Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಖಾಸಗಿ ಬಸ್ ನಲ್ಲಿ ಯುವಕನ ಮೇಲೆ...

ಭಟ್ಕಳ: ಖಾಸಗಿ ಬಸ್ ನಲ್ಲಿ ಯುವಕನ ಮೇಲೆ ಪ್ರಕರಣಕ್ಕೆ ಹೊಸ ತಿರುವು

ವಾರ್ತಾಭಾರತಿವಾರ್ತಾಭಾರತಿ3 July 2024 11:18 PM IST
share
ಭಟ್ಕಳ: ಖಾಸಗಿ ಬಸ್ ನಲ್ಲಿ ಯುವಕನ ಮೇಲೆ ಪ್ರಕರಣಕ್ಕೆ ಹೊಸ ತಿರುವು

ಭಟ್ಕಳ: ಹೈದರಾಬಾದಿನಿಂದ ಭಟ್ಕಳಕ್ಕೆ ಬರುತ್ತಿದ್ದ ಯುವಕನ ಮೇಲೆ ಖಾಸಗಿ ಬಸ್ ನಲ್ಲಿ ಸೋಮವಾರ ರಾತ್ರಿ ನಡೆದ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಬಸ್ಸಿನಲ್ಲಿ ಯುವಕನ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಬಸ್ ವ್ಯವಸ್ಥಾಪಕ ಮಂಗಳೂರಿನ ಮನೀಷ್ ಬುಧವಾರದಂದು ತಂಝೀಂ ನಿಯೋಗದ ಮುಂದೆ ಸ್ಪಷ್ಟೀಕರಣ ನೀಡಿದ್ದಾರೆ.

ಬಸ್ ನಲ್ಲಿ ಚಾಲಕ, ನಿರ್ವಾಹಕ ಮತ್ತು ಪ್ರಯಾಣಿಕರು ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಹಲ್ಲೆಗೊಳಗಾಗಿರುವ ಹೆಬಳೆ ಗ್ರಾ.ಪಂ.ನಿವಾಸಿ ಮುಜೀಬುರ್ರಹ್ಮಾನ್ ಮತ್ತವರ ಕುಟುಂಬ ಮಂಗಳವಾರ ಮಂಗಳೂರಿನಿಂದ ಹೈದರಾಬಾದ್ ಗೆ ತೆರಳುವ ಖಾಸಗಿ ಬಸ್ ನ್ನು ಭಟ್ಕಳದಲ್ಲಿ ತಡೆಯಲು ಪ್ರಯತ್ನಿಸಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಮಾಡಿಕೊಡದೆ ಬಸ್ಸನ್ನು ಸುರಕ್ಷಿತವಾಗಿ ಕಳುಹಿಸಿದ್ದರು.

ಇದೇ ಘಟನೆಗೆ ಸಂಬಂದಿಸಿದಂತೆ ಆಕ್ರೋಶಿತ ಭಟ್ಕಳದ ಯುವಕರು ತಂಝೀಮ್ ಕಚೇರಿಗೆ ತೆರಳಿ ಘಟನೆಯ ಬಗ್ಗೆ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಎಂದು ದೂರಿದ್ದರು. ತಂಝೀಂ ನಿಯೋಗವು ರಾತ್ರಿ ಪೊಲೀಸ್ ಠಾಣೆಗೆ ತೆರಳಿ ಘಟನೆಯನ್ನು ವಿವರಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದು ಘಟನೆ ನಡೆದ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾಯಿಸುವುದಾಗಿ ತಿಳಿಸಿದ್ದರು. ಅದರಂತೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ಬುಧವಾರದಂದು ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿಯವರ ನೇತೃತ್ವದಲ್ಲಿ ಮಂಗಳೂರು ಖಾಸಗಿ ಬಸ್ ವ್ಯವಸ್ಥಾಪಕ ಮನೀಷ್ ಎಂಬುವವರನ್ನು ಕರೆಸಿ ಸಭೆ ನಡೆಸಿದ್ದು ಘಟನೆಯ ವಿವರವನ್ನು ಪಡೆದುಕೊಂಡು.

ಬಸ್ ವ್ಯವಸ್ಥಾಪಕರ ಪ್ರಕಾರ ಬಸ್ಸಿನಲ್ಲಿ ಯಾವುದೇ ಹಲ್ಲೆ ಆಗಲಿಲ್ಲ. ಯುವಕನೆ ಅಸಹಜವಾಗಿ ವರ್ತಿಸಿದ್ದು ಜ್ವರ ಬಂದಿದೆ ಎಂದು ಹೇಳಿ ಜ್ವರ ಮಾತ್ರೆ ಪಡೆದುಕೊಂಡಿದ್ದಾನೆ. ಅಲ್ಲದೆ ಪ್ರಯಾಣಿಕನೊಬ್ಬ ನನ್ನ ಮೇಲೆ ಹಲ್ಲೆ ಮಾಡುತ್ತಿದ್ದಾನೆ. ನಾನು ಸೀಟಿನಲ್ಲಿ ಮಲಗಿಕೊಳ್ಳುವುದಿಲ್ಲ ಎಂದು ಹೇಳಿ ಚಾಲಕನ ಕ್ಯಾಬಿನ್ ನಲ್ಲಿ ಕುಳಿತುಕೊಂಡಿದ್ದಾನೆ. ಗಂಗಾವತಿ ಟೋಲ್ ಬಳಿ ಶೌಚಕ್ಕಾಗಿ ಬಸ್ ನಿಲ್ಲಿಸಿದಾಗಿ ಅಲ್ಲಿಂದ ಓಡಿಹೋಗಿದ್ದಾನೆ. 25ನಿಮಿಷ ಕಾದರೂ ಬರಲಿಲ್ಲ. ಮುಬೈಲ್ ಕರೆ ಮಾಡಿದರೂ ಕರೆಯನ್ನು ಸ್ವೀಕರಿಸಲಿಲ್ಲ. ಈ ವಿಷಯವನ್ನು ಯುವಕ ಟಿಕೆಟ್ ಬುಕ್ ಮಾಡಿದ ಎಜೆಂಟರಿಗೆ ತಿಳಿಸಿ ಅಲ್ಲಿಂದ ಬಸ್ ನ್ನು ಬಿಡಲಾಯಿತು. ಅರ್ಧ ಗಂಟೆಯ ನಂತರ ಯುವಕನ ಮೊಬೈಲ್ ನಿಂದ ಕರೆ ಬಂದಿದ್ದು ಯಾರೋ ಬೇರೆಯವರು ಮಾತನಾಡಿ ಈ ಯುವಕ ಯಾರು ಇಲ್ಲಿನ ಮನೆಯೊಂದರ ಒಳಗೆ ಹೊಕ್ಕು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ಹೇಳಿದರು. ಹಿಂದಿನಿಂದ ನನಗೆ ಹೊಡೆಯುತ್ತಿದ್ದಾರೆ ಎಂಬ ಯುವಕನ ಧ್ವನಿ ಕೇಳಿ ಬರುತ್ತಿತ್ತು ಎಂದು ಮಾಹಿತಿ ನೀಡಿದ್ದಾರೆ.

ಬಸ್‍ನಲ್ಲಿ ಸಿಸಿಟಿವಿ ಕ್ಯಾಮರಾದ ಕುರಿತು ಕೇಳಿದಾಗ ಅದು ಹಾಳಾಗಿದೆ ಎಂಬ ಉತ್ತರ ನೀಡಿದ್ದಾರೆ. ಈ ಘಟನೆಯು ಇನ್ನೂ ಅಸ್ಪಷ್ಟವಾಗಿದ್ದು ಪೊಲೀಸರ ಸಮರ್ಪಕ ತನಿಖೆಯಿಂದಷ್ಟೆ ನಿಜ ಬಯಲಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X