Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕಾರವಾರ: ಐಎನ್‌ಎಸ್ ಮಾಲ್ವನ್ ಯುದ್ಧನೌಕೆ...

ಕಾರವಾರ: ಐಎನ್‌ಎಸ್ ಮಾಲ್ವನ್ ಯುದ್ಧನೌಕೆ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ22 July 2026 2:39 PM IST
share
ಕಾರವಾರ: ಐಎನ್‌ಎಸ್ ಮಾಲ್ವನ್ ಯುದ್ಧನೌಕೆ ಲೋಕಾರ್ಪಣೆ

ಕಾರವಾರ: ಭಾರತೀಯ ನೌಕಾಪಡೆಯ ಬಲವರ್ಧನೆಗೆ ಮತ್ತೊಂದು ಮೈಲಿಗಲ್ಲಾಗಿ 'ಐಎನ್‌ಎಸ್ ಮಾಲ್ವನ್' ಯುದ್ಧನೌಕೆಯು ಕಾರವಾರದ ಐಎನ್‌ಎಸ್ ಕದಂಬ ನೌಕಾನೆಲೆಯಲ್ಲಿ ಅಧಿಕೃತವಾಗಿ ನೌಕಾಪಡೆಗೆ ಸೇರ್ಪಡೆಗೊಂಡಿತು. ಮಾಹೆ ವರ್ಗದ ಎರಡನೇ ಆ್ಯಂಟಿ-ಸಬ್‌ಮರಿನ್ ವಾರ್‌ಫೇರ್ ಶ್ಯಾಲೋ ವಾಟರ್ ಕ್ರಾಫ್ಟ್ ಆಗಿರುವ ಈ ನೌಕೆಯನ್ನು ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಬುಧವಾರ ನೌಕಾಪಡೆಗೆ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಾಣಗೊಂಡ ಈ ಯುದ್ಧನೌಕೆಯು ಕರಾವಳಿ ಕಣ್ಗಾವಲು, ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆ ಹಾಗೂ ಸಮುದ್ರ ಭದ್ರತೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲಿದೆ. ಜೊತೆಗೆ, ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಯಲ್ಲಿ ಮೂರು ಸೇನಾ ಪಡೆಗಳ ಸಮನ್ವಯತೆ ಹೆಚ್ಚಲಿದ್ದು, ಸುರಕ್ಷಿತ ಕಡಲ ವ್ಯಾಪಾರಕ್ಕೆ ಇದು ಪೂರಕವಾಗಲಿದೆ ಎಂದರು.

ಕಾರವಾರದ ನೌಕಾನೆಲೆಯಲ್ಲಿ ಇದೇ ಮೊದಲ ಬಾರಿಗೆ ಯುದ್ಧನೌಕೆಯೊಂದರ ಲೋಕಾರ್ಪಣೆ ನೆರವೇರಿರುವುದು ವಿಶೇಷವಾಗಿದ್ದು, ಪಶ್ಚಿಮ ನೌಕಾ ಕಮಾಂಡ್‌ನ ವೈಸ್ ಅಡ್ಮಿರಲ್ ಸಂಜಯ್ ವತ್ಸಾಯನ್ ಅವರು ಇದನ್ನು 'ಆತ್ಮನಿರ್ಭರ ಭಾರತ' ಪರಿಕಲ್ಪನೆಗೆ ಅತ್ಯುತ್ತಮ ಉದಾಹರಣೆ ಎಂದು ಬಣ್ಣಿಸಿದರು.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿರುವ ಈ ನೌಕೆಯಲ್ಲಿ ಶೇ. 80ಕ್ಕೂ ಹೆಚ್ಚು ಸ್ವದೇಶಿ ಉಪಕರಣಗಳನ್ನು ಬಳಸಲಾಗಿದೆ. 78.8 ಮೀಟರ್ ಉದ್ದ ಹಾಗೂ 1,150 ಟನ್ ತೂಕ ಹೊಂದಿರುವ ಈ ನೌಕೆಯು 30 ಎಂಎಂ ನೇವಲ್ ಗನ್, ಟಾರ್ಪಿಡೊ ಲಾಂಚರ್‌ಗಳು, ರಾಕೆಟ್ ಲಾಂಚರ್‌ಗಳು, 'ಅಭಯ್' ಸೋನಾರ್ ಹಾಗೂ ಬಿಇಎಲ್ ಅಭಿವೃದ್ಧಿಪಡಿಸಿದ ಅತ್ಯಾಧುನಿಕ ಯುದ್ಧ ನಿರ್ವಹಣಾ ವ್ಯವಸ್ಥೆಗಳನ್ನು ಹೊಂದಿದೆ.

ಮಹಾರಾಷ್ಟ್ರದ ಐತಿಹಾಸಿಕ ಕರಾವಳಿ ಪಟ್ಟಣ 'ಮಾಲ್ವನ್' ಹೆಸರಿಡಲಾದ ಈ ನೌಕೆಯು ಛತ್ರಪತಿ ಶಿವಾಜಿ ಮಹಾರಾಜರ ಕಡಲ ಪರಂಪರೆಗೆ ಗೌರವ ಸಲ್ಲಿಸುತ್ತದೆ. ನೌಕೆಯ ಚಿಹ್ನೆಯಲ್ಲಿ ಧೈರ್ಯ ಮತ್ತು ಚುರುಕುತನದ ಸಂಕೇತವಾದ 'ಬಾಘ್ ನಖ್' (ಹುಲಿಯ ಉಗುರು) ಬಳಸಲಾಗಿದೆ.

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ನೌಕೆಯ ಕಮಾಂಡರ್ ಪ್ರವೀಣಕುಮಾರ್ ತಿವಾರಿ, ಕೊಚ್ಚಿ ಶಿಪ್‌ಯಾರ್ಡ್‌ನ ವ್ಯವಸ್ಥಾಪಕ ಜೋಸ್ ವಿ.ಜೆ ಸೇರಿದಂತೆ ನೌಕಾಪಡೆ ಹಾಗೂ ರಕ್ಷಣಾ ಸಚಿವಾಲಯದ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






Tags

KarwarINS'Malvanwarship
share
ವಾರ್ತಾಭಾರತಿ
ವಾರ್ತಾಭಾರತಿ
Next Story
X