ಕಾರವಾರ | ಟ್ಯಾಂಕರ್ ಉರುಳಿ ಮಿಥೇನ್ ಗ್ಯಾಸ್ ಸೋರಿಕೆ: ಸಾರ್ವಜನಿಕರು, ವಾಹನ ಓಡಾಟಕ್ಕೆ ನಿರ್ಬಂಧ

ಕಾರವಾರ, ನ.18: ರಾಷ್ಟ್ರೀಯ ಹೆದ್ದಾರಿ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ನವಗದ್ದೆ ಸಮೀಪ ಮಿಥೇನ್ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದ ಘಟನೆ ಮಂಗಳವಾರ ನಡೆದಿದೆ.
ಘಟನೆಯಿಂದಾಗಿ ಟ್ಯಾಂಕರ್ನಲ್ಲಿರುವ ಗ್ಯಾಸ್ ಸೋರಿಕೆಯಾಗುತ್ತಿದ್ದು, ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಟ್ಯಾಂಕರ್ ತೆರವುಗೊಳಿಸುವವರೆಗೆ ಅಥವಾ ಮುಂದಿನ ಆದೇಶದವರೆಗೆ ಸ್ಥಳದ 1 ಕಿ.ಮೀ. ವ್ಯಾಪ್ತಿಯೊಳಗೆ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ/ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರ ಓಡಾಟ, ವಾಹನಗಳ ಓಡಾಟ, ನಿಲುಗಡೆ ನಿರ್ಬಂಧಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Next Story





