನ್ನು ರಾಜ್ಯದಾದ್ಯಂತ ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಗಳಿಗೆ ವಿಸ್ತರಿಸಲಾ ಗಿದೆ. ಭಟ್ಕಳ, ಜಾಲಿ, ಹೊನ್ನಾವರ, ಮಂಕಿ ಹಾಗೂ ಮುರುಡೇಶ್ವರ ಸೇರಿದಂತೆ ಹಲವೆಡೆ ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.

ಈ ಯೋಜನೆ ಸ್ಥಳೀಯರಿಗೆ ಮಾತ್ರ ಸೀಮಿತವಲ್ಲದೆ, ರಾಜ್ಯದ ಯಾವುದೇ ಭಾಗದಿಂದ ಬರುವವರು ಕಡಿಮೆ ದರದಲ್ಲಿ ಆಹಾರ ಪಡೆಯಬಹುದಾಗಿದೆ. ಹಣವಿರುವವರು ಹೋಟೆಲ್‌ಗಳನ್ನು ಹುಡುಕುವರು, ಆದರೆ ಬಡವರಿಗೆ ಇಂದಿರಾ ಕ್ಯಾಂಟೀನ್ ಆಶ್ರಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಪ್ರಸ್ತುತ ಸುಮಾರು 600 ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಂದು ಕೇಂದ್ರ ದಲ್ಲಿ ಹಲವರಿಗೆ ಉದ್ಯೋಗ ಸೃಷ್ಟಿಯಾಗಿದೆ. ಇದರಿಂದ ಒಂದೆಡೆ ನಿರುದ್ಯೋಗಿಗಳಿಗೆ ಕೆಲಸ, ಮತ್ತೊಂದೆಡೆ ಬಡವರಿಗೆ ಆಹಾರ ಭದ್ರತೆ ಒದಗಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಜಾಲಿ ಪ.ಪಂ ಅಧ್ಯಕ್ಷೆ ಅಫ್ಸಾ ಹುಝೈಫಾ ಕಾಜಿಯಾ, ಉಪಾಧ್ಯಕ್ಷ ಸೈಯ್ಯದ್ ಇಮ್ರಾನ್ ಲಂಕಾ, ಸದಸ್ಯರಾದ ಈಶ್ವರ್ ಮೊಗೇರ್, ಎನ್. ಮಂಜಪ್ಪ ಮುಅ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ರಾಜು ನಾಯ್ಕ, ನಾಮನಿರ್ದೇಶಿತ ಸದಸ್ಯ ಮುಹಮ್ಮದ್ ಯೂನೂಸ್ ರುಕ್ನುದ್ದೀನ್, ಕಾರ್ಯಪಾಲ ಅಭಿಯಂತರರು ಜಿಲ್ಲಾ ನಗರಾ ಭಿವೃದ್ಧಿಕೋಶ ಕಾರವಾರ ಕೆ.ಎಸ್. ಕುಮಾರ್, ಮತ್ತಿತರರು ಇದ್ದರು. ಶಿಕ್ಷಕ ನಾರಾಯಣ ನಾಯ್ಕ ನಿರೂಪಿಸಿದರು.

Tags

Indira Canteenimportantprojectfoodsecurity
share
ವಾರ್ತಾಭಾರತಿ
ವಾರ್ತಾಭಾರತಿ
Next Story
X