Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ರಂಗಭೂಮಿ ಕಲಾವಿದರು ಕಲಾತಪಸ್ವಿಗಳು :...

ರಂಗಭೂಮಿ ಕಲಾವಿದರು ಕಲಾತಪಸ್ವಿಗಳು : ಡಾ.ಸಯ್ಯದ್ ಝಮೀರುಲ್ಲ ಷರೀಫ್

ವಾರ್ತಾಭಾರತಿವಾರ್ತಾಭಾರತಿ29 Feb 2024 7:35 PM IST
share
ರಂಗಭೂಮಿ ಕಲಾವಿದರು ಕಲಾತಪಸ್ವಿಗಳು : ಡಾ.ಸಯ್ಯದ್ ಝಮೀರುಲ್ಲ ಷರೀಫ್

ಭಟ್ಕಳ : ರಂಗಭೂಮಿ ಕಲೆಯನ್ನು ಉಳಿಸಿ ಬೆಳೆಸುತ್ತಿರುವ ಕಲಾವಿದರು ಕಲಾತಪಸ್ವಿಗಳು ಎಂದು ಸಾಹಿತಿ ಡಾ.ಸಯ್ಯದ್ ಝಮಿರುಲ್ಲ ಷರೀಫ್ ನುಡಿದರು.

ಅವರು ಇಲ್ಲಿನ ಕೊಣಾರದ ಸ.ಹಿ.ಪ್ರಾ.ಶಾಲೆಯ ಆವರಣದಲ್ಲಿ ನಡೆದ ಶ್ರೀ ಗುರು ರಂಗಭೂಮಿ‌, ಜನಪದ ಹಾಗೂ ಸಾಂಸ್ಕೃತಿಕ ಕಲಾ ಸಂಘದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಹಿರಿಯ ರಂಗಭೂಮಿ ಕಲಾವಿದರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು. ‌

ಇಂದು ಟಿ.ವಿ. ಮತ್ತು ಮೊಬೈಲ್ ನಿಂದಾಗಿ ನಾಟಕ ಮತ್ತಿತರ ರಂಗಕಲೆಗಳೆಡೆಗಿನ ಆಸಕ್ತಿ ಕಡಿಮೆಯಾಗುತ್ತಿದೆ. ರಂಗ ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ಕಾರ್ಯವನ್ನು ನಾವೆಲ್ಲ ಮಾಡಬೇಕಿದೆ‌ ಸಂಘವು ಕಲಾವಿದರ ಆರ್ಥಿಕ ಮತ್ತು ಅನಾರೋಗ್ಯದ ಸಂಕಷ್ಟಗಳ ಸಂದರ್ಭದಲ್ಲಿ ನೆರವಾಗಲು ಒಂದು ನಿಧಿಯನ್ನು ಸ್ಥಾಪಿಸಿಕೊಳ್ಳಬೇಕು. ಅದಕ್ಕೆ ಎಲ್ಲ ದಾನಿಗಳ ಕಲಾಭಿಮಾನಿಗಳ ನೆರವು ಸಿಗಬೇಕಿದೆ ಎಂದರಲ್ಲದೇ ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ರಂಗಭೂಮಿ ಕಲಾವಿದರನ್ನು ಸನ್ಮಾನಿಸುತ್ತಿರುವುದು ನಿಜಕ್ಕೂ ಅಭಿನಂದನಾರ್ಹ ಕಾರ್ಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಸಾಹಿತ್ಯದ ಪ್ರಕಾರಗಳ ಲ್ಲೊಂದಾದ ನಾಟಕ ಸಾಹಿತ್ಯವನ್ನು ಜನರಿಗೆ ತಲುಪಿಸುವಲ್ಲಿ ರಂಗಭೂಮಿ ಕಲಾವಿದರ ಪಾತ್ರ ಮುಖ್ಯವಾದುದು. ಶ್ರೀ ಗುರು ರಂಗಭೂಮಿ ಕಲಾ ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಹಿರಿಯ ರಂಗಕಲಾವಿದರನ್ನು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಗುತ್ತಿದೆ‌‌. ಕಲೆ‌, ಸಾಹಿತ್ಯ ಸಂಸ್ಕೃತಿಯ ಜೊತೆಗೆ ವಿವಿಧ ಕ್ಷೇತ್ರದ ಸಾಧಕರನ್ನು ಪರಿಷತ್ತಿನ ಮೂಲಕ ಗುರುತಿಸಿ ಗೌರವಿಸುವ ಕೆಲಸವನ್ನು ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದರು.

ಸಾಹಿತ್ಯ ಪರಿಷತ್ ವತಿಯಿಂದ ಹಿರಿಯ ರಂಗಭೂಮಿ‌ ಕಲಾವಿದರಾದ ಶ್ರೀಧರ ನಾಯ್ಕ ಆಸರಕೇರಿ, ವೆಂಕಟೇಶ ನಾಯ್ಕ ತಲಗೋಡು, ಗಣಪತಿ ಆಚಾರ್ಯ, ದೇವನಾಯ್ಕ ಹಾಗೂ ಜಗದೀಶ ನಾಯ್ಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಗುರು ರಂಗಭೂಮಿ‌ ಕಲಾ ಸಂಘದ ಅಧ್ಯಕ್ಷ ಜಗದೀಶ ನಾಯ್ಕ, ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್, ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ, ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ, ಸಿದ್ಧಿವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ನಾಗೇಶ ನಾಯ್ಕ, ಕೊಣಾರ ಗ್ರಾ.ಪಂ.ಮಾಜಿ ಅಧ್ಯಕ್ಷ ರಾಧಾಕೃಷ್ಣ ಉಪಾಧ್ಯಾಯ, ಶಾಲಾ‌ ಎಸ್.ಡಿ.ಎಂ.ಸಿ.ಅಧ್ಯಕ್ಷ ಸಂಕಯ್ಯ ಗೊಂಡ, ರಂಗಭೂಮಿ‌ ಸಂಘದ ಗೌರವಾಧ್ಯಕ್ಷ ಅಶೋಕ ಮಹಾಲೆ, ಮಾಜಿ ಗೌರವಾಧ್ಯಕ್ಷ ಕೆ.ಆರ್.ನಾಯ್ಕ, ಶ್ರೀಧರ‌ ಹೆಗಡೆ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಶ್ರೀ ಗುರು ರಂಗಭೂಮಿ ಸಂಘದವರು ಸಾಹಿತಿ ಡಾ.ಸಯ್ಯದ ಜಮೀರುಲ್ಲ ಷರೀಫ್ , ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಹಾಗೂ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ‌ಲ್ಲಿ ರಂಗ ಭೂಮಿ ಕಲಾ ಸಂಘದ ಸದಸ್ಯರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು. ಈ ಹಿಂದೆಯೂ ಸಾಹಿತ್ಯ ಪರಿಷತ್ತಿನಿಂದ ರಂಗಭೂಮಿ‌ ಕಲಾವಿದರಾದ ಅಶೋಕ ಮಹಾಲೆ, ಕೆ.ಆರ್.ನಾಯ್ಕ, ಎಸ್.ಎನ್.ದೇವಾಡಿಗ, ಗೋವಿಂದ‌ ದೇವಾಡಿಗ, ನಝೀರ್ ಸಾಬ್ ಮುಂತಾದವರನ್ನು ಸನ್ಮಾನಿಸಿರುವುದನ್ನು ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X