Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಸಿಎಂ ಸಿದ್ದರಾಮಯ್ಯ, ಕ್ಯಾಬಿನೆಟ್...

ಸಿಎಂ ಸಿದ್ದರಾಮಯ್ಯ, ಕ್ಯಾಬಿನೆಟ್ ಸಚಿವರನ್ನು ಭೇಟಿಯಾದ ಭಟ್ಕಳದ ತಂಝೀಮ್ ನಿಯೋಗ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳ್ಳಿಸಿದ್ದ ಮುಸ್ಲಿಮ್ ವಿರೋಧಿ ಕಾನೂನು ರದ್ದುಪಡಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ22 Feb 2024 6:43 PM IST
share
ಸಿಎಂ ಸಿದ್ದರಾಮಯ್ಯ, ಕ್ಯಾಬಿನೆಟ್ ಸಚಿವರನ್ನು ಭೇಟಿಯಾದ ಭಟ್ಕಳದ ತಂಝೀಮ್ ನಿಯೋಗ

ಭಟ್ಕಳ: ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಕ್ಯಾಬಿನೆಟ್ ಸಚಿವರನ್ನು ಭೇಟಿಯಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳ್ಳಿಸಿದ್ದ ಎಲ್ಲ ಮುಸ್ಲಿಮ್ ವಿರೋಧಿ ಕಾನೂನುಗಳನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿತು.

ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಮಾಜದಲ್ಲಿ ಕೋಮುವಾದದ ವಿಷವನ್ನು ಹರಡುವ ಮತ್ತು ಪ್ರಚೋದನೆ ನೀಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಮತೀಯ ಅಜೆಂಡಾದಡಿ ಹಿಂದಿನ ಬಿಜೆಪಿ ಸರಕಾರ ಅಲ್ಪಸಂಖ್ಯಾತರ ಹಾಗೂ ವಿಶೇಷವಾಗಿ ಮುಸ್ಲಿಮರ ವಿರುದ್ಧ ಹಿಜಾಬ್ ನಿಷೇಧಿಸಿ, 2ಬಿ ಮೀಸಲಾತಿ ರದ್ದು, ಮತಾಂತರ ನಿಷೇಧ, ಗೋಹತ್ಯೆ ನಿಷೇಧದಂತ ಕಾನೂನು ಜಾರಿಗೊಳಿಸಿದ್ದು ಆ ಎಲ್ಲ ಕಾನೂನುಗಳನ್ನು ಹಿಂಪಡೆ ಯಬೇಕೆಂದು ನಿಯೋಗವು ಮುಖ್ಯಮಂತ್ರಿಯನ್ನು ಆಗ್ರಹಿಸಿತು.

ಬಿಜೆಪಿಯ ಕೋಮುವಾದಿ ಮತ್ತು ಫ್ಯಾಸಿಸ್ಟ್ ನೀತಿಗಳನ್ನು ತಿರಸ್ಕರಿಸಿದ ರಾಜ್ಯದ ಜನತೆ ಅದರಲ್ಲೂ ಮುಸ್ಲಿಂ ಅಲ್ಪಸಂಖ್ಯಾ ತರು ಕಳೆದ ಚುನಾವಣೆಯಲ್ಲಿ ನಿಮ್ಮನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತರಲು ಒಗ್ಗಟ್ಟಾಗಿ ನಿಂತಿದ್ದನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಸಿದ್ದು, ಈ ಗುರಿಯೊಂದಿಗೆ, ಕಾಂಗ್ರೆಸ್ ದೊಡ್ಡ ಯಶಸ್ಸನ್ನು ಸಾಧಿಸಿದೆ. ಹಿಂದಿನ ಸರ್ಕಾರದ ಅಲ್ಪಸಂಖ್ಯಾತರ ವಿರೋಧಿ ನೀತಿಯಿಂದಾಗಿ ಹಿಜಾಬ್, 2ಬಿ ಮೀಸಲಾತಿ, ಗೋ ಕಳ್ಳತನ, ಧರ್ಮ ಪರಿವರ್ತನೆಯಂತಹ ನಾಲ್ಕು ಪ್ರಮುಖ ವಿಷಯಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ. ಈ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಕ್ರಮ ತೆಗೆದುಕೊಳ್ಳುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಭಟ್ಕಳದಲ್ಲಿ ಇತ್ತೀಚಿನ ಪರಿಸ್ಥಿತಿ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಟ್ಕಳದಲ್ಲಿ ಯಾವ ರೀತಿಯ ಮುಸ್ಲಿಂ ವಿರೋಧಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಯವರಿಗೆ ನಿಯೋಗವು ಮಾಡಿಸಿದ್ದು, ಭಟ್ಕಳ ಸೇರಿದಂತೆ ಇಡೀ ರಾಜ್ಯದಲ್ಲಿ ಪರಿಸ್ಥಿತಿ ಶಾಂತಿಯುತವಾಗಿರಲು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದಿರ್ ಅವರನ್ನು ಭೇಟಿ ಮಾಡಿದ ತಂಝೀಮ್ ನಿಯೋಗ ಭಟ್ಕಳದ ನಾನಾ ಸಮಸ್ಯೆಗಳ ಬಗ್ಗೆ ತಿಳಿಸಿ, ಎಲ್ಲ ರೀತಿಯ ಸಹಕಾರ ನೀಡುವಂತೆ ಮನವಿ ಮಾಡಿದರು.

ಸಂಸತ್ ಚುನಾವಣೆಗೂ ಮುನ್ನ ಉತ್ತರ ಕೆನರಾ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ ಕೋಮುಗಲಭೆ ಸೃಷ್ಟಿಸಲು ಕಿಡಿಗೇಡಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಸಂಘಟನೆ ಬರೆದುಕೊಂಡಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ತಡೆಯಲು ಅಧಿಕಾರಿಗಳು ಗಂಭೀರ ಪ್ರಯತ್ನ ನಡೆಸುತ್ತಿಲ್ಲ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.

ಭಟ್ಕಳ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಕೆಲವು ಘಟನೆಗಳು ಕೋಮುದ್ವೇಷ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಯತ್ನಗಳತ್ತ ಬೊಟ್ಟು ಮಾಡುತ್ತಿವೆ ಜ.14 ರಂದು, ಭಟ್ಕಳದ ಜಾಲಿಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ, ಮಸೀದಿಯ ಮುಂಭಾಗದಲ್ಲಿ ಕೇಸರಿ ಧ್ವಜವನ್ನು ಹಾರಿಸಲು ಕಾನೂನುಬಾಹಿರವಾಗಿ ಕಂಬವನ್ನು ಅಳವಡಿಸಿ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಪ್ರಯತ್ನವನ್ನು ಮಾಡಲಾಯಿತು. ಅದೇ ರೀತಿ ಜ.15ರಂದು ಹೆಬ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಅನುಮತಿ ಇಲ್ಲದೆ ಸರಕಾರಿ ಜಮೀನಿನಲ್ಲಿ ಕಂಬ ಅಳವಡಿಸಲು ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಅಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ತಲೆದೋರಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ನಮ್ಮ ಭಾಗದಲ್ಲಿ ಕೋಮುಗಲಭೆ ಸೃಷ್ಟಿಸಿ ಪ್ರಚೋದನೆ ಮೂಲಕ ಹಿಂಸಾಚಾರವನ್ನು ಹರಡುವ ಉದ್ದೇಶದಿಂದ ಕೆಲವು ವ್ಯಕ್ತಿಗಳು ಮತ್ತು ಕೆಲವು ಸಂಘಟನೆಗಳು ನಿರಂತರವಾಗಿ ಸಕ್ರಿಯವಾಗಿವೆ ಎಂದು ಜ್ಞಾಪಕ ಪತ್ರದಲ್ಲಿ ತಿಳಿಸಲಾಗಿದೆ. ಈ ಕಿಡಿಗೇಡಿಗಳ ಬಹಿರಂಗ ಪ್ರಚೋದನೆಯಿಂದಾಗಿ, ನಮ್ಮ ಸಮುದಾಯದ ಸುರಕ್ಷತೆ ಮತ್ತು ಭದ್ರತೆಗೆ ಅಪಾಯವಿದೆ. ಅಂತಹ ಜನರ ಸಮೃದ್ಧಿ, ಕೊರತೆ ಅಥವಾ ಧರ್ಮವನ್ನು ಲೆಕ್ಕಿಸದೆ ಕಾನೂನಿನ ಶ್ರೇಷ್ಠತೆಯನ್ನು ಕಾಪಾಡಿಕೊಳ್ಳುವುದು ಮತ್ತು ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಕಾನೂನು ಜಾರಿ ಸಂಸ್ಥೆಗಳ ಕರ್ತವ್ಯ ಎಂದು ನಾವು ನಂಬುತ್ತೇವೆ. ಪರಿಸ್ಥಿತಿಗೆ ಬೇಕಾದಂತೆ ಈ ಮತೀಯ ಶಕ್ತಿಗಳನ್ನು ನಿಭಾಯಿಸುವಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ಚಟುವಟಿಕೆ ತೋರಿಸುತ್ತಿಲ್ಲ ಎಂದು ನಮಗೆ ಏಕೆ ಅನ್ನಿಸುತ್ತಿದೆಯೋ ಗೊತ್ತಿಲ್ಲ. ಇದು ಸಮಾಜ ವಿರೋಧಿ ಕಿಡಿಗೇಡಿಗಳಿಗೆ ತಪ್ಪು ಸಂಕೇತವನ್ನು ರವಾನಿಸುತ್ತದೆ ಮತ್ತು ಅವರ ನೈತಿಕತೆಯನ್ನು ಹೆಚ್ಚಿಸುತ್ತದೆ.

ಗೃಹ ಸಚಿವರು ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕೋಮು ಪ್ರಚೋದನೆಯಲ್ಲಿ ತೊಡಗಿರುವ ಯಾವುದೇ ವ್ಯಕ್ತಿಗಳು ಅಥವಾ ಗುಂಪುಗಳ ವಿರುದ್ಧ ಕಠಿಣ ಕ್ರಮ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿಪತ್ರದಲ್ಲಿ ಆಗ್ರಹಿಸಲಾಗಿದೆ.

ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಭಟ್ಕಳದ ವಿಧಾನಸಭಾ ಸದಸ್ಯ ಹಾಗೂ ಉತ್ತರಕನ್ನಡ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯ ಅವರು ಸಂಘಟನೆಯ ನಿಯೋಗದೊಂದಿಗೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದು, ಉಪಾಧ್ಯಕ್ಷ ಅತೀಕುರ್ ರಹ್ಮಾನ್ ಮುನಿರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮೊಹಿಯುದ್ದೀನ್ ರುಕ್ನುದ್ದೀನ್, ಇಕ್ಬಾಲ್ ಸೊಹೈಲ್, ಅಶ್ಫಾಕ್ ಕೆ.ಎಂ, ವಕೀಲ ಇಮ್ರಾನ್ ಲಂಕಾ, ಮುಬೀನ್ ದಾಮೋದಿ, ಫೈಜಾನ್ ಬರ್ಮಾವರ್ ಮತ್ತು ಅಶ್ರಫ್ ಶಾಬಂದ್ರಿ ನಿಯೋಗದಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X