Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಎಂಜಿನಿಯರ್‌ಗಳನ್ನು ತರಾಟೆಗೆ...

ಭಟ್ಕಳ: ಎಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡ ಸಹಾಯಕ ಆಯುಕ್ತೆ ಡಾ.ನಯನಾ

ಯುಜಿಡಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ9 Aug 2024 9:26 PM IST
share
ಭಟ್ಕಳ: ಎಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡ ಸಹಾಯಕ ಆಯುಕ್ತೆ ಡಾ.ನಯನಾ

ಭಟ್ಕಳ: ಭಟ್ಕಳದಲ್ಲಿ ನಡೆಯುತ್ತಿರುವ ಅಂಡರ್‌ ಗ್ರೌಂಡ್ ಡ್ರೈನೇಜ್ ಸಿಸ್ಟಂ (ಯುಜಿಡಿ) ಕಾಮಗಾರಿಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಸಹಾಯಕ ಆಯುಕ್ತೆ ಡಾ.ನಯನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಗಳು ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು 15 ದಿನಗಳ ಒಳಗೆ ಕಾಮಾಗಾರಿಯ ಕುರಿತು ಸಂಪೂರ್ಣ ವರದಿ ನೀಡುವಂತೆ ಸಹಾಯಕ ಆಯುಕ್ತರು ತಾಕೀತು ಮಾಡಿದ್ದಾರೆ.

ಕೋಟ್ಯಾಂತರ ರೂ ವೆಚ್ಚದ ಒಳಚರಂಡಿ ಕಾಮಾಗಾರಿ ಯೋಜನೆ ಕಳಪೆಯಾಗಿದ್ದು ಅಪೂರ್ಣ ಕಾಮಗಾರಿಗಳಿಗೆ ಬಿಲ್ ಪಾವತಿಸಲಾಗಿದೆ. ಭಟ್ಕಳ ಪುರಸಭೆ ಹಾಗೂ ಜಾಲಿ ಪ.ಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಮ್ಯಾನ್ ಹೋಲ್ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಪುರಸಭೆ ಸದಸ್ಯರು ಸಭೆಯಲ್ಲಿ ಆರೋಪಿಸಿದರು.

ಶೇ.100ರಷ್ಟು ಜನವಸತಿ ಪ್ರದೇಶವಾಗಿರುವ ಭಟ್ಕಳ ಗೌಸಿಯಾ ಬೀದಿಯು ಯುಜಿಡಿ ಪಂಪಿಂಗ್ ಸ್ಟೇಷನ್ ಸ್ಥಾಪನೆಯಾ ದಾಗಿನಿಂದ ನಗರದಲ್ಲಿನ ನೂರಾರು ಕೊಳವೆಬಾವಿಗಳು ಸಂಪೂರ್ಣ ವಿಫಲವಾಗಿದ್ದು ಕುಡಿಯುವ ನೀರಿನ ಬಾವಿಗಳಲ್ಲಿ ಮಲೀನ ನೀರು ಶೇಖರಣೆಗೊಳ್ಳೂತ್ತಿದೆ. ನಗರದ ಹಳೆಯ ಬಡಾವಣೆಗಳಲ್ಲಿ ಹಾದು ಹೋಗುವ ಸರಬಿ ನದಿ ಕೊಳಚೆ ಚರಂಡಿಯಾಗಿ ಮಾರ್ಪಾಡಾಗಿದ್ದು, ಇದರಿಂದ ಇಡೀ ಜನವಸತಿ ಪ್ರದೇಶವೇ ದುರ್ವಾಸನೆ ಬೀರುವ ಪ್ರದೇಶವಾಗಿ ಮಾರ್ಪಟ್ಟಿದ್ದು, ರೋಗ ರುಜಿನಗಳ ತಾಣವಾಗಿದೆ ಎಂದು ಸದಸ್ಯರು ಆರೋಪಿಸಿದರು.

ಈ ಸಂದರ್ಭ ಭಟ್ಕಳದ ಯುಜಿಡಿ ಕಾಮಗಾರಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಸಹಾಯಕ ಆಯುಕ್ತೆ ಡಾ.ನಯನಾ, ಇಲ್ಲಿನ ಪ್ರತಿಯೊಬ್ಬ ಸದಸ್ಯರೂ ಕೂಡ ಯುಡಿಜಿ ಕಾಮಗಾರಿ ಬಗ್ಗೆ ಅಸಮಧಾನಗೊಂಡಿದ್ದಾರೆ. ಸದಸ್ಯರು ತಮ್ಮ ಪ್ರದೇಶವನ್ನು ಅಭಿವೃದ್ಧಿಪಡಿಸಲು ಬಯಸುತ್ತಾರೆ. ಯುಜಿಡಿ ಬಗ್ಗೆ ಪ್ರತಿಯೊಬ್ಬರು ದೂರುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಘೌಸಿಯಾ ಸ್ಟ್ರೀಟ್‌ನಲ್ಲಿ ನೂರಾರು ಬಾವಿಗಳು ಹಾಳಾಗಿವೆ, ಸರಬಿ ನದಿಯು ಮೋರಿಯಾಗಿ ಮಾರ್ಪಟ್ಟಿದೆ. ಯುಜಿಡಿ ಸಹಾಯಕ ಕಾರ್ಯಪಾಲಕ ಅಭಿಯಂತರ ಅಜಯ್ ಪ್ರಭು ಅವರು ಸೋಮವಾರ ಮತ್ತು ಮಂಗಳವಾರ ಬೆಳಗ್ಗೆಯಿಂದ ಸಂಜೆಯವರೆಗೆ ವಾರದಲ್ಲಿ ಎರಡು ದಿನ ಭಟ್ಕಳದ ಪುರಸಭೆ ಕಚೇರಿಗೆ ಹಾಜರಾಗಬೇಕು, ಹಾಜರಾತಿ ವರದಿ ನೀಡಬೇಕು ಎಂದು ಸಹಾಯಕ ಆಯುಕ್ತರು ಆದೇಶಿಸಿದರು. ಯಾವುದೇ ಸಂದರ್ಭದಲ್ಲಿ ಯುಜಿಡಿ ಸಮಸ್ಯೆ ಬಗೆಹರಿಸಲು ವಾರಕ್ಕೊಮ್ಮೆ ಸಭೆ ನಡೆಸಿ ಕಾಮಗಾರಿ ಪರಿಶೀಲನೆ ನಡೆಸಬೇಕು ಎಂದು ಪಾಲಿಕೆ ಸದಸ್ಯರಿಗೆ ತಿಳಿಸಿದರು. ಸಮಸ್ಯೆ ಬಗೆಹರಿಸಲು ಜಲಮಂಡಳಿ ಹಾಗೂ ಯುಜಿಡಿ ಎಂಜಿನಿಯರ್‌ಗಳು ಪರಸ್ಪರ ಸಹಕಾರ ನೀಡುವಂತೆ ನಗರಸಭೆ ಎಂಜಿನಿಯರ್ ಅರವಿಂದ್ ಅವರಿಗೆ ಸಹಾಯಕ ಆಯುಕ್ತರು ಸೂಚಿಸಿದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಖೈಸರ್ ಮೊಹತೆಶಮ್, ಕುಡಿಯುವ ನೀರು ಮತ್ತು ಒಳಚರಂಡಿ ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹ ಇಂಜಿನೀಯರ್ ಎಸ್. ಬಾಂದೇಕರ್, ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X