Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕಾಗೇರಿಗೆ ಹಿಂದುಳಿದ ವರ್ಗದ ಮತ ಬೇಡವೇ? |...

ಕಾಗೇರಿಗೆ ಹಿಂದುಳಿದ ವರ್ಗದ ಮತ ಬೇಡವೇ? | ʼಬ್ರಾಹ್ಮಣರ ಮತವಷ್ಟೇ ಸಾಕುʼ ಎನ್ನುವ ಹಾಡು ವೈರಲ್...!

“ಬ್ರಾಹ್ಮಣರಷ್ಟೇ ಮತ ಹಾಕಿದರೆ ಕಾಗೇರಿ ಪಂಚಾಯತ್ ಮೆಂಬರ್ ಆಗೋಕೂ ಆಗಲ್ಲ” ಎಂದ ಜನರು

ವಾರ್ತಾಭಾರತಿವಾರ್ತಾಭಾರತಿ26 April 2024 8:54 PM IST
share
ಕಾಗೇರಿಗೆ ಹಿಂದುಳಿದ ವರ್ಗದ ಮತ ಬೇಡವೇ? | ʼಬ್ರಾಹ್ಮಣರ ಮತವಷ್ಟೇ ಸಾಕುʼ ಎನ್ನುವ ಹಾಡು ವೈರಲ್...!

ಕಾರವಾರ : ಉತ್ತರ ಕನ್ನಡ ಲೋಕಸಭಾ ಚುನಾವಣೆಗೆ ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆಯೇ ಬಿಜೆಪಿಯಲ್ಲಿ ಗೊಂದಲವೊಂದು ಸೃಷ್ಟಿಯಾಗಿದೆ. ಈ ಬಾರಿ ಬ್ರಾಹ್ಮಣ ಸಮುದಾಯ ಒಗ್ಗಟ್ಟಾಗಿ ಬ್ರಾಹ್ಮಣ ಅಭ್ಯರ್ಥಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮತ ನೀಡಬೇಕು ಎಂದು ಹೇಳುವ ಶಾಸ್ತ್ರೀಯ ಸಂಗೀತ ಧಾಟಿಯ ಹಾಡೊಂದು ಶಿರಸಿ ಭಾಗದಲ್ಲಿ ವೈರಲ್‌ ಆಗಿದ್ದು, ಹಾಲಿ ಸಂಸದ ಅನಂತ ಕುಮಾರ್ ಹಗಡೆ ಬೆಂಬಲಿಗರಿಂದ ಟೀಕೆಗೆ ಗುರಿಯಾಗಿದೆ. ಮೊದಲೇ ʻಬ್ರಾಹ್ಮಣ ಪಕ್ಷಪಾತಿʼ ಎಂಬ ಹಣೆಪಟ್ಟಿಗೆ ಗುರಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಈ ವಿದ್ಯಮಾನವು ಮತ್ತಷ್ಟು ಹಿನ್ನೆಡೆಯುಂಟು ಮಾಡಿದೆ ಎನ್ನಲಾಗಿದೆ.

ಮಹಿಳೆಯೊಬ್ಬರು ಹಾಡಿರುವ 3.52 ನಿಮಿಷದ ಶಾಸ್ತ್ರೀಯ ಧಾಟಿಯ ಹಾಡನ್ನು ಈಗಾಗಲೇ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಂಬಲಿಗರು ಉತ್ತರ ಕನ್ನಡದ ನೂರಾರು ವಾಟ್ಸಾಪ್‌ ಗುಂಪುಗಳಲ್ಲಿ ವೈರಲ್‌ ಮಾಡಿದ್ದಾರೆ. ʻʻಯೋಚಿಸಿ ಮತ ಹಾಕಾವು ಬ್ರಾಹ್ಮಣರೆಲ್ಲ ಬಿಜೆಪಿ ಆಷ್ಟಾರಾವುʼʼ ಎಂದು ಆರಂಭವಾಗುವ ಗೀತೆ, ಬ್ರಾಹ್ಮಣ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಬಹುಮತದಿಂದ ಗೆಲ್ಲಿಸೋಣ ಎಂದು ಹೇಳುತ್ತದೆ. ಈ ಗೀತೆ ವೈರಲ್ ಆಗುತ್ತಿದ್ದಂತೆ, ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಬೆಂಬಲಿಗರು ಸಿಟ್ಟಿಗೆದ್ದಿದ್ದು, ನಿಮಗೆ ಹಿಂದುಳಿದ ವರ್ಗದವರ ಮತಗಳು ಬೇಡವೇ ಎಂದು ಬಹಿರಂಗವಾಗಿಯೇ ಪ್ರಶ್ನೆಯತ್ತಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿರುವ ಬ್ರಾಹ್ಮಣ ಸಮುದಾಯದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಹಿಂದುಳಿದ ವರ್ಗದ ಮರಾಠಾ ಸಮುದಾಯದ ಡಾ. ಅಂಜಲಿ ನಿಂಬಾಳ್ಕರ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.

ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಇದುವರೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಪರವಾಗಿ ಚುನಾವಣಾ ಪ್ರಚಾರಕ್ಕೆ ಇಳಿದಿಲ್ಲ ಮಾತ್ರವಲ್ಲ, ಅಭ್ಯರ್ಥಿ ಪರವಾಗಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಹೆಗಡೆ ಬೆಂಬಲಿಗರಲ್ಲಿ ಒಂದು ಗುಂಪು ಡಾ.ಅಂಜಲಿ ಅವರ ಪರವಾಗಿ ಕೆಲಸ ಮಾಡುತ್ತಿದ್ದರೆ, ಮತ್ತೊಂದು ಗುಂಪು ಈ ಚುನಾವಣೆಯಲ್ಲಿ ತಟಸ್ಥವಾಗಿರಲು ನಿರ್ಧರಿಸಿದೆ. ಬ್ರಾಹ್ಮಣರು ಮಾತ್ರ ಮತ ಹಾಕಿದರೆ ಕಾಗೇರಿಯವರು ಗ್ರಾಮ ಪಂಚಾಯತ್ ಮೇಂಬರ್ ಕೂಡ ಆಗಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಗೇರಿ ವಿರುದ್ಧ ಬಹುದೊಡ್ಡ ವಿರೋಧವೇ ನಡೆದಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X