Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಅಂಜುಮನ್ ಬಾಲಕರ ಪ್ರೌಢಶಾಲೆಯಲ್ಲಿ...

ಭಟ್ಕಳ: ಅಂಜುಮನ್ ಬಾಲಕರ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ1 Jan 2024 7:08 PM IST
share
ಭಟ್ಕಳ: ಅಂಜುಮನ್ ಬಾಲಕರ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭ

ಭಟ್ಕಳ: ಅಂಜುಮನ್ ಬಾಲಕರ ಪ್ರೌಢಶಾಲೆಯ (ಎಬಿಎಚ್‌ಎಸ್) ವಾರ್ಷಿಕೋತ್ಸವ ಸಮಾರಂಭ ಭಟ್ಕಳದ ಅಂಜುಮಾ ನಾಬಾದ್ ಆವರಣದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ 2023-24 ನೇ ಸಾಲಿನ ಅತ್ಯುತ್ತಮ ವಿದ್ಯಾರ್ಥಿಗೆ ನೀಡಲ್ಪಡುವ 'ವಿಕೌರ್-ಎ-ಅಂಜುಮನ್' ಚಿನ್ನದ ಪದಕವನ್ನು ಮಹಮ್ಮದ್ ಮೊಹ್ತೇಶಾಮ್ ಗೆ ನೀಡಿ ಪುರಸ್ಕರಿಸಲಾಯಿತು.

ಮೊಹಮ್ಮದ್ ತನೂಫ್ ಮತ್ತು ಮೊಹಮ್ಮದ್ ಅಫೀಫ್ ಅವರು 'ವಿಕಾರ್-ಎ-ಅಂಜುಮನ್'ಗಾಗಿ ರನ್ನರ್ ಅಪ್ ಆಗಿ ಬೆಳ್ಳಿ ಪದಕವನ್ನು ಪಡೆದರು.

ಸಮಾರಂಭದ ಮುಖ್ಯ ಅತಿಥಿಗಳಾದ ಜಾಮಿಯಾ ಮಸೀದಿಯ ಇಮಾಮ್ ಮತ್ತು ಖತೀಬ್ ಮೌಲಾನಾ ಅಬ್ದುಲ್ ಅಲೀಂ ಖತೀಬ್ ನದ್ವಿ ಮಾತನಾಡಿ, ಪ್ರಪಂಚದ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳ ಜೀವನದಲ್ಲಿ ಪ್ರಸ್ತುತ ಶೈಕ್ಷಣಿಕ ಅವಧಿಯ ಮಹತ್ವವನ್ನು ಎತ್ತಿ ಹಿಡಿದ ಅವರು ಅದರ ಮಹತ್ವವನ್ನು ಗುರುತಿಸುವಂತೆ ಒತ್ತಾಯಿಸಿದರು.

ಗೌರವ ಅತಿಥಿ, ಚಾರ್ಟರ್ಡ್ ಅಕೌಂಟೆಂಟ್ ಉಸ್ಮಾನ್ ಉಬೈದ್ ಜುಬಾಪು, ಇಂದಿನ ಜಗತ್ತಿನಲ್ಲಿ ಸಂವಹನ ಮತ್ತು ತಂತ್ರಜ್ಞಾನದ ಪ್ರಮುಖ ಪಾತ್ರಗಳನ್ನು ಒತ್ತಿ ಹೇಳಿದರು. ಸಾಮಾಜಿಕ ಮಾಧ್ಯಮಗಳು ಕೇವಲ ಮನರಂಜನೆಗಾಗಿ ಬಳಕೆಯಾಗದೆ ಜ್ಞಾನ ಸಂಪಾದನೆಯನ್ನು ಉತ್ತೇಜಿಸುವ "ಶಿಕ್ಷಣ" ಅಥವಾ "ಮಾಹಿತಿ" ಗಾಗಿ ವೇದಿಕೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಳಿಗ್ಗೆ ನಡೆದ ಅಧಿವೇಶನದಲ್ಲಿ ಜಾಮಿಯಾ ಇಸ್ಲಾಮಿಯಾ ಶಿಕ್ಷಕ ಮೌಲಾನಾ ಸೈಯದ್ ಸಾಲಿಕ್ ಬರ್ಮಾವರ್ ನದ್ವಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಸಭೆಯನ್ನುದ್ದೇಶಿಸಿ ಮಾತನಾಡಿದರು. ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ, ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿನ ಸಾಧನೆಗಳಿಗಾಗಿ ಹಲವಾರು ವಿದ್ಯಾರ್ಥಿಗಳಿಗೆ ಟ್ರೋಫಿಗಳು, ಪ್ರಮಾಣಪತ್ರಗಳು ಮತ್ತು ನಗದು ಬಹುಮಾನಗಳನ್ನು ನೀಡಲಾಯಿತು.

ಅಂಜುಮನ್ ಹಮೀ-ಎ-ಮುಸ್ಲಿಮೀನ್ ಉಪಾಧ್ಯಕ್ಷ ಮಹಮ್ಮದ್ ಸಾದಿಕ್ ಪಿಲ್ಲೂರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವು ಅಬೂಬಕ್ಕರ್ ಸಿದ್ದೀಕ್ ರುಕ್ನುದ್ದೀನ್ ಅವರ ಪವಿತ್ರ ಕುರಾನ್ ಪಠಣದೊಂದಿಗೆ ಪ್ರಾರಂಭವಾಯಿತು, ನಂತರ ಮೊಹಮ್ಮದ್ ಜುಕಾಕು ನಾತ್ ಹಾಡಿದರು.

ಮೌಲಾನಾ ಅಬ್ದುಲ್ ಹಫೀಝ್ ಮಿಫ್ತಾಹಿ ಅತಿಥಿಗಳನ್ನು ಸ್ವಾಗತಿಸಿದರು, ಅಹ್ಮದ್ ಆರಿಫ್ ಅಕ್ರಮಿ ಅತಿಥಿಗಳನ್ನು ಪರಿಚಯಿಸಿದರು, ಮುಖ್ಯೋಪಾಧ್ಯಾಯ ಅಬ್ದುಲ್ಲಾ ಉಮರ್ ರುಕ್ನುದ್ದೀನ್ ತಮ್ಮ ಶಾಲೆಯ ವಾರ್ಷಿಕ ವರದಿಯನ್ನು ಮಂಡಿಸಿದರು. ಜರೀರ್ ಹಸನ್ ಶೋಪಾ ವಂದಿಸಿದರು.

ವೇದಿಕೆಯಲ್ಲಿ ಮುಖ್ಯ ಖಾಝಿ ಮರ್ಕಝಿ ಖಲೀಫ ಜಮಾತುಲ್ ಮುಸ್ಲಿಮೀನ್ ಭಟ್ಕಳ, ಮೌಲಾನಾ ಖಾಜಾ ಮೊಹಿನುದ್ದೀನ್ ಅಕ್ರಮಿ ಮದನಿ, ಅಂಜುಮನ್ ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿ ಇಶಾಕ್ ಶಾಬಂದ್ರಿ, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಸಾದುಲ್ಲಾ ರುಕ್ನುದ್ದೀನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X