Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮೀನು ಸಂತತಿ ರಕ್ಷಣೆಗಾಗಿ ಕಾಯ್ದೆ...

ಮೀನು ಸಂತತಿ ರಕ್ಷಣೆಗಾಗಿ ಕಾಯ್ದೆ ರೂಪಿಸಬೇಕು: ಮೀನುಗಾರಿಕಾ ಸಚಿವ ಮಾಂಕಾಳ್ ವೈದ್ಯ

"ರಾಜ್ಯ ಮೀನುಗಾರರಿಗೆ 3000 ಕೋಟಿ ರೂ. ಬಜೆಟ್ ಮೀಸಲು"

ವಾರ್ತಾಭಾರತಿವಾರ್ತಾಭಾರತಿ10 July 2024 10:02 PM IST
share
ಮೀನು ಸಂತತಿ ರಕ್ಷಣೆಗಾಗಿ ಕಾಯ್ದೆ ರೂಪಿಸಬೇಕು: ಮೀನುಗಾರಿಕಾ ಸಚಿವ ಮಾಂಕಾಳ್ ವೈದ್ಯ

ಭಟ್ಕಳ: ಮೀನು ಸಂತತಿ ರಕ್ಷಣೆಗಾಗಿ ಸೂಕ್ತ ಕಾಯ್ದೆಯ ಅವಶ್ಯಕತೆ ಇದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಮೀನುಗಾರರು ಸಂಘಟಿತರಾಗಿ ಒಂದು ನಿರ್ಣಯಕ್ಕೆ ಬಂದರೆ ಮೀನಿನ ಸಂತತಿ ಉಳಿಸಲು ಕಾಯ್ದೆ ರೂಪಿಸಲಾಗುವುದು ಎಂದು ರಾಜ್ಯ ಬಂದರು ಹಾಗೂ ಮೀನುಗಾರಿಕಾ ಸಚಿವಾ ಮಾಂಕಾಳ್ ಎಸ್ ವೈದ್ಯ ಹೇಳಿದರು.

ಅವರು ತಾಲ್ಲೂಕಿನ ಗೊರ್ಟೆಯ ಎಂ ಎಂ ರೆಸಾರ್ಟಿನಲ್ಲಿ ಬುಧವಾರ ಮೀನುಗಾರಿಕೆ ಇಲಾಖೆಯಿಂದ ಏರ್ಪಡಿಸಲಾದ ಮೀನುಗಾರ ಕೃಷಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮೀನುಗಾರಿಕೆ ಇಲಾಖೆಯನ್ನು ಮೀನುಗಾರ ಸ್ನೇಹಿಯನ್ನಾಗಿ ಮಾಡಲಾಗಿದೆ. ಮೀನುಗಾರಿಕಾ ಇಲಾಖೆಯಲ್ಲಿ ಮೀನುಗಾರರ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಲು ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ. ಈ ಹಿಂದೆ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕಾ ಅಭಿವೃದ್ಧಿಗೆ ಕೇವಲ 300 ಕೋಟಿ ಅನುದಾನ ನೀಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರಕಾರ ಬಜೆಟ್ ನಲ್ಲಿ ಮೀನುಗಾರರಿಗೆ 3 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ. ರಾಜ್ಯ ಸರಕಾರ ಮೀನುಗಾರರಿಗೆ ಡಿಸೇಲ್ , ಸೀಮೆ ಎಣ್ಣೆಗೆ ಸಬ್ಸಿಡಿ ನೀಡಿ ಮೀನುಗಾರರಿಗೆ ನೆರವಾಗುತ್ತಿದ್ದರೂ ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರಕಾರ ಮೀನುಗಾರರಿಗೆ ಯಾವುದೇ ಸಬ್ಸಿಡಿ ನೀಡಲಿಲ್ಲ. ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಮೃತಪಟ್ಟ ಮೀನುಗಾರರಿಗೆ ನೀಡುವ ಪರಿಹಾರವನ್ನು 6 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, 24 ಗಂಟೆಗಳಲ್ಲಿ ಕುಟುಂಬಕ್ಕೆ ಪರಿಹಾರ ತಲುಪಿಸುವ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಪೆಟ್ಟಾದರೆ ಅಂಥವರಿಗೆ ಸೂಕ್ತ ಚಿಕಿತ್ಸೆ, ಕೈ,ಕಾಲು ಶಾಶ್ವತವಾಗಿ ಕಳೆದುಕೊಂಡಲ್ಲಿ 4 ಲಕ್ಷ ರೂ. ನೀಡಲಾಗುತ್ತಿದೆ. ಮೀನುಗಾರರು ಬೋಟು ಪರವಾನಿಗೆ ಸೇರಿ ದಂತೆ ಯಾವುದಕ್ಕೂ ಇಲಾಖೆಗೆ ಹೋಗಿ ಕೈಕಟ್ಟಿ ನಿಲ್ಲಬಾರದು ಎನ್ನುವ ಉದ್ದೇಶದಿಂದ ತ್ವರಿತವಾಗಿ ಪರವಾನಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮೀನುಗಾರರಿಗೋಸ್ಕರ ಮತ್ಸ್ಯಾಶ್ರಯ ಯೋಜನೆಯಡಿಲ್ಲಿ 10 ಸಾವಿರ ಮನೆ ಮಂಜೂರಿ ಸಲಾಗಿದೆ. ಮೀನುಗಾರರಿಗೆ ಅಪಘಾತ, ಅವಘಡದ ಸಂದರ್ಭದಲ್ಲಿ ತಕ್ಷಣ ಆಸ್ಪತ್ರೆಗೆ ಸಾಗಿಸಲು ಸೀ ಅಂಬುಲೆನ್ಸ್‌ ಯೋಜನೆ ಜ್ಯಾರಿ ತರಲಾಗುತ್ತಿದೆ. ಇದಕ್ಕೆ ಆರಂಭಿಕವಾಗಿ 5 ಕೋಟಿ ತೆಗೆದಿರಿಸಲಾಗಿದೆ ಎಂದ ಅವರು ಬೈಂದೂರಿನಲ್ಲಿ 100 ಕೋಟಿ ವೆಚ್ಚದಲ್ಲಿ ಸೀ ಪಾರ್ಕ ಯೋಜನೆ ಅನುಷ್ಠಾಗೊಳಿಸಲಾಗುತ್ತಿದೆ. ಇದಕ್ಕೆ ಈಗಾಗಲೇ ಜಾಗ ನೋಡಲಾಗಿದ್ದು, ಇದು ಅನಷ್ಠಾನಗೊಂಡರೆ 1 ಸಾವಿರ ಕೋಟಿ ವ್ಯವಹಾರ ಆಗಲಿದ್ದು, 1000 ಕ್ಕೂ ಅಧಿಕ ಜನರಿಗೆ ಉದ್ಯೋಗ ಸಿಗಲಿದೆ. ಮತ್ಸ್ಯವಾಹಿನಿ ಯೋಜನೆಯನ್ನು ಆರಂಭಿಕವಾಗಿ ಬೆಂಗಳೂರು ಮತ್ತಿತರ ಕಡೆ ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ತಾಲ್ಲೂಕು, ಜಿಲ್ಲೆಯಲ್ಲೂ ಆರಂಭಿಸಲಾಗುತ್ತದೆ. ಮೀನುಗಾರಿಕೆ ಉಳಿಸಿ ಬೆಳೆಸುವ ಉದ್ದೇಶದಿಂದ ಈ ಬಗ್ಗೆ ಸಂಶೋಧನೆ ಅಗತ್ಯವಿದ್ದು, ಆ ನಿಟ್ಟಿನಲ್ಲಿ ಹೊನ್ನಾವರ ಮಂಕಿಯಲ್ಲಿ ಮೀನುಗಾರಿಕಾ ಸಂಶೋಧನಾ ಕೇಂದ್ರ ಆರಂಭಿ ಸಲಾಗುತ್ತಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮೀನುಗಾರರಿಗೆ ಬಾಕಿ ಇದ್ದ ಸಂಕಷ್ಟ ಪರಿಹಾರ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನೂ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಮೀನುಗಾರರಿಗೆ ಮತ್ತಷ್ಟು ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು ಎಂದರು.

ಉಪಸ್ಥಿತರಿದ್ದ ಜಿಲ್ಲಾ ಮೀನುಗಾರಿಕೆ ಫೆಡರೇಶನ್ ನ ನಿರ್ದೇಶಕ ವಿಠ್ಠಲ್ ದೈಮನೆ, ಮದನಕುಮಾರ ಬೈಂದೂರು, ಕುಮಟಾದ ಜೈ ವಿಠ್ಠಲ ಕುಬಾಲ ಮಾತನಾಡಿ, ಮಂಕಾಳ ವೈದ್ಯರು ಮೀನುಗಾರಿಕಾ ಸಚಿವರಾದ ಮೇಲೆ ಮೀನುಗಾರಿ ಇಲಾಖೆ ಸಾಕಷ್ಟು ಬದಲಾವಣೆ ಆಗಿ ಮೀನುಗಾರರಿಗೆ ಹೆಚ್ಚಿನ ಸೌಲಭ್ಯ ಸಿಗುವಂತಾಗಿದೆ ಎಂದರು.

ವೇದಿಕೆಯಲ್ಲಿ ಕೆ ಎಪ್ ಡಿಸಿ ಎಂ ಡಿ ಕೆ ಗಣೇಶ, ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಶಿವಕುಮಾರ, ಕಡಲ ಉತ್ಪನ್ನ ಅಭಿವೃದ್ಧಿ ಪ್ರಾಧಿಕಾರ ಉಪನಿರ್ದೇಶಕ ರಾಜಕುಮಾರ ನಾಯಕ, ಜಂಟಿ ನಿರ್ದೇಶಕ ಸಿದ್ದಯ್ಯ, ಜಿಲ್ಲಾ ಮೀನುಗಾರಿಕಾ ನಿರ್ದೇಶಕ ಪ್ರತೀಕ ಶೆಟ್ಟಿ, ಭಟ್ಕಳ ತಾಪಂ ಕಾರ್ಯನಿರ್ವಹಣಾಧಿಕಾರಿ ವಿ ಡಿ ಮೊಗೇರ, ಬೆಳಕೆ ಗ್ರಾಪಂ ಅಧ್ಯಕ್ಷ ಜಗದೀಶ ನಾಯ್ಕ, ಸಂಕಷ್ಟ ಪರಿಹಾರ ನಿಧಿ ಸದಸ್ಯ ವೆಂಕಟ್ರಮಣ ಮೊಗೇರ, ನಾರಾಯಣ ಮೊಗೇರ, ಭಟ್ಕಳ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ಮುಂತಾದವರಿದ್ದರು. ಜಿಲ್ಲಾ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಿಪಿನ್ ಬೋಪಣ್ಣ ಸ್ವಾಗತಿಸಿದರೆ, ರಾಜ್ಯ ಮೀನುಗಾರಿಕಾ ಇಲಾಖೆಯ ನಿರ್ದೇಶಕ ದಿನೇಶ ಕುಮಾರ ಪ್ರಸ್ತಾವಿಕ ಮಾತನಾಡಿದರು.

ನಾಗರಾಜ ಮೊಗೇರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮೀನುಗಾರಿಕಾ ಇಲಾಖೆಯ ಕೈಪಿಡಿ ಬಿಡುಗೆಗೊಳಿಸಲಾಯಿತು. ಮತ್ಸ್ಯಾಶ್ರಯ ಯೋಜನೆಯ ಆದೇಶ ಪತ್ರ ಮತ್ತು ಸಂಕಷ್ಟ ಪರಿಹಾರ ನಿಧಿಯ ಚೆಕ್ ನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X