Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. 'ನುಡಿದಂತೆ ನಡೆದ ಕಾಂಗ್ರೆಸ್' ಪಕ್ಷದ...

'ನುಡಿದಂತೆ ನಡೆದ ಕಾಂಗ್ರೆಸ್' ಪಕ್ಷದ ಅಭ್ಯರ್ಥಿ ಡಾ.ಅಂಜಲಿಗೆ ಗೆಲ್ಲಿಸಿಕೊಡಿ: ಸತೀಶ್ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ6 April 2024 8:01 PM IST
share
ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿಗೆ ಗೆಲ್ಲಿಸಿಕೊಡಿ:  ಸತೀಶ್ ನಾಯ್ಕ

ಕಾರವಾರ: ವಿಧಾನಸಭಾ ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರಂಟಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಈಡೇರಿಸಿದೆ. 'ನುಡಿದಂತೆ ನಡೆದ ಕಾಂಗ್ರೆಸ್' ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೇ ಮತದಾರರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ಗೆಲ್ಲಿಸಿಕೊಡಬೇಕಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಹೇಳಿದರು.

ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಜನರ ಬದುಕಿನ ಚುನಾವಣೆ ಆಗಿತ್ತು. ಜನರು ಬದುಕು ಕಟ್ಟಿಕೊಳ್ಳಲು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿಗೆ ತರುವ ಆಶ್ವಾಸನೆ ನೀಡಿತ್ತು. ಅದಕ್ಕಾಗಿ ಜನತೆ 136 ಸ್ಥಾನದಲ್ಲಿ ಗೆಲ್ಲಿಸಿಕೊಟ್ಟಿದ್ದರು. ಕೊಟ್ಟ ಮಾತಿನಂತೆ ಎಲ್ಲಾ ಭರವಸೆ ಈಡೇರಿಸಿದ್ದೇವೆ ಎಂದರು.

ಒಂದು ಹಳ್ಳಿಯಲ್ಲಿ ನೂರು ಮನೆ ಇದ್ದರೆ ತೊಂಬತ್ತೆಂಟು ಮನೆಗಳಿಗೆ ಗ್ಯಾರಂಟಿ ಯೋಜನೆ ಲಾಭ ತಲುಪಿದೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 3.09 ಲಕ್ಷ ಪಡಿತರ ಚೀಟಿ ಇದ್ದು, ಪ್ರತಿ ತಿಂಗಳು ಐದು ಕೆಜಿ ಅಕ್ಕಿಯ ಹಣ ಈವರೆಗೆ 129 ಕೋಟಿ ಸರ್ಕಾರ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 4.22 ಲಕ್ಣ ಸ್ಥಾವರಗಳು ನೋಂದಾವಣಿಯಾಗಿವೆ. ಈ ಪೈಕಿ 7708 ದೇವಸ್ಥಾನ, ಚರ್ಚ್, ಮಸೀದಿ, ಶೈಕ್ಷಣಿಕ ಸಂಸ್ಥೆಗಳಿವೆ. ಇದರಲ್ಲಿ ಒಟ್ಟು 3.78 ಲಕ್ಷ ಅರ್ಹ ಸ್ಥಾವರಗಳಿಗೆ ಸಂಪೂರ್ಣ ಉಚಿತ ವಿದ್ಯುತ್ ನೀಡಲಾಗುತ್ತಿದೆ. 115.59 ಕೋಟಿ ಹಣವನ್ನು ಗೃಹಜ್ಯೋತಿ ಯೋಜನೆಯಡಿ ಸರ್ಕಾರ ಜನರ ಪರವಾಗಿ ವಿದ್ಯುತ್ ಸರಬರಾಜು ಕಂಪನಿಗಳಿಗೆ ಪಾವತಿಸಿದೆ ಎಂದರು.

ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ ಅರ್ಹ 3.19 ಲಕ್ಷ ಮಹಿಳೆಯರಲ್ಲಿ 3.14 ಮಹಿಳೆಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಅವರಿಗೆ 389,43,30,000 ಕೋಟಿ ಹಣವನ್ನ ಈ ಯೋಜನೆಯಡಿ ಹಣ ಸಂದಾಯ ಮಾಡಿದೆ.‌ ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 4,76,09,054 ಮಹಿಳೆಯರು ಲಾಭವನ್ನ ಪಡೆದಿದ್ದು, ಒಟ್ಟು 135,26,48,671 ರೂಪಾಯಿ ಸಂದಾಯ ಮಾಡಿದೆ. 1,72,497 ಮಹಿಳೆಯರು ಪ್ರತಿ ದಿನ ಇದರ ಲಾಭ ಪಡೆಯುತ್ತಿದ್ದು, ಪ್ರತಿ ದಿನ 49,00,901 ಲಕ್ಷ ಹಣವನ್ನ ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ಸಂದಾಯ ಮಾಡುತ್ತಿದೆ ಎಂದು ಹೇಳಿದರು.

ಯುವನಿಧಿ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ 3611 ಅರ್ಜಿ ನೊಂದಾಯಿಸಲಾಗಿದ್ದು, ಜಿಲ್ಲೆಯಲ್ಲಿ ಯಶಸ್ವಿಯಾಗಿ ಜನರಿಗೆ ಗ್ಯಾರಂಟಿ ಯೋಜನೆಯನ್ನ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಸರ್ಕಾರ ಈ ಸವಲತ್ತುಗಳನ್ನು ಫಲಾನುಭವಿಗಳಿಗೆ ಮುಟ್ಟಿಸಲು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ರಚನೆ ಮಾಡಿದೆ.‌ ಯಾರಿಗೆ ಗ್ಯಾರಂಟಿ ಯೋಜನೆ ತಲುಪದೇ ಇದ್ದರೆ ಅದನ್ನ ತಲುಪಿಸುವ ಕೆಲಸವನ್ನ ಪ್ರಾಧಿಕಾರ ಮಾಡಲಿದೆ. ಯಾರಿಗೇ ಸಮಸ್ಯೆ ಇದ್ದರೂ ಪ್ರಾಧಿಕಾರದ ಗಮನಕ್ಕೆ ತರುವಂತೆ ಮನವಿ ಮಾಡಿಕೊಂಡಿದ್ದಾರೆ.

ದೇವರಾಜ್ ಅರಸು ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದಿದ್ದರು. ಆಗ ಪ್ರತಿ ಮನೆಯವರೂ ಇದರ ಸದುಪಯೋಗ ಮಾಡಿಕೊಂಡಿದ್ದಾರೆ. ಅದರಂತೆ ಈಗ ಗ್ಯಾರಂಟಿ ಯೋಜನೆಯ ಲಾಭವನ್ನ ಸಹ ಪ್ರತಿ ಮನೆಯವರು ಪಡೆದಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗೆ ತಂದಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಹುಮ್ಮಸ್ಸು ತಂದಿದೆ. ಪ್ರತಿ ಮನೆಗೆ ವಿಶ್ವಾಸದಿಂದ ಹೋಗಿ ಮತ ಕೇಳುವ ಹಕ್ಕು ಪಕ್ಷ ತಂದು ಕೊಟ್ಟಿದ್ದು, ಈ ಬಾರಿಯೂ ಮತದಾರರು ಕಾಂಗ್ರೆಸ್ ಪಕ್ಷದ ಪರ ಮತಚಲಾಯಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ ನಾಯ್ಕ, ಹೊನ್ನಾವರದ ಅಣ್ಣಪ್ಪ ನಾಯ್ಕ, ಕಾಂಗ್ರೆಸ್ ಮುಖಂಡ ರಾದ‌ ನಾಗರಾಜ ಮುರ್ಡೇಶ್ವರ, ರಾಜೇಂದ್ರ ರಾಣೆ, ಅಶೋಕ್ ಗೌಡ, ಪಾಂಡುರಂಗ ಗೌಡ, ಶಂಕರ್ ಅಳಿಗುಂಜಿ, ಎಂಪಿ ಗೌಡ, ಚಂದ್ರಕಾಂತ ಆಗೇರ, ರಾಜೇಶ ಚಂದ್ರಕಾಂತ ನಾಯ್ಕ, ಗಿರೀಶ್ ಪಟಗಾರ್, ಸ್ನೇಹ ಹಳದಂಕರ್, ಬಾಬು ಶೇಖ್, ನೂತನ್ ಜೈನ್, ರಮೇಶ ಮುದಗೇಕರ್ ಉಪಸ್ಥಿತರಿದ್ದರು.

"ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿದ್ಯಾವಂತ ಅಭ್ಯರ್ಥಿ. ಓರ್ವ ‌ವೈದ್ಯೆ ಈ ಬಾರಿ ಅಭ್ಯರ್ಥಿಯಾಗಿರುವುದರಿಂದ ಹಾಗೂ ಗ್ಯಾರಂಟಿ ಯೋಜನೆ ಸದುಪಯೋಗ ಪಡಿಸಿಕೊಂಡ ಜನರು ಕಾಂಗ್ರೆಸ್ ಪರ ಮತ ಚಲಾಯಿಸುವ ವಿಶ್ವಾಸವಿದೆ".

- ಸತೀಶ್ ನಾಯ್ಕ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X