Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ...

ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ: ವಿರೇಂದ್ರ ಶಾನಭಾಗ

”ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ’ ಅಭಿಯಾನ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ24 Sept 2024 9:02 PM IST
share
ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ: ವಿರೇಂದ್ರ ಶಾನಭಾಗ

ಭಟ್ಕಳ: ತನ್ನವರನ್ನು ಪ್ರೀತಿಸಿ ಪರಧರ್ಮವನ್ನು ಗೌರಸಿ ಮಾದರಿ ಬದುಕು ಬದುಕಿದ ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ ಎಂದು ನ್ಯೂ ಇಂಗ್ಲಿಷ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ ಹೇಳಿದರು.

ಅವರು ಭಟ್ಕಳ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಸೆ.13 ರಿಂದ 22 ರ ವರೆಗೆ ಆಯೋಜಿಸಿದ್ದ ”ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ’ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸುಳ್ಳನ್ನು ಸತ್ಯವೆಂದು ಬಿಂಬಿಸುತ್ತಿರುವ ಇಂದಿನ ಸಾಮಾಜಿ ಮಾಧ್ಯಮಗಳ ಯುಗದಲ್ಲಿ ನಾವೆಲ್ಲರೂ ನಮ್ಮ ನಮ್ಮ ಧರ್ಮ ವನ್ನು ಪಾಲಿಸುತ್ತ ಇನ್ನೊಬ್ಬರ ಧರ್ಮ ಮತ್ತು ನಂಬಿಕೆಗಳ ಕುರಿತು ಒಳ್ಳೆಯ ಭಾವನೆ ಮೂಡಿಸಿಕೊಂಡು ಬದುಕಲು ಕಲಿಯ ಬೇಕಾಗಿದೆ. ನಾವೆಲ್ಲರೂ ಪ್ರವಾದಿಗಳ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದರು.

ಗೌರವ ಅತಿಥಿಯಾಗಿದ್ದ ಕರಿಕಲ್ ಚರ್ಚ್‌ನ ಧರ್ಮಗುರು ಫಾ.ಲೋರೆನ್ಸ್ ಫರ್ನಾಂಡೀಸ್ ಮಾತನಾಡಿ, ಸ್ನೇಹ ಮತ್ತು ಸದ್ಗುಣಗಳಿಂದ ಮನುಷ್ಯನನ್ನು ಗೆಲ್ಲಬಹುದು ವಿನಾಹ ಬಲ ಮತ್ತು ಶಕ್ತಿಯಿಂದ ಅಲ್ಲ ಎನ್ನುವುದು ಪ್ರವಾದಿ ಮುಹಮ್ಮದ್ ಅವರ ಸಂದೇಶವಾಗಿತ್ತು, ನಮ್ಮಲ್ಲಿ ಒಳ್ಳೆಯ ಹೃದಯ ಮತ್ತು ಉತ್ತಮ ಯೋಚನೆಗಳಿದ್ದಾಗ ಮಾತ್ರ ನಮ್ಮ ಸಮಾಜ ಉತ್ತಮವಾಗಿರಲು ಸಾಧ್ಯ ಎಂದರು.

ಮತ್ತೋರ್ವ ಮುಖ್ಯ ಅತಿಥಿ ಮುರಡೇಶ್ವರದ ಆರ್.ಎನ್.ಎಸ್ ಪೊಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲ ಕೆ. ಮರಿ ಸ್ವಾಮಿ ಮಾತನಾಡಿ, ನಮ್ಮಲ್ಲಿನ ಬೇಧಭಾವಗಲು ದೂರವಾಗಬೇಕಾದರೆ ಪ್ರವಾದಿ ಮುಹಮ್ಮದ್ ರನ್ನು ಅನುಸರಿಸುವ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ವಲಯ ಸಂಚಾಲಕ ಸಯೀದ್ ಇಸ್ಮಾಯಿಲ್, ಎಲ್ಲ ರೀತಿಯ ಕೆಡುಕುಗಳು ವಿಜ್ರಂಭಿಸುತ್ತಿದ್ದ ಕಾಲದಲ್ಲಿ ಮುಹಮ್ಮದ್ ಪೈಗಂಬರರು ತಮ್ಮ ಸಂದೇಶಗಳ ಮೂಲಕ ಕೆಡುಕು ಮುಕ್ತ ಸಮಾಜವನ್ನು ನಿರ್ಮಿಸಿದರು, ಅವರ ಸಂದೇಶ ಸರ್ವಕಾಲಕ್ಕೂ ಅನ್ವಯಿಸುವಂತಹದ್ದು ಇಂದು ಕೂಡ ಸಮಾಜದಲ್ಲಿ ಆರನೇ ಶತಮಾನದಲ್ಲಿದ್ದ ಎಲ್ಲ ಕೆಡುಕುಗಳು ರಾರಾಜಿಸುತ್ತಿವೆ. ಪ್ರವಾದಿ ಮುಹಮ್ಮದ್ ರ ಸಂದೇಶಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದರು.

ಮಜ್ಲಿಸೆ ಇಸ್ಲಾಹ್ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಸದ್ಭಾವನ ಮಂಚ್ ಗೌರವ ಅಧ್ಯಕ್ಷ ಮೌಲಾನ ಮುನವ್ವರ್ ಪೇಶಮಾಮ್, ಜಮಾಅತೆ ಇಸ್ಲಾಮಿ ಹಿಂದ್ ಉ.ಕ ಜಿಲ್ಲಾ ಸಂಚಾಲಕ ಅಬ್ದುಲ್ ಮನ್ನಾನ್ ಸಿರಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೀರತ್ ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ ಕಾರ್ಯಕ್ರಮ ನಿರೂಪಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ. ಧನ್ಯವಾದ ಅರ್ಪಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X