Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕಾರವಾರ| ಕಾಳಿ ಹಳೆ ಸೇತುವೆ ಕುಸಿತ:...

ಕಾರವಾರ| ಕಾಳಿ ಹಳೆ ಸೇತುವೆ ಕುಸಿತ: ಐಆರ್‌ಬಿ ಕಂಪೆನಿ ವಿರುದ್ಧ ಪ್ರಕರಣ ದಾಖಲು

ಉ.ಕ.ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 Aug 2024 6:28 PM IST
share
ಕಾರವಾರ| ಕಾಳಿ ಹಳೆ ಸೇತುವೆ ಕುಸಿತ: ಐಆರ್‌ಬಿ ಕಂಪೆನಿ ವಿರುದ್ಧ ಪ್ರಕರಣ ದಾಖಲು

ಕಾರವಾರ: ಸದಾಶಿವಗಢಕ್ಕೆ ಸಂಪರ್ಕ ಕಲ್ಪಿಸುವ ಕಾಳಿ ನದಿಗೆ ಕಟ್ಟಲಾಗಿದ್ದ ಹಳೆಯ ಸೇತುವೆ ಮಂಗಳವಾರ ಮಧ್ಯರಾತ್ರಿ ಕುಸಿದು ಬಿದ್ದಿದ್ದು, ಪರಿಣಾಮ ಸದಾಶಿವಗಢ ಮತ್ತು ಕಾರವಾರ ನಡುವಿನ ಸಂಪರ್ಕ ಕಡಿತಗೊಂಡಿದೆ.

ಗೋವಾದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಟ್ರಕ್ ಕುಸಿತದ ನಂತರ ನದಿಗೆ ಬಿದ್ದಿದೆ. ಟ್ರಕ್ ಚಾಲಕ ಬಾಲ ಮುರ್ಗನ್ ಟ್ರಕ್‌ನ ಮುಂಭಾಗದ ಗಾಜನ್ನು ಒಡೆದು ಛಾವಣಿಯ ಮೇಲೆ ಹತ್ತಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡವು ಇದನ್ನು ಗಮನಿಸಿದ್ದು, ನಂತರ ಅಗ್ನಿಶಾಮಕ ದಳ, ಕರಾವಳಿ ಭದ್ರತಾ ಪೊಲೀಸರು ಮತ್ತು ಸ್ಥಳೀಯ ಮೀನುಗಾರರು ಕೂಡಲೇ ಕಾರ್ಯಪ್ರವೃತ್ತರಾಗಿ ಮುರ್ಗನ್ ರನ್ನು ರಕ್ಷಿಸಿದ್ದಾರೆ.

ಸೇತುವೆ ಕುಸಿತದಿಂದಾಗಿ ಬೇರೇನಾದರೂ ಅನಾಹುತಗಳು ಸಂಭವಿಸಿರಬಹುದು ಎಂಬ ಅನುಮಾನದಿಂದ ಅದನ್ನು ಖಚಿತ ಪಡಿಸಿಕೊಳ್ಳಲು NDRF, SDRF, ಕರಾವಳಿ ಪೊಲೀಸರು ಮತ್ತು ಸ್ಥಳೀಯ ಮೀನುಗಾರರು ಶೋಧ ಕಾರ್ಯಾಚರಣೆ ನಡೆಸಿದ್ದು ಅಂತಹ ಯಾವುದೇ ಅನಾಹುತಗಳು ನಡೆದಿಲ್ಲ ಎಂದು ಖಚಿತಪಡಿಸಿಕೊಂಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ, ಎಸ್ಪಿ ಎಂ.ನಾರಾಯಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್, ಡಿವೈಎಸ್ಪಿ ಗಿರೀಶ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ನದಿಗೆ ನಿರ್ಮಿಸಿರುವ ನೂತನ ಸೇತುವೆ ಸಂಚಾರ ಪುನರಾರಂಭಿಸಲು ತುರ್ತಾಗಿ ಸ್ಥಿರತೆ ಮತ್ತು ಶಕ್ತಿ ಪ್ರಮಾಣ ಪತ್ರ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಸ್ತೆ ಸಾರಿಗೆ ಇಲಾಖೆಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಸೂಚನೆ ನೀಡಿದ್ದಾರೆ.

ಐಆರ್‌ಬಿ ಕಂಪನಿ ವಿರುದ್ಧ ಪ್ರಕರಣ ದಾಖಲು: ಸುಮಾರು 39 ವರ್ಷಗಳ ಹಿಂದೆ ಖಾಸಗಿ ಗುತ್ತಿಗೆದಾರ ಕಂಪನಿ ನಿರ್ಮಿಸಿದ ಸೇತುವೆಯು ಉತ್ತರ ಕನ್ನಡ (ಕರ್ನಾಟಕ) ಮತ್ತು ಗೋವಾವನ್ನು ಸಂಪರ್ಕಿಸುತ್ತದೆ. ಸೇತುವೆ ಕುಸಿತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರ ಕಂಪನಿ ಐಆರ್‌ಬಿ ವಿರುದ್ಧ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉ.ಕ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಜಿಲ್ಲೆಯ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾರತಿಪಡಿಸಿಕೊಳ್ಳುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾಗಿ ತಿಳಿದುಬಂದಿದೆ.

ಘಟನೆ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ, ಸೇತುವೆ ಕುಸಿದ ಸಂದರ್ಭ ಗಾಯಗೊಂಡಿರುವ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣದ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ ಸೇತುವೆಯ ಬಲವತ್ತತೆ ಕುರಿತು ಪರಿಶೀಲನೆಗಾಗಿ ಮತ್ತು ಈ ಪ್ರದೇಶದ ಎಲ್ಲ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X