Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಸರ್ಕಾರಿ ಉರ್ದು ಶಾಲೆಗಳಲ್ಲಿ ಸಮರ್ಪಕ ಮೂಲ...

ಸರ್ಕಾರಿ ಉರ್ದು ಶಾಲೆಗಳಲ್ಲಿ ಸಮರ್ಪಕ ಮೂಲ ಸೌಕರ್ಯಕ್ಕಾಗಿ ಒತ್ತಾಯಿಸಿ ಐಟಾದಿಂದ ಅಲ್ಪಸಂಖ್ಯಾತ ಆಯೋಗಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ29 Nov 2023 7:01 PM IST
share
ಸರ್ಕಾರಿ ಉರ್ದು ಶಾಲೆಗಳಲ್ಲಿ ಸಮರ್ಪಕ ಮೂಲ ಸೌಕರ್ಯಕ್ಕಾಗಿ ಒತ್ತಾಯಿಸಿ ಐಟಾದಿಂದ ಅಲ್ಪಸಂಖ್ಯಾತ ಆಯೋಗಕ್ಕೆ ಮನವಿ

ಭಟ್ಕಳ: ರಾಜ್ಯದ ಸರ್ಕಾರಿ ಉರ್ದು ಶಾಲೆಗಳು ಮೂಲಸೌಕರ್ಯ, ಶಿಕ್ಷಕರ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಸರ್ಕಾರ ಈ ಬಗ್ಗೆ ಗಮನ ಹರಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇನ್ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಮನವಿ ಅರ್ಪಿಸಿತು.

ಮಂಗಳವಾರ ಸಂಜೆ ಭಟ್ಕಳದ ಪ್ರವಾಸಿ ಬಂಗ್ಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ರನ್ನು ಭೇಟಿಯಾದ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಉರ್ದು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಸೇರಿದಂತೆ ಶಿಕ್ಷಕರ ಭರ್ತಿಗೆ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಸರ್ಕಾರಿ ಉರ್ದು ಶಾಲೆಗಳ ಸಮಸ್ಯೆಗಳ ಕುರಿತು ಅಧ್ಯಕ್ಷರ ಗಮನಕ್ಕೆ ತಂದ ಅವರು, ಅಲ್ಪಸಂಖ್ಯಾತ ಸಮುದಾಯ ಎದುರಿಸುತ್ತಿರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

ಸರ್ಕಾರಿ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಭರ್ತಿಯಾಗಬೇಕು. ಯಾವುದೇ ಕಾರಣಕ್ಕೂ ಉರ್ದು ಶಾಲೆಗಳು ಮುಚ್ಚದಂತೆ ಕ್ರಮ ವಹಿಸಬೇಕು. ಮೌಲಾನ ಆಝಾದ್ ಶಾಲೆಗಳಿಗೆ ಖಾಯಂ ಶಿಕ್ಷಕರ ನೇಮಕವಾಗಬೇಕು. ಪ್ರತಿ ಉರ್ದು ಮಾಧ್ಯಮ ಶಾಲೆಯಲ್ಲಿ ಮುಖ್ಯ ಶಿಕ್ಷಕರ ಹುದ್ದೆಯನ್ನು ಉರ್ದು ಭಾಷಿಕರಿಗಾಗಿಯೆ ಮೀಸಲಿಡಬೇಕು. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿರುವ (ಎನ್.ಎಸ್.ಪಿ) ಪ್ರೀ-ಮತ್ತು ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನವನ್ನು ಮರು ಸ್ಥಾಪಿಸುವಂತೆ ಸರ್ಕಾರಕ್ಕೆ ಒತ್ತಡ ಹೇರಬೇಕು. ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣಕ್ಕಾಗಿ ವಿಶೇಷ ವಿದ್ಯಾರ್ಥಿವೇತನ ನೀಡಬೇಕು. ಮುಸ್ಲಿಂ ಆಡಳಿತ ಮಂಡಳಿ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಅಲ್ಪಸಂಖ್ಯಾತ ಶಿಕ್ಷಣ ಪ್ರಮಾಣಪತ್ರ ನೀಡುವಲ್ಲಿ ಆಗುತ್ತಿರುವ ವಿಳಂಬವನ್ನು ಸರಿಪಡಿಸಿ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಸ್ಥಾನಮಾನ ನೀಡಲು ಕ್ರಮ ವಹಿಸಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಕರ್ನಾಟಕದ ಉರ್ದು ಅಲ್ಪಸಂಖ್ಯಾತ ಶಾಲೆಗಳು ಮೂಲಸೌಕರ್ಯ ಶಿಕ್ಷಕರ ಕೊರತೆ ಸೇರಿದಂತೆ ಅನೇಕಾರು ಸಮಸ್ಯೆ ಗಳನ್ನು ಎದುರಿಸುತ್ತಿವೆ. ಅನೇಕ ಉರ್ದು ಶಾಲೆಗಳು ಕಳಪೆ ಸ್ಥಿತಿಯಲ್ಲಿವೆ, ಶಿಥಿಲಗೊಂಡ ಕಟ್ಟಡಗಳು, ಅಸಮರ್ಪಕ ನೈರ್ಮಲ್ಯ ಸೌಲಭ್ಯಗಳು ಮತ್ತು ಆಟದ ಮೈದಾನಗಳು ಮತ್ತು ಗ್ರಂಥಾಲಯಗಳಂತಹ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಮೂಲಸೌಕರ್ಯಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಕಷ್ಟಕರವಾಗಿದೆ. ಉರ್ದು ಶಾಲೆಗಳಲ್ಲಿ ಅರ್ಹ ಶಿಕ್ಷಕರ ಕೊರತೆ ಇದೆ, ಇದು ದೊಡ್ಡ ತರಗತಿ ಗಾತ್ರಕ್ಕೆ ಕಾರಣವಾಗುತ್ತದೆ ಇದಿರಂದಾಗಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ಗಮನದ ಕೊರತೆಯಿದೆ.

ಮೂಲಸೌಕರ್ಯಗಳನ್ನು ಸುಧಾರಿಸಲು, ಹೆಚ್ಚಿನ ಶಿಕ್ಷಕರನ್ನು ನೇಮಿಸಿಕೊಳ್ಳಲು ಅಗತ್ಯ ಕ್ರಮ ವಹಿಸುವುದು. ಉರ್ದು ಮಾಧ್ಯಮದ ಪಠ್ಯಕ್ರಮಗಳು ಹಾಗೂ ತರಬೇತಿ ಸಂಪನ್ಮೂಲಗಳು ಉರ್ದು ಮಾಧ್ಯಮದಲ್ಲೇ ಇರಬೇಕು. ಮತ್ತು ಇವು ಸಕಾಲದಲ್ಲಿ ದೊರೆಯುವಂತೆ ವ್ಯವಸ್ಥೆ ಆಗಬೇಕು. ಬೋಧನೆಯ ಗುಣಮಟ್ಟವನ್ನು ಸುಧಾರಿಸಲು ಶಿಕ್ಷಕರ ತರಬೇತಿಯನ್ನು ಉರ್ದು ಮಾಧ್ಯಮದಲ್ಲೆ ನಡೆಯಬೇಕು. ಉರ್ದು ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಉಳಿಯಲು ಮತ್ತು ಉನ್ನತ ಶಿಕ್ಷಣವನ್ನು ಪಡೆಯಲು ಪ್ರೋತ್ಸಾಹಿಸಲು ಔಟ್ರೀಚ್ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಿ. ಶಿಕ್ಷಣದ ಮಹತ್ವದ ಅರಿವನ್ನು ಹೆಚ್ಚಿಸ ಬೇಕೆಂದು ಆಯೋಗಕ್ಕೆ ಐಟಾ ಸಲಹೆ ನೀಡಿದೆ.

ಇದಕ್ಕೂ ಮುನ್ನಾ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ರಿಗೆ ಶಾಲು ಹಾಗೂ ಭಟ್ಕಳ ಮಲ್ಲಿಗೆ ಹಾರ ಹಾಕಿ ಸನ್ಮಾಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ತಹಸಿಲ್ದಾರ ತಿಪ್ಪೆಸ್ವಾಮಿ, ಉ.ಕ.ಜಿಲ್ಲಾ ಅಲ್ಪಸಂಖ್ಯಾತ ಇಲಾಖೆ ಅಧಿಕಾರಿ ಎಫ್.ಯು.ಪುಜೇರ್, ಅಲ್ಪಸಂಖ್ಯಾತ ವಿಸ್ತೀರ್ಣಾಧಿಕಾರಿ ಶಮ್ಸುದ್ದೀನ್, ಐಟಾ ಉತ್ತರಕನ್ನಡ ಜಿಲ್ಲಾಧ್ಯಕ್ಷ ಅಲಿ ಮನೆಗಾರ್, ಭಟ್ಕಳ ತಾಲೂಕು ಅಧ್ಯಕ್ಷ ನಯೀಮುಲ್ ಹಕ್ ಮುಂತಾದರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X