ಭಟ್ಕಳ: ಪ್ರವಾದಿ ಮುಹಮ್ಮದ್ (ಸ)ರನ್ನು ನಿಂದಿಸಿದ ಯತಿ ನರಸಿಂಹನಂದಾ ಸ್ವಾಮಿ ವಿರುದ್ಧ ದೂರು ದಾಖಲು
ಭಟ್ಕಳ: ಪ್ರವಾದಿ ಮುಹಮ್ಮದ್ (ಸ)ರನ್ನು ಅವಹೇಳನ ಮಾಡಿದ ಯತಿ ನರಸಿಂಹನಂದಾ ಸರಸ್ವತಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಯುಎಪಿಎ ಮತ್ತು ಎನ್.ಎಸ್.ಎ ಕಾಯ್ದೆಯಡಿ ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಭಟ್ಕಳದ ನಗರ ಠಾಣೆಯಲ್ಲಿ ದೂರೊಂದು ದಾಖಲಾಗಿದೆ.
ಇಲ್ಲಿನ ಸಾಮಾಜಿಕ ಮತ್ತು ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ನೇತೃತ್ವದಲ್ಲಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಮುಖಂಡರ ನಿಯೋಗವೊಂದು ಸೋಮವಾರ ಭಟ್ಕಳ ನಗರ ಠಾಣೆಗೆ ಭೇಟಿ ನೀಡಿ ಯತಿ ನರಸಿಂಹನಂದಾ ಸ್ವಾಮಿಯ ವಿರುದ್ಧ ದೂರನ್ನು ದಾಖಲಿಸಿದರು.
ಈ ಸಂದರ್ಭ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ ಹಾಗೂ ವಿವಿಧ ಜಮಾಅತ್ ನ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Next Story