Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಬಂದರು ನಿರ್ಮಾಣ ಕೈಬಿಡುವಂತೆ ಬೃಹತ್...

ಬಂದರು ನಿರ್ಮಾಣ ಕೈಬಿಡುವಂತೆ ಬೃಹತ್ ಪ್ರತಿಭಟನೆ; ಹಲವರು ಪೊಲೀಸ್​ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ25 Feb 2025 2:30 PM IST
share
ಬಂದರು ನಿರ್ಮಾಣ ಕೈಬಿಡುವಂತೆ ಬೃಹತ್ ಪ್ರತಿಭಟನೆ; ಹಲವರು ಪೊಲೀಸ್​ ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಂದರು ರಸ್ತೆ ಸರ್ವೆ ವಿರೋಧಿಸಿ ಸ್ಥಳೀಯರು, ಹಾಗೂ ಮೀನುಗಾರರು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದು, ಬಂದರು ನಿರ್ಮಾಣವನ್ನು ಕೈ ಬಿಡುವಂತೆ ಕೆಲವರು ಸಮುದ್ರಕ್ಕೆ ಹಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊನ್ನಾವರ ಕಾಸರಕೋಡಿನಲ್ಲಿ‌ಯೂ ಬಂದರು ನಿರ್ಮಾಣ‌ ಸಂಬಂಧ ಸಂಪರ್ಕ ರಸ್ತೆಗೆ ಸಮೀಕ್ಷೆ‌ ನಡೆಸಲು ಅನುಕೂಲವಾಗುವಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಕೆ.‌ಲಕ್ಷ್ಮೀಪ್ರಿಯಾ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಮಾಡಿದ್ದರು. ಆದರೆ ಆದೇಶವನ್ನು ಲೆಕ್ಕಿಸದೆ ಇದೀಗ ಸ್ಥಳೀಯರು ಶಾಲಾ ಮಕ್ಕಳೊಂದಿಗೆ ಸೇರಿ ಸರ್ವೆ ಕಾರ್ಯ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ.

ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಹತ್ತಿರದಲ್ಲಿರುವ ಹಿರೇಮಠ ಸ್ಮಶಾನದಿಂದ ಕಾಸರಕೋಡ ಗ್ರಾಮದಲ್ಲಿ ಸಮುದ್ರಗುಂಟ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಬಂದರು ಅಭಿವೃದ್ಧಿ ಯೋಜನಾ ಸ್ಥಳದವರೆಗೆ ಹೋಗುವ ರಸ್ತೆ ಕಾಮಗಾರಿಯ ಸರ್ವೆ ಕಾರ್ಯ ನಡೆಯುವ ಸುತ್ತಲಿನ ಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ಫೆಬ್ರವರಿ 25 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿತ್ತು. ಆದರೆ ಆದೇಶದ ನಡುವೆಯೂ ಸ್ಥಳೀಯರು‌ ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಸರ್ವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಶಾಲಾ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆ ಕೈಗೊಂಡಿದ್ದಾರೆ.

ವಿರೋಧದ ನಡುವೆಯೂ ಟೊಂಕಾದಲ್ಲಿ ವಾಣಿಜ್ಯ ಬಂದರಿಗೆ ರಸ್ತೆ ನಿರ್ಮಾಣಕ್ಕೆ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಬಿಗಿ ಪೊಲೀಸ್ ಬಂದೋ ಬಸ್ತ್ ನಡುವೆ ಸರ್ವೆ ಅಧಿಕಾರಿಗಳು ಗಡಿ ಗುರುತು ಮಾಡುತ್ತಿದ್ದು, ಸ್ಥಳೀಯರು ಪ್ರತಿಭಟನೆ ಮುಂದುವರಿಸಿದ್ದರಿಂದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು ಎರಡು ಬಸ್ ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲಾಗಿದೆ. ಬಂಧಿತರನ್ನು ಬಿಡದೆ ಇದ್ದಲ್ಲಿ ಸಮುದ್ರಕ್ಕೆ ಹಾರಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ ಅವರು ವಾಣಿಜ್ಯ ಬಂದರು ಸರ್ವೆ ಕೆಲಸ ನಡೆಯುವ ಸ್ಥಳಕ್ಕೆ ಬಂದು ಮೀನುಗಾರರಿಗೆ ರಕ್ಷಣೆ ನೀಡಬೇಕು. ನಾಲ್ಕು ಗಂಟೆ ಒಳಗೆ ಬಂಧಿತರನ್ನು ಬಿಡುಗಡೆ ಮಾಡಲು ಕ್ರಮ‌ಕೈಗೊಳ್ಳದೆ ಇದ್ದಲ್ಲಿ ಸಚಿವರ ಹೆಸರು ಬರೆದಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವಿದ್ಯಾರ್ಥಿನಿ ಅಪೇಕ್ಷಾ ಆರ್. ತಾಂಡೇಲ್ ಆಕ್ರೋಶ ಹೊರಹಾಕಿದ್ದಾರೆ.

ಕಂಪನಿಗೆ ಪೊಲೀಸರು, ಅಧಿಕಾರಿಗಳ ರಕ್ಷಣೆ ನೀಡಲಾಗಿದೆ. ಮೀನುಗಾರರಿಗೆ ಸಚಿವರ ರಕ್ಷಣೆ ಬೇಕು. ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನಿಮ್ಮ ಜೊತೆ ನಾನು ಸದಾ ಇದ್ದೇನೆ ಎಂದು ಮತ ಪಡೆದಿದ್ದ ಅವರು ಈಗ ಇಲ್ಲ. ಕೂಡಲೇ ಸಚಿವರು ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X