ಮುಹಮ್ಮದ್ ರಝಾ ಮಾನ್ವಿ AIITA ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮರು ಆಯ್ಕೆ

ನವದೆಹಲಿ: ಅಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ (AIITA) ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಭಟ್ಕಳದ ನ್ಯೂ ಶಮ್ಸ್ ಪ್ರೌಢ ಶಾಲೆಯ ಹಿರಿಯ ಶಿಕ್ಷಕ ಹಾಗೂ ಪತ್ರಕರ್ತ ಮುಹಮ್ಮದ್ ರಝಾ ಮಾನ್ವಿ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಯಾಸೀನ್ ಭಿಕ್ಬಾ ಮರು ಆಯ್ಕೆಯಾದರು.
ಡಿಸೆಂಬರ್ 26 ಮತ್ತು 27 ರಂದು ದೆಹಲಿಯ AIITA ಕೇಂದ್ರ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಮಾನ್ವಿಯವರನ್ನು 2025-2028 ಅವಧಿಗೆ ಸರ್ವಾನುಮತದಿಂದ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ, ಜಮಾಅತ್-ಎ-ಇಸ್ಲಾಮಿ ಹಿಂದ್ ರಾಷ್ಟ್ರೀಯ ಅಧ್ಯಕ್ಷ ಸೈಯದ್ ಸಾದುಲ್ಲಾ ಹುಸೇನಿ, ಪ್ರಧಾನ ಕಾರ್ಯದರ್ಶಿ ಟಿ. ಆರಿಫ್, AIITA ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ರಹೀಂ ಶೇಖ್, ಪ್ರಧಾನ ಕಾರ್ಯದರ್ಶಿ ಮುಖ್ತಾರ್ ಅಹ್ಮದ್ ಕೊತ್ವಾಲ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Next Story





