Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. Karwar | ರಸ್ತೆ-ಸೇತುವೆ ಇಲ್ಲದೆ...

Karwar | ರಸ್ತೆ-ಸೇತುವೆ ಇಲ್ಲದೆ ದೊಡ್ಡಹಿತ್ತಲ್ ಜನರ ಬದುಕು ದುಸ್ತರ

ವಾರ್ತಾಭಾರತಿವಾರ್ತಾಭಾರತಿ4 July 2026 1:58 PM IST
share
Karwar | ರಸ್ತೆ-ಸೇತುವೆ ಇಲ್ಲದೆ ದೊಡ್ಡಹಿತ್ತಲ್ ಜನರ ಬದುಕು ದುಸ್ತರ
50ಕ್ಕೂ ಹೆಚ್ಚು ಕುಟುಂಬಗಳಿಗೆ ಮೂಲಸೌಕರ್ಯ ಕೊರತೆ

ಕಾರವಾರ: ವಿಶ್ವದ ವಿವಿಧ ದೇಶಗಳಿಗೆ ಗುಣಮಟ್ಟದ ವೀಳ್ಯದೆಲೆ ರಫ್ತು ಮಾಡುವ ಮೂಲಕ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಹಿತ್ತಲ್ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ.

ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದರೂ, ಗ್ರಾಮದ 50ಕ್ಕೂ ಹೆಚ್ಚು ಕುಟುಂಬಗಳಿಗೆ ಸಾರ್ವಜನಿಕ ರಸ್ತೆ ಹಾಗೂ ಹೊಳೆ ದಾಟಲು ಸುರಕ್ಷಿತ ಸೇತುವೆ ಇಲ್ಲ. ಪರಿಣಾಮ, ನಿವಾಸಿಗಳು ತಮ್ಮ ಮನೆಗಳಿಗೆ ತೆರಳಲು ಇಂದಿಗೂ ಖಾಸಗಿ ಜಮೀನಿನ ಮೂಲಕವೇ ಸಂಚರಿಸಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ಮಳೆಗಾಲ ಆರಂಭವಾದರೆ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತದೆ. ಸಿದ್ದಾಪುರ ಭಾಗದಲ್ಲಿ ಭಾರೀ ಮಳೆಯಾದಾಗ ಭಾಸ್ಕೇರಿ ಹೊಳೆ ಉಕ್ಕಿ ಹರಿದು ಗ್ರಾಮ ಜಲಾವೃತವಾಗುತ್ತದೆ. ಶಾಲಾ ಮಕ್ಕಳು, ಮಹಿಳೆಯರು ಹಾಗೂ ಉದ್ಯೋಗಸ್ಥರು ಸೊಂಟದಿಂದ ಕುತ್ತಿಗೆಯವರೆಗಿನ ನೀರಿನಲ್ಲಿ ಜೀವದ ಹಂಗು ತೊರೆದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಇತ್ತೀಚೆಗೆ ಗ್ರಾಮದ ನಿವಾಸಿಯೊಬ್ಬರ ಅಂತ್ಯಕ್ರಿಯೆ ವೇಳೆ ಶವಪೆಟ್ಟಿಗೆಯನ್ನು ಕುತ್ತಿಗೆಯವರೆಗಿನ ನೀರಿನಲ್ಲಿ ಹೊತ್ತು ಸಾಗಿದ ದೃಶ್ಯ ಸ್ಥಳೀಯರ ನೋವನ್ನು ಮತ್ತಷ್ಟು ಬಿಚ್ಚಿಟ್ಟಿತ್ತು. ನೆರೆ ಬಂದಾಗಲೆಲ್ಲ ದೋಣಿಯ ಮೂಲಕವೇ ಸುರಕ್ಷಿತ ಸ್ಥಳಗಳಿಗೆ ತೆರಳುವುದು ಇಲ್ಲಿನ ಜನರ ವಾರ್ಷಿಕ ಸಂಕಷ್ಟವಾಗಿದೆ.

ಇಪ್ಪತ್ತು ವರ್ಷಗಳಿಗೂ ಹೆಚ್ಚು ಕಾಲ ಬಳಸುತ್ತಿರುವ ದಾರಿಯು ಸಾರ್ವಜನಿಕ ಹಕ್ಕಾಗುತ್ತದೆ ಎಂಬುದನ್ನು ಹಾಗೂ ಕಾಲುದಾರಿ ನಾಗರಿಕರ ಮೂಲಭೂತ ಹಕ್ಕು ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದ್ದರೂ, ದೊಡ್ಡಹಿತ್ತಲ್ ನಿವಾಸಿಗಳ ರಸ್ತೆ ಮತ್ತು ಸೇತುವೆ ನಿರ್ಮಾಣದ ಬೇಡಿಕೆ ಮಾತ್ರ ಇನ್ನೂ ಈಡೇರಿಲ್ಲ.

ಪ್ರತಿ ಮಳೆಗಾಲದಲ್ಲೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭೇಟಿ ನೀಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡುತ್ತಿದ್ದರೂ, ನೆರೆ ಇಳಿದ ಬಳಿಕ ಭರವಸೆಗಳೂ ಮರೆಯಾಗುತ್ತಿವೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಳೆ ಹಾನಿ ಪರಿಹಾರಕ್ಕೆ ಬಿಡುಗಡೆಯಾಗುವ ಅನುದಾನವನ್ನು ಬಳಸಿಕೊಂಡು ಹಂತ ಹಂತವಾಗಿ ಕಾಲುದಾರಿ ಹಾಗೂ ಕಿರುಸೇತುವೆ ನಿರ್ಮಿಸಿದರೆ ನೂರಾರು ಜನರ ಜೀವಭಯಕ್ಕೆ ತೆರೆ ಬೀಳಲಿದೆ. ಈ ಭಾಗದ ಜನರ ಮೂಲಭೂತ ಹಕ್ಕುಗಳನ್ನು ಸರ್ಕಾರ ಶೀಘ್ರದಲ್ಲೇ ಖಾತ್ರಿಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Tags

bridgeKarwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X