ಮುಂಡಗೋಡ | ಮೀಟರ್ ಬಡ್ಡಿ ದಂಧೆ ವಿರುದ್ಧ ಕಾರ್ಯಾಚರಣೆ: ಆರೋಪಿಗಳು ಪೊಲೀಸ್ ವಶಕ್ಕೆ

ಮುಂಡಗೋಡ: ಅನಧಿಕೃತ ಮೀಟರ್ ಬಡ್ಡಿ ದಂಧೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ ಸೋಮವಾರ ಮಧ್ಯರಾತ್ರಿಯಿಂದ ಕಾರ್ಯಾಚರಣೆ ಆರಂಭಿಸಲಾಗಿದೆ. ಶಂಕಿತ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶಿರಸಿ ಗ್ರಾಮೀಣ, ನಗರ ಠಾಣೆ, ಯಲ್ಲಾಪುರ, ರಾಮನಗರ ಪೊಲೀಸ್ ತಂಡಗಳು, ಸಶಸ್ತ್ರ ಮೀಸಲು ಪಡೆಯ ತುಕಡಿಯೊಂದಿಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಕೆಲವು ಆರೋಪಿತರ ಮನೆಗಳ ಮೇಲೆ ದಾಳಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
Next Story