Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಪ್ರಾದೇಶಿಕ ಇತಿಹಾಸವನ್ನು ಮಕ್ಕಳಿಗೆ...

ಪ್ರಾದೇಶಿಕ ಇತಿಹಾಸವನ್ನು ಮಕ್ಕಳಿಗೆ ತಲುಪಿಸುವ ಕೆಲಸವಾಗಬೇಕು: ಡಾ. ಗಜಾನನ ಶರ್ಮ

ವಾರ್ತಾಭಾರತಿವಾರ್ತಾಭಾರತಿ11 Jan 2024 5:20 PM IST
share
ಪ್ರಾದೇಶಿಕ ಇತಿಹಾಸವನ್ನು ಮಕ್ಕಳಿಗೆ ತಲುಪಿಸುವ ಕೆಲಸವಾಗಬೇಕು: ಡಾ. ಗಜಾನನ ಶರ್ಮ

ಭಟ್ಕಳ: ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ರಾಣಿ ಚೆನ್ನ ಭೈರಾದೇವಿ ಕೃತಿಯ ಕುರಿತು ವಿಚಾರ ಸಂಕೀರ್ಣ ಹಾಗೂ ಸ್ಥಳೀಯ ಇತಿಹಾಸದ ಕುರಿತು ವಸ್ತು ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನ- ಮಾರಾಟ ಕಾರ್ಯಕ್ರಮವು ಶ್ರೀಧರ ಸ್ವಾಮಿ ಸಭಾಂಗಣದಲ್ಲಿ ಬುಧವಾರ ಬೆಳಗ್ಗೆ ನೆರವೇರಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಲೇಖಕ ಚೆನ್ನ ಭೈರಾದೇವಿ ಕಾದಂಬರಿಯ ಕರ್ತೃ ಡಾ. ಗಜಾನನ ಶರ್ಮ ಅವರು ಮಾತನಾಡುತ್ತಾ "ಪ್ರಾದೇಶಿಕ ಇತಿಹಾಸವನ್ನು ಮಕ್ಕಳಿಗೆ ತಲುಪಿಸುವ ಕೆಲಸವಾಗಬೇಕು, ಇತಿಹಾಸ ಹಿಂದೆ ನಡೆದ ಸತ್ಯ ಘಟನೆಗಳ ಸಂಗ್ರಹವಾಗಿದೆ, ಇದನ್ನು ಪರಿಣಾಮಕಾರಿಯಾಗಿ ಮಕ್ಕಳ ಮುಂದಿಟ್ಟಾಗ ಅದು ಮಕ್ಕಳ ಮನಸ್ಸನ್ನು ತಲುಪಲು ಸಾಧ್ಯ ಎಂದು ತಿಳಿಸುತ್ತ, ವಿದ್ಯಾರ್ಥಿನಿಯರು ಚೆನ್ನಭೈರಾದೇವಿಯನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು" ಎಂದು ಕರೆ ನೀಡಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದಂತಹ ಇತಿಹಾಸಕಾರರಾದ ಡಾ. ಲಕ್ಷ್ಮೀಶ ಹೆಗಡೆ ಸೋಂದ ಅವರು ಮಾತನಾಡುತ್ತಾ "ಇತಿಹಾಸ ಎಂದಿಗೂ ನಿಂತ ನೀರಲ್ಲ, ಇತಿಹಾಸದ ಸಂಗತಿಗಳಿಗೆ ಚ್ಯುತಿ ಬಾರದಂತೆ ಸಮಗ್ರವಾಗಿ ಬರೆದ ಕಾದಂಬರಿಯೇ ಗಜಾನನ ಶರ್ಮ ಅವರ ಚೆನ್ನ ಭೈರಾದೇವಿ ಕೃತಿ" ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತ, ಪ್ರಾದೇಶಿಕ ಇತಿಹಾಸದ ಕುರಿತು ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಇಂತಹ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದ ಕಾಲೇಜಿನ ಕ್ರಮ ಶ್ಲಾಘನೀಯ" ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದಂತಹ ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಅಧ್ಯಕ್ಷರಾದ ಡಾ.ಸುರೇಶ್ ನಾಯಕರವರು "ಬೇರೆ ಪದವಿಯಂತೆ ಕಲಾ ವಿಭಾಗವು ಅಷ್ಟೇ ಮಹತ್ವವಾಗಿದ್ದು, ಈ ವಿದ್ಯಾರ್ಥಿಗಳಿಗೂ ವಿಫುಲ ಅವಕಾಶಗಳಿವೆ" ಎಂದು ಹೇಳಿದರು.

ಚೆನ್ನ ಭೈರಾದೇವಿ ಪುಸ್ತಕದ ಕುರಿತಾಗಿ ಖ್ಯಾತ ಲೇಖಕರಾದ ಸಂತೋಷಕುಮಾರ ಮೆಹಂದಳೆ, ವಿವೇಕ ಹಂಸ ಪತ್ರಿಕೆಯ ಸಂಪಾದಕ-ಖ್ಯಾತ ಲೇಖಕ ರಘು. ವಿ, ಖ್ಯಾತ ಪತ್ರಕರ್ತ ಗೌರೀಶ್ ಅಕ್ಕಿ, ಹೊನ್ನಾವರದ ಗೌರವ ಕಲ್ಯಾಣಪುರ, ಖ್ಯಾತ ನಟ- ನಿರ್ದೇಶಕ ರಮೇಶ್ ಅರವಿಂದ್ ಹಾಗೂ ಇನ್ನಿತರ ಗಣ್ಯರು ಪುಸ್ತಕದ ಕುರಿತಾಗಿ ಶ್ಲಾಘನೀಯ ವಿಡಿಯೋಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ ಹಾಗೂ ಟ್ರಸ್ಟಿ ರಮೇಶ ಖಾರ್ವಿ ಉಪಸ್ಥಿತರಿದ್ದರು. ಪ್ರಾಂಶುಪಾಲರ ಶ್ರೀನಾಥ್ ಪೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ಆಯೋಜನೆಯ ಆಶಯವನ್ನು ತಿಳಿಸಿದರೆ, ಬಿಎ - ಬಿಬಿಎ ವಿಭಾಗದ ಉಪಪ್ರಾಂಶುಪಾಲ ವಿಶ್ವನಾಥ ಭಟ್ಟ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕರಾದ ಶಾಂತರಾಯ ಗೊಂಡ ಸ್ವಾಗತಿಸಿದರೆ, ಆನಂದ ದೇವಾಡಿಗ ವಂದಿಸಿದರು.

ಬಿಎ ವಿಭಾಗದ ವಿದ್ಯಾರ್ಥಿ ಕಪಿಲ್ ಭಟ್ ಸ್ಥಳೀಯ ಐತಿಹಾಸಿಕ ಸ್ಥಳಗಳ ಭೇಟಿ ಹಾಗೂ ಪುಸ್ತಕವನ್ನು ಓದಿದ ಸವಿ ಅನುಭವಗಳನ್ನು ಹಂಚಿಕೊಂಡರು ಹಾಗೂ ದಿವ್ಯಾ ಪಿ. ಕಾರ್ಯಕ್ರಮವನ್ನು ನಿರೂಪಿಸಿದರು. ವಿಚಾರ ಸಂಕೀರ್ಣದಲ್ಲಿ ವಿವಿಧ ಭಾಗಗಳಿಂದ ಬಂದ ಆಗಮಿಸಿದ ಶ್ರೋತೃಗಳ ಪ್ರಶ್ನೆಗಳಿಗೆ ಡಾ. ಗಜಾನನ ಶರ್ಮ ಹಾಗೂ ಡಾ. ಲಕ್ಷ್ಮೀಶ ಹೆಗಡೆ ಸೋಂದ ಅಷ್ಟೇ ಆಸಕ್ತಿಯಿಂದ ಉತ್ತರಿಸಿದರು.

ರಾಣಿ ಚೆನ್ನಭೈರಾದೇವಿಯ ಇತಿಹಾಸದ ಕುರಿತ ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟವು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು ವಿಶೇಷವಾಗಿತ್ತು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X