Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಯುವಕರನ್ನು ಹಿಂದುತ್ವದ ಹೆಸರಿನಲ್ಲಿ...

ಯುವಕರನ್ನು ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ತಪ್ಪು ದಾರಿಗೆ ಎಳೆಯುತ್ತಿದೆ: ಡಾ.ಅಂಜಲಿ ಆರೋಪ

ವಾರ್ತಾಭಾರತಿವಾರ್ತಾಭಾರತಿ1 April 2024 10:27 PM IST
share
ಯುವಕರನ್ನು ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ತಪ್ಪು ದಾರಿಗೆ ಎಳೆಯುತ್ತಿದೆ: ಡಾ.ಅಂಜಲಿ ಆರೋಪ

ದಾಂಡೇಲಿ: ಕೇವಲ ಸುಳ್ಳು ಹೇಳುವವರು ಬಿಜೆಪಿಗರು. ಸಂತ ಮಹಾತ್ಮರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದುತ್ವದ ಹೆಸರಿನಲ್ಲಿ ಯುವಕರನ್ನ ತಪ್ಪು ದಾರಿಗೆ ಎಳೆಯುವ ಕೆಲಸ ಬಿಜೆಪಿಯಿಂದ ಆಗುತ್ತಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಆರೋಪಿಸಿದರು.

ದಾಂಡೇಲಿಯಲ್ಲಿ ಹಮ್ಮಿಕೊಂಡಿದ್ದ ಉತ್ತರಕನ್ನಡ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆ ಬಿಜೆಪಿ- ಕಾಂಗ್ರೆಸ್ ನದ್ದಲ್ಲ; ಬಡವರ- ಯುವಕರ- ಮಹಿಳೆಯರಿಗೆ ಸಿಗಬೇಕಾದ ನ್ಯಾಯದ ಹೋರಾಟವಿದು. ಚುನಾವಣೆ ಬರತ್ತೆ, ಹೋಗತ್ತೆ. ಆದರೆ ನಿರಂತರವಾಗಿ ಜನರಿಗೆ ನೆರವಾಗುವ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಮಾಡಿದ ಕೆಲಸದ ಮೇಲೆ ಮತ ಕೇಳುತ್ತದೆ. ನುಡಿದಂತೆ ಐದು ಗ್ಯಾರಂಟಿಯನ್ನ ಜನರಿಗೆ ಮುಟ್ಟಿಸಿದ್ದೇವೆ. ನಮ್ಮ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಮೂಲಕ ಜನ್ ಕೀ ಬಾತ್ ಕೇಳಿದರು; ಬಿಜೆಪಿಗರದ್ದು ಕೇವಲ ಮನ್ ಕೀ ಬಾತ್ ಎಂದರು.

ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆದ ಆರ್.ವಿ.ದೇಶಪಾಂಡೆ ಮಾತನಾಡಿ, ಯಾವುದೇ ಪರಿಸ್ಥಿತಿಯಲ್ಲಿ ಈ ಚುನಾವಣೆಯನ್ನ ಶತಾಯಗತಾಯವಾಗಿ ಗೆಲ್ಲಲೇಬೇಕಿದೆ. ಹಿಂದೆ ಮಹಿಳೆ ಮಾರ್ಗರೇಟ್ ಆಳ್ವಾ ಈ ಕ್ಷೇತ್ರದಲ್ಲಿ ಸಂಸದರಾಗಿದ್ದರು, ಈ ಬಾರಿಯೂ ಮಹಿಳೆ ಡಾ.ಅಂಜಲಿ ನಿಂಬಾಳ್ಕರ್ ಗೆದ್ದೇ ಗೆಲ್ಲುತ್ತಾರೆ; ಇದು ದೇಶಪಾಂಡೆ ಗ್ಯಾರಂಟಿ ಎಂದರು.

ಭಿನ್ನಾಭಿಪ್ರಾಯ ಮರೆತು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ೬ ಬಾರಿ ಬಿಜೆಪಿ ಸಂಸದರು ಆಯ್ಕೆಯಾದರೂ ಏನೂ ಅಭಿವೃದ್ಧಿ ಆಗಿಲ್ಲ. ಸೀಬರ್ಡ್, ಕೈಗಾ ಬಂದಿದ್ದು, ಪ್ರವಾಸೋದ್ಯಮ ಅಭಿವೃದ್ಧಿ ಆಗಿದ್ದು ನನ್ನ ಅವಧಿಯಲ್ಲಿ. ಮೋದಿ ಸರ್ಕಾರದ 10 ವರ್ಷದಲ್ಲಿ ಉದ್ಯೋಗ ಸೃಷ್ಟಿಯೂ ಆಗಿಲ್ಲ, ಪ್ರವಾಸೋದ್ಯಮ ಅಭಿವೃದ್ಧಿಯೂ ಆಗಿಲ್ಲ. ಅಳ್ನಾವರ- ಧಾರವಾಡ ರೈಲು ಪ್ರಾರಂಭಿಸಲು ನಾನು ಪ್ರಯತ್ನಿಸುತ್ತಿದ್ದೇನೆ. ಆದರೆ ಬಿಜೆಪಿಗರಿಗೆ ಅಭಿವೃದ್ಧಿ ಮಾಡುವ ಮನಸ್ಥಿತಿಯೇ ಇಲ್ಲ. ಉನ್ನತ ಶಿಕ್ಷಣ ಕಲಿತವರಿದ್ದರೂ ನಿರುದ್ಯೋಗ ತಾಂಡವವಾಡುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ‌ ನಿಸ್ವಾರ್ಥದಿಂದ ಪಕ್ಷದ ಹಿತದಿಂದ ಅಭ್ಯರ್ಥಿಯ ಗೆಲುವಿಗೆ ಪಣ ತೊಡಬೇಕು ಎಂದು ಕರೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಜನರಿಗೆ ಏನು ಬೇಕೆಂಬುದನ್ನ ಯೋಚಿಸಲು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾಧ್ಯ. ಬಿಜೆಪಿ ಸುಳ್ಳು ಹೇಳುವುದನ್ನ ಬಿಟ್ಟರೆ ಬೇರೇನೂ ಮಾಡಿಲ್ಲ. ಈಗ ಮತ್ತೆ ಸುಳ್ಳನ್ನೇ ಹೇಳಿಕೊಂಡು ಜನರ ಬಳಿ ಬರುತ್ತಾರೆ. ಜಿಲ್ಲೆಯಲ್ಲಿ 30 ವರ್ಷಗಳಿಂದ ನಮ್ಮ ಸಂಸದರು ಈ ಜಿಲ್ಲೆಯಲ್ಲಿ ಇಲ್ಲವೆಂಬುದು ನಮ್ಮ ಕೊರತೆಯಾಗಿದೆ. ಹೀಗಾಗಿ ಅರಣ್ಯ ಅತಿಕ್ರಮಣ ಸೇರಿದಂತೆ ಜಿಲ್ಲೆಯಲ್ಲಿರುವ ಬಹುದೊಡ್ಡ ಸಮಸ್ಯೆಗಳ ಬಗ್ಗೆ ಸಂಸತ್ ನಲ್ಲಿ ಮಾತನಾಡ ಬೇಕಿದೆ. ಈ ಸಮಸ್ಯೆಗಳನ್ನ ಖಂಡಿತ ಡಾ.ಅಂಜಲಿ ನಿಂಬಾಳ್ಕರ್ ಸಂಸದರಾದರೆ ಬಗೆಹರಿಸಿಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಕೇಂದ್ರದಿಂದ 30 ವರ್ಷಗಳಲ್ಲಿ ಒಂದೇ ಒಂದು ಯೋಜನೆ‌ ಜಿಲ್ಲೆಗೆ ಬಂದಿಲ್ಲ. ಸಂಸತ್ ನಲ್ಲಿ ಒಮ್ಮೆಯೂ ಉತ್ತರಕನ್ನಡದ ಹೆಸರು ಬಂದಿಲ್ಲ. 30 ವರ್ಷಗಳ ಬಳಿಕ ಈ ಬಾರಿ ಒಂದು ಅವಕಾಶ ನಮ್ಮ ಪಕ್ಷಕ್ಕೆ ಕೊಟ್ಟರೆ ಡಾ.ನಿಂಬಾಳ್ಕರ್ ಸಂಸತ್ ನಲ್ಲಿ ನಿಮ್ಮ ಧ್ವನಿಯಾಗಲಿದ್ದಾರೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ಮಾತನಾಡಿ, ಮೂರು ದಶಕಗಳಿಂದ ಜಿಲ್ಲೆಯನ್ನ ಆಳಿದ ಬಿಜೆಪಿ ಸಂಸದರ ಕೊಡುಗೆ ಶೂನ್ಯ. ವಿಶ್ವೇಶ್ವರ ಹೆಗಡೆ ಕಾಗೇರಿಯವರು ಇದೀಗ ಬಿಜೆಪಿ ಅಭ್ಯರ್ಥಿ ಆಗಿದ್ದಾರೆ. ಅವರು ಕೂಡ ಈ ಹಿಂದೆ ಶಾಸಕು, ಸಚಿವರಾಗಿ ಜಿಲ್ಲೆಯನ್ನ ಇಬ್ಭಾಗ ಮಾಡಬೇಕು ಎಂದಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ. ಹೀಗಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನ ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ಅವರಿಗೆ ಸನ್ಮಾನಿಸಲಾಯಿತು. ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಮಹಿಳೆಯರಿಂದ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಅರಿಶಿನ- ಕುಂಕುಮ ನೀಡುವ ಕಾರ್ಯಕ್ರಮವೂ ನಡೆಯಿತು. ಸಭೆಗೂ ಮುನ್ನ ಅಂಬೇವಾಡಿಯ ಬಲಮುರಿ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಹಲವಾಯಿ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

"ಖಾನಾಪುರ ನಿಮಗೂ ದೂರ ಅಲ್ಲ, ನನಗೂ ಉತ್ತರಕನ್ನಡ ಹೊಸದಲ್ಲ‌. ನಿಮ್ಮ ಮನೆಮಗಳಂತೆ ಆಶೀರ್ವದಿಸಿ ಸಂಸತ್ ಗೆ ಕಳುಹಿಸಿದರೆ ಮೊದಲ ಅಧಿವೇಶನದಲ್ಲೇ ಜಿಲ್ಲೆಯ ಸಮಸ್ಯೆಗಳಿಗೆ ಧ್ವನಿಯಾಗುವೆ".

-ಡಾ.ಅಂಜಲಿ ನಿಂಬಾಳ್ಕರ್, ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X