Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ರಾಮನ ವಿಷಯದಲ್ಲಿ ಯಾರೂ ರಾಜಕಾರಣ...

ರಾಮನ ವಿಷಯದಲ್ಲಿ ಯಾರೂ ರಾಜಕಾರಣ ಮಾಡಬಾರದು: ಸಚಿವ ಮಾಂಕಾಳ್ ವೈದ್ಯ

ವಾರ್ತಾಭಾರತಿವಾರ್ತಾಭಾರತಿ22 Jan 2024 8:35 PM IST
share
ರಾಮನ ವಿಷಯದಲ್ಲಿ ಯಾರೂ ರಾಜಕಾರಣ ಮಾಡಬಾರದು: ಸಚಿವ ಮಾಂಕಾಳ್ ವೈದ್ಯ

ಭಟ್ಕಳ: ಸಚಿವ ರಾಜಣ್ಣ ರಾಮನ ಬಗ್ಗೆ ಮಾತನಾಡಿರುವುದು ಸರಿಯಲ್ಲ, ಅವರ ಮಾನಸಿಕತೆ ಕುರಿತು ನನಗೆ ಅನುಮಾನ ಮೂಡುತ್ತಿದೆ. ರಾಮನ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಸಚಿವ ಮಾಂಕಾಳ್ ವೈದ್ಯ ಹೇಳಿದರು.

ಅವರು ಮಂಗಳವಾರ ತಾಲೂಕಿನ ಕರಿಕಲ್ ನಲ್ಲಿರುವ ಶ್ರೀರಾಮ ಧ್ಯಾನ ಕುಠಿರದಲ್ಲಿ ರಾಮನ ಪೂಜೆ ನೆರವೇರಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಮನ ವಿಷಯದಲ್ಲಿ ಕಾಂಗ್ರೇಸ್ ಪಕ್ಷ ರಾಜಕೀಯ ಏಕೆ ಮಾಡುತ್ತಿದೆ ಎನ್ನುವುದು ಅರ್ಥವಾಗುತ್ತಿಲ್ಲ. ದೇಶದಲ್ಲಿ ಎಲ್ಲರ ಪರಿಶ್ರಮದಿಂದ ಭವ್ಯ ಮಂದಿರ ನಿರ್ಮಾಣಗೊಂಡಿದೆ. ರಾಮನ ವಿಷಯವೇ ಬೇರೆ ಪಕ್ಷದ ರಾಜಕಾರಣವೇ ಬೇರೆ. ಕಾಂಗ್ರೇಸ್ ಪಕ್ಷ ಸೇರಿದಂತೆ ಯಾವುದೇ ಪಕ್ಷ ಇರಲಿ ರಾಮನ ಹೆಸರಲ್ಲಿ ರಾಜಕೀಯ ಮಾಡಕೂಡದು. ರಾಮನಿಗೆ ಅಪಮಾನ ರೀತಿಯಲ್ಲಿ ಯಾರಾದರೂ ವರ್ತಿಸಿದರೆ ಖಂಡಿತವಾಗಿಯೂ ರಾಮ ಯಾವತ್ತೂ ಕ್ಷಮಿಸಲ್ಲ ಎಂದ ಅವರು, ರಾಮ ನಮ್ಮವ, ನಾವೆಲ್ಲ ರಾಮನ ಭಕ್ತರು. ಎಲ್ಲರೂ ಸಂತಸದಿಂದಲೇ ರಾಮನನ್ನು ನಮಿಸಿ. ರಾಮನ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿದರೆ ಅವರ ಮನಸ್ಥಿತಿ ಸರಿ ಇಲ್ಲ ಎಂದರ್ಥ. ಎಲ್ಲರೂ ಸಹೋದರ ಭಾವನೆಯಿಂದ ಬಾಳುವುದು ಅಗತ್ಯ. ಸಧ್ಯವೇ ಅಯೋಧ್ಯೆಗೆ ಹೋಗುತ್ತೇನೆ. ರಾಮ ಮಂದಿರ ನಿರ್ಮಾಣಕ್ಕೆ ನಾನೂ ವೈಯಕ್ತಿ ಸಹಾಯ ನೀಡಿದ್ದೇನೆ. ಭವ್ಯ ರಾಮಮಂದಿರ ನಿರ್ಮಾಣ ಮಾಡಿಕೊಟ್ಟ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಮೇಲೆ ಸದಾ ರಾಮನ ರಕ್ಷಣೆ ಇದೆ. ಭಟ್ಕಳದಲ್ಲಿ ರಾಮನನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಪೂಜಿಸಲು, ಹಿಂದೂ ಸಂಪ್ರಾಯದಂತೆ ಸೇವೆ ಮಾಡಲು ಎಲ್ಲ ಅವಕಾಶ ಮಾಡಿಕೊಟ್ಟಿದ್ದೇನೆ. ಪೂಜೆ, ಮೆರವಣೆಗೆ, ಭಜನೆ ರಾತ್ರಿ ಎಷ್ಟು ಸಮಯಕ್ಕೆ ಬೇಕಾದರೂ ಮಾಡಲಿ ಯಾರು ಕೂಡ ಅಡ್ಡಿಮಾಡಲ್ಲ. ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಟ್ಟಿದ್ದೇನೆ. ನಾನು ರಾಮನ ಕಟ್ಟಾ ಭಕ್ತ, ಯಾರಾದರೂ ರಾಮನ ವಿರುದ್ಧ ಮಾತನಾಡಿದರೆ ನಾನು ಅವರ ವಿರುದ್ಧವಾಗಿರುತ್ತೇನೆ. ಒಬ್ಬರು ಇನ್ನೊಬ್ಬರಿಗೆ ತೊಂದರೆ ಆಗದ ರೀತಿಯಲ್ಲಿ ರಾಮನನ್ನು ಭಕ್ತಿ ಭಾವದಿಂದ ಪೂಜಿಸಿ ಎಂದು ರಾಮಭಕ್ತರಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ನಾಮಧಾರಿ ಸಮಾಜದ ಹಿರಿಯ ಮುಖಂಡ ಎಲ್.ಎಸ್.ನಾಯ್ಕ, ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ, ಸುರೇಶ್ ನಾಯ್ಕ ಸೇರಿದಂತೆ ಸಚಿವರ ಕುಟುಂಬದ ಸದಸ್ಯರು, ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು, ನಾಮಧಾರಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X