Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ವಾಲ್ಮಿಕಿ ಮಹಾರ್ಷಿ ಜೀವನ...

ವಾಲ್ಮಿಕಿ ಮಹಾರ್ಷಿ ಜೀವನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಲಿ: ಸಚಿವ ಮಾಂಕಾಳ್ ವೈದ್ಯ

ವಾರ್ತಾಭಾರತಿವಾರ್ತಾಭಾರತಿ28 Oct 2023 9:35 PM IST
share
ವಾಲ್ಮಿಕಿ ಮಹಾರ್ಷಿ ಜೀವನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಲಿ: ಸಚಿವ ಮಾಂಕಾಳ್ ವೈದ್ಯ

ಭಟ್ಕಳ: ಮಹಾರ್ಷಿ ವಾಲ್ಮಿಕಿಯ ಜೀವನ ವಿದ್ಯಾರ್ಥಿ ಸಮುದಾಯಕ್ಕೆ ಮಾರ್ಗದರ್ಶಿಯಾಗಬೇಕು ಎಂದು ಉ.ಕ.ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಮಾಂಕಾಳ್ ವೈದ್ಯ ಹೇಳಿದರು.

ಅವರು ಭಟ್ಕಳ ಅರ್ಬನ್ ಬ್ಯಾಂಕ್ ಹಫಿಸ್ಕಾ ಸಭಾ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಭಟ್ಕಳ, ಪಟ್ಟಣ ಪಂಚಾಯತ್ ಜಾಲಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾ ಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆದರ್ಶ ಪುರುಷರ ಜೀವನ ಚರಿತ್ರೆ ಪಠ್ಯ ಪುಸ್ತಕದಲ್ಲಿ ಅಳವಡಿಸಿದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆ ಯುತ್ತದೆ. ಹಿಂದೆ ನಾವು ಕಲಿಯುತ್ತಿರುವಾಗ ಮಹರ್ಷಿ ವಾಲ್ಮೀಕಿ, ರಾಮಾಯಣ, ಮಹಾಭಾರತ ಸೇರಿದಂತೆ ಚರಿತ್ರೆಯ ಪಾಠ ಇತ್ತು ಎಂದು ರಾಜ್ಯ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಬದಲಾದ ಸಂದರ್ಭದಲ್ಲಿ ತಾವು ಜೀವನ ನಿರ್ವಹಣೆಗಾಗಿ ಅನಿವಾರ್ಯವಾಗಿ ಅನುಸರಿಸಿದ ಒಂದು ಮಾರ್ಗದಲ್ಲಿನ ಅಪಕೃ ತ್ಯದ ಅರಿವಾಗಿ ಅವರಲ್ಲಿ ಆದ ಬದಲಾವಣೆ ಪ್ರತಿಯೊಬ್ಬರ ಜೀವನದಲ್ಲಿ ಒಂದು ಪಾಠವಾಗಿದೆ. ಅದು ಪಠ್ಯದಲ್ಲಿದ್ದರೆ ವಿದ್ಯಾರ್ಥಿಗಳಿಗೆ ಜೀವನ ಪಾಠವಾಗುತ್ತಿತ್ತು ಎಂದು ತಮ್ಮ ವಿದ್ಯಾರ್ಥಿ ಜೀವನದಲ್ಲಿ ವಾಲ್ಮೀಕಿ ಮಹರ್ಷಿಗಳ ಪಠ್ಯ ಇದ್ದು ದನ್ನು ನೆನೆಸಿಕೊಂಡರು. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಇತಿಹಾಸ ಪಠ್ಯವಿಲ್ಲದೇ ಇರುವುದು ದೊಡ್ಡ ತಪ್ಪು ಎಂದ ಅವರು ಪ್ರತಿ ಹಂತದಲ್ಲಿಯೂ ಕೂಡಾ ವಿದ್ಯಾರ್ಥಿಗಳಿಗೆ ಇತಿಹಾಸದ ಪರಿಚಯ ಮಾಡಿಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪ ವಿಭಾಗಾಧಿಕಾರಿ ಡಾ. ನಯನಾ ಎನ್., ಮಾತನಾಡಿ, ಸಾಮಾನ್ಯ ಬೇಟೆಗಾರರ ಕುಟುಂಬದಲ್ಲಿ ಜನಸಿ ದರೋಡೆಕೋರನಾದ ವ್ಯಕ್ತಿಯೋರ್ವ ಬದಲಾವಣೆ ಹೊಂದಿ ಮಹರ್ಷಿಯಾಗಬಹುದು ಎನ್ನುವುದನ್ನು ಸಮಾಜಕ್ಕೆ ತೊರಿಸಿಕೊಟ್ಟ ಆದರ್ಶ ವ್ಯಕ್ತಿಗಳು ನಮ್ಮ ಜೀವನದಲ್ಲಿ ಆದರ್ಶಪ್ರಾಯರು. ತಪ್ಪು ಮಾಡಿದವರು ಅವಕಾಶ ವಿದ್ದಾಗ ಬದಲಾಗಬೇಕು. ಜೀವನದಲ್ಲಿ ತಪ್ಪು ಮಾಡದವರಿಲ್ಲ ಆದರೆ ಅದನ್ನು ತಿದ್ದಿಕೊಂಡು ಬದಲಾಗುವುದ ಮುಖ್ಯ ಎಂದೂ ಹೇಳಿದರು.

ಕಾರ್ಯಕ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಾಧ್ಯಾಪಕ ಸೋಮಯ್ಯ ಟಿ. ಗೊಂಡ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಡಿ.ವೈ.ಎಸ್.ಪಿ. ಶ್ರೀಕಾಂತ ಕೆ., ತಹಶೀಲ್ದಾರ್ ತಿಪ್ಪೇಸ್ವಾಮಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಂಜಪ್ಪ ಎನ್., ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗೀತಾ ಹೆಗಡೆ ಸ್ವಾಗತಿಸಿದರು. ಶಿಕ್ಷಕ ಸುರೇಶ ಮುರ್ಡೇಶ್ವರ ನಿರ್ವಹಿಸಿದರು. ಪುರಸಭಾ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X