Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ...

ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ

ಲಂಚ ಸ್ವೀಕರಿಸುತ್ತಿದ್ದ ಆರೋಪ

ವಾರ್ತಾಭಾರತಿವಾರ್ತಾಭಾರತಿ15 Nov 2024 6:57 PM IST
share
ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ

ಭಟ್ಕಳ: ಲಂಚ ಸ್ವೀಕರಿಸುತ್ತಿರುವ ವೇಳೆ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಒಳಚರಂಡಿ ಜೋಡಣೆಗೆ 50 ಸಾವಿರ ರೂ. ಲಂಚ ಪಡೆಯುವಾಗಲೇ ನೀಲಕಂಠ ಮೇಸ್ತಾ, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಪುರಸಭೆ ಕಚೇರಿಯಲ್ಲಿ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾರನ್ನು ಬೆಳ್ಳಿಗ್ಗೆಯಿಂದ ಸಂಜೆ ತನಕ ವಿಚಾರಣೆ ನಡೆಸಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

ಮೊಹ್ಮದ್ ಇದ್ರಿಸ್ ಮೋಹತೇಷಾಮ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಶುಕ್ರವಾರ ಕಾರವಾರ ಲೋಕಾಯುಕ್ತ ಎಸ್ಪಿ ಕುಮಾರ ಚಂದ್ರ ಹಾಗೂ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ವಿನಾಯಕ ಬಿಲ್ಲವ ನೇತೃತ್ವದಲ್ಲಿ ದಾಳಿ ಮಾಡಲಾ ಗಿದೆ. ಒಳಚರಂಡಿ ಜೋಡಣೆ ವಿಚಾರದಲ್ಲಿ ನೀಲಕಂಠ ಮೇಸ್ತಾ ಲಂಚ ಸ್ವೀಕರಿಸುತ್ತಿದ್ದರು. ದೂರುದಾರ ನೀಡಿದ ಹೇಳಿಕೆ ಪ್ರಕಾರ ನೀಲಕಂಠ ಮೇಸ್ತಾ ಒಳಚರಂಡಿ ಜೋಡಣೆಗೆ ಲಂಚಕ್ಕಾಗಿ ಬೇಡಿಕೆಯಿಟ್ಟಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿದ ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಅವರು, ನೀಲಕಂಠ ಮೇಸ್ತಾ ಲಂಚ ಪಡೆಯುವ ವಿಚಾರದಲ್ಲಿ ಮೋಹತೇಷಾಮ್‌ ಕಾರವಾರ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರುದಾರ ಸಂಬಂಧಿಕರೋರ್ವರ 20 ಗುಂಟೆ ಜಾಗ ಭಟ್ಕಳದ ಸೂಸಗಡಿಯಲ್ಲಿದ್ದು ಸದ್ಯ ಅವರು ಚೆನೈಯಲ್ಲಿ ಕೆಲಸ ಮಾಡುತ್ತಿದ್ದರು. ಅವರು 2003 ರಲ್ಲಿ ಮನೆ ಕಟ್ಟಲು ಅನುಮತಿ ಪಡೆದುಕೊಂಡಿದ್ದರು. ಆದರೆ ಆ ವೇಳೆಯಲ್ಲಿ ಮನೆ ಕಟ್ಟಲು ಸಾಧ್ಯವಾಗದ ಕಾರಣ ಅದನ್ನು ಮುಂದೂಡಿದ್ದರು. ಬಳಿಕ 2015ಕ್ಕೆ ಮನೆ ಕೆಲಸ ಪೂರ್ಣಗೊಳಿಸಿದ್ದರು. ಆದರೆ ಮನೆಯಲ್ಲಿ ವಾಸವಾಗಿರಲಿಲ್ಲ. ಬಳಿಕ ಈ ವರ್ಷ ಜುಲೈ ತಿಂಗಳಲ್ಲಿ ನಾವು ಮನೆಯಲ್ಲಿ ವಾಸ ಮಾಡುತ್ತೇವೆ. ಪುರಸಭೆಯವರಿಂದ ಫಾಮ್ 3 ಪಡೆದುಕೊಳ್ಳುವಂತೆ ಮೋಹತೇಷಾಮ್ ಬಳಿ ಹೇಳುತ್ತಾರೆ. ಬಳಿಕ ಇವರು ತಮ್ಮ ಸ್ನೇಹಿತ‌ ಶಕೀಲ್ ಮೋಹತೇಷಾಮ್‌ ಎಂಬವರು ಮುಖ್ಯಾಧಿಕಾರಿ ಬಳಿ ತೆರಳಿ ವಿಚಾರಿಸಿಕೊಂಡು ಫಾಮ್ 3 ಗೆ ಅರ್ಜಿ ಹಾಕುವಂತೆ ಹೇಳುತ್ತಾರೆ.

ಬಳಿಕ ಶಕೀಲ್ ಅರ್ಜಿ ನೀಡಿ ಮುಖ್ಯಾಧಿಕಾರಿ ಬಳಿ ವಿಚಾರಿಸಿದಾಗ ಅನೇಕ ವರ್ಷದಿಂದ ತೆರಿಗೆ ತುಂಬದೇ ಬಾಕಿ ಇರುವುದರಿಂದ ತೆರಿಗೆ ಮತ್ತು ದಂಡ ತುಂಬಿದರೆ ಫಾಮ್ 3 ಸಿಗುತ್ತದೆ ಎಂದು ಹೇಳಿದ್ದಾರೆ. ನಂತರ ಜುಲೈ 21ಕ್ಕೆ ಹೋಗಿ ಎಷ್ಟು ಹಣ ನೀಡಬೇಕು ಎಂದು ಕೇಳಿದಾಗ 2 ಲಕ್ಷ ಕೊಡಿ ಎಂದು ಪುರಸಭೆ ಮುಖ್ಯಾಧಿಕಾರಿ ಹೇಳಿದ್ದರು. ನಂತರ ದೂರುದಾರರು ತಮ್ಮ ಸಂಬಂಧಿಕರ ಬಳಿ ಹೇಳಿದಾಗ ಹಣ ನೀಡುವಂತೆ ಹೇಳಿದ್ದರು. ಬಳಿಕ ಶಕೀಲ್ ಬಳಿ 2 ಲಕ್ಷ ಕೊಟ್ಟು ಕಳುಹಿಸುತ್ತಾರೆ. ನಂತರ ಮುಖ್ಯಾಧಿಕಾರಿ ಹಣ ತೆಗೆದುಕೊಂಡು ಮನೆಗೆ ಬರಲು ತಿಳಿಸಿದ್ದರು. 2 ಲಕ್ಷ ಹಣ ಪಡೆದುಕೊಂಡ ಮುಖ್ಯಾಧಿಕಾರಿ 90,068 ರೂ. ರಶೀದಿ ನೀಡಿ. ಉಳಿದ ಮೊತ್ತವನ್ನು ತಾವೇ ಇಟ್ಟುಕೊಂದಿದ್ದರು. ಆದರೂ ಕೂಡ ಆ ವೇಳೆ ಫಾಮ್ 3 ನೀಡಿರಲಿಲ್ಲ. ಇಷ್ಟಾದರೂ ಒಂದು ವರ್ಷದಿಂದ ಫಾಮ್ 3 ನೀಡದೆ ಯುಜಿಡಿ ಕಾಮಗಾರಿ ಕೂಡ ನಡೆಸದೆ ಇರುವುದರಿಂದ ನ.12 ರಂದು ಶಕೀಲ್ ಪುನಃ ಮುಖ್ಯಾಧಿಕಾರಿ ಬಳಿ ಬಂದು ಮನವಿ ಮಾಡಿಕೊಳ್ಳುತ್ತಾರೆ. ಆ ವೇಳೆ ಮತ್ತೆ ಮುಖ್ಯಾಧಿಕಾರಿ 1 ಲಕ್ಷಕ್ಕೆ ಬೇಡಿಕೆ ಇಟ್ಟು ಸದ್ಯ 50 ಸಾವಿರ ನೀಡಿ ಬಳಿಕ ತಕ್ಷಣ ನಿಮ್ಮ ಕೆಲಸ ಮಾಡಿಕೊಡುತ್ತೇನೆ ಎಂದು ಹೇಳಿದ್ದರು. ಮತ್ತೆ ಲಂಚ ನೀಡಲು ಇಷ್ಟವಿಲ್ಲದ ಕಾರಣ ಗುರುವಾರ ಕಾರವಾರದ ಕಚೇರಿಗೆ ಬಂದು ದೂರು ನೀಡಿದ್ದರು. ಅದರಂತೆ ನಾವು ಬೆಳ್ಳಿಗ್ಗೆ ಬಂದು ಅವರು ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ದಾಳಿ ಮಾಡಿದಾಗ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಎಸ್ಪಿ ಕುಮಾರ ಚಂದ್ರ ಹಾಗೂ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ವಿನಾಯಕ ಬಿಲ್ಲವ ನೇತೃತ್ವದಲ್ಲಿ ಪ್ರಸಾದ ಪನ್ನೆಕರ ಹಾಗೂ 14 ಜನ ಪಿಐ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X