Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಗುರುಮಠ ವತಿಯಿಂದ ಪ್ರತಿಭಾ...

ಭಟ್ಕಳ: ಗುರುಮಠ ವತಿಯಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 Oct 2024 9:56 PM IST
share
ಭಟ್ಕಳ: ಗುರುಮಠ ವತಿಯಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ

ಭಟ್ಕಳ: ನಾಮಧಾರಿ ಸಮಾಜದ ಗುರುಮಠ ವತಿಯಿಂದ ನೀಡುವ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ವನ್ನು ವಿಶ್ರಾಂತ ಜಿಲ್ಲಾ ನ್ಯಾಯಾಧೀಶರಾದ ರವಿ.ಎಂ. ನಾಯ್ಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನಮ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಕಳೆದ 10 ವರ್ಷಗಳ ಹಿಂದೆ ಬೆರಳಣಿ ಕೆಯಷ್ಟಿದ್ದು ಇಂದು ನೂರಾರು ಪ್ರತಿಭಾವಂತರು ನಮ್ಮ ಸಮಾಜದ ಕಾರ್ಯಕ್ರಮದಲ್ಲಿ ಪುರಸ್ಕಾರವನ್ನು ಪಡೆಯುತ್ತಿದ್ದಾರೆ. ಇದು ಸಮಾಜಕ್ಕೆ ಹೆಮ್ಮೆಯ ವಿಷಯವಾಗಿದೆ. ಸಮಾಜದ ವ್ಯಕ್ತಿಗಳು ಒಂದೆ ರಂಗಗಳಲ್ಲಿ ತೊಡಗದೇ ಎಲ್ಲ ರಂಗಗಳಲ್ಲಿ ತಮ್ಮ ಕಾರ್ಯ ನಿರ್ವಹಿಸುವಂತಾಗಬೇಕು ಎಂದರಲ್ಲದೇ ವಿದ್ಯಾರ್ಥಿ ಜೀವನದಲ್ಲಿ ಯವುದೇ ದುಷ್ಟ ಚಟುವಟಿಕೆಗಳಲ್ಲಿ ಹಾಗೂ ಕಾನೂನು ಬಾಹೀರ ಚಟುವಟಿಕೆಗಳಲ್ಲಿ ತೊಡಗದೆ ತಮ್ಮ ವಿದ್ಯಾರ್ಥಿ ಜೀವನವನ್ನು ಆದರ್ಶಮಯವಾಗಿ ಸಾಗಿಸಿ ಸಮಾಜದಕ್ಕೆ ಉತ್ತಮ ಪ್ರಜೆಯಾಗಿ, ರೂಪುಗೊಳ್ಳಬೇಕು. ಮೆಟ್ರಿಕ್ ನಂತರದ ಸಮಯದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪು ವಂತಹ ಸಮಯವಾಗಿದ್ದು ಈ ಸಂದರ್ಭದಲ್ಲಿ ನಾವು ಯಾರ ಕೈಯಲ್ಲಿ ಆಯುಧವಾಗಬಾರದು ಎಂದು ಕಿವಿ ಮಾತ ಹೇಳಿದ ಅವರು ಪಾಲಕರು ಸಹ ತಮ್ಮ ಮಕ್ಕಳನ್ನು ಸರಿಯಾದ ದಾರಿಯಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಹೊಂದಿರು ತ್ತಾರೆ. ಸಮಾಜದಲ್ಲಿ ಉನ್ನತ ಹುದ್ದೆಯಲ್ಲಿರುವುವರು ಸಮಾಜದ ಅಬಿವೃದ್ದಿಗೆ ತಮ್ಮ ಸಹಕಾರ ನೀಡುವಂತಾಗಬೇಕು ಎಂದರು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ತಿತರಿದ್ದ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಂಜುನಾಥ ನಾಯ್ಕ ಮಾತನಾಡಿ ಸಮಾಜದ ಪ್ರತಿಭಾವಂತ ವಿದ್ಯಾರ್ಥೀಗಳನ್ನು ಹುಡುಕಿ ಈ ವೇದಿಕೆಯಲ್ಲಿ ಪುರಸ್ಕಾರ ನೀಡುವುದು ಸಂತೋಷದಾಯಕ ಕಾರ್ಯವಾಗಿದೆ. ಜನ ಎಲೆ ಮರೆ ಕಾಯಿಯಂತೆ ಇದ್ದವರನ್ನು ಈ ವೇದಿಕೆಯ ಮೇಲೆ ತರುವ ಪ್ರಯತ್ನಕ್ಕೆ ಸಮಾಜದ ಹಿರಿಯರು ಪ್ರಯತ್ನಿಸಿರುವುದು ವಿದ್ಯಾರ್ಥಿಗಷ್ಟೇ ಅಲ್ಲದೆ ಅವರ ಪಾಲಕರಿಗೂ ಹೆಮ್ಮೆಯ ವಿಚಾರ ವಾಗಿದೆ. ಈ ಕಾರ್ಯದ ಹಿಂದೆ ಅನೇಕರ ಶ್ರಮವಿದೆ ಎಂದ ಅವರು ಇಂತಹ ಕಾರ್ಯದಿಂದ ಸಮಾಜಕ್ಕೆ ಸ್ಪೂರ್ತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗುರುಮಠದ ಗೌರವಾಧ್ಯಕ್ಷರಾದ ಕೃಷ್ಣ ನಾಯ್ಕ ಮಾತನಾಡಿ ಇಂದಿನ ತಾಂತ್ರಿಕ ಯುಗದಲ್ಲಿ ಯುವಕರು ಸಮಾಜವ್ನು ನಮ್ಮ ಸಂಸ್ಕ್ರತಿಯ್ನು , ನಮ್ಮ ಧರ್ಮವನ್ನು ಮರೆಯುವ ಹಂತಕ್ಕೆ ಹೋಗುವ ಮೊದಲು ಪಾಲಕರು ಅವರಿಗೆ ಚಿಕ್ಕಂದಿನಿಂದಲೆ ಇದರ ಬಗ್ಗೆ ತಿಳಿ ಹೇಳುವ ಕೆಲಸ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಮದಾರಿ ಸಮಾಜದ ಗುರುಮಠದ ಅಧ್ಯಕ್ಷ ಅರುಣ್ ನಾಯ್ಕ ಮಾತನಾಡಿ ಪಾಲ ಕರು ತಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ಕಷ್ಟಪಟ್ಟು ತಮ್ಮ ಸಮಯವನ್ನು ಹಾಳುಮಾಡಿಕೊಂಡು ಮಕ್ಕಳ ಶ್ರೇಯಸ್ಸಿಗೆ ದುಡಿಯುತ್ತಾರೆ. ಮಕ್ಕಳು ಸಹ ತಾವು ಯಶಸ್ಸು ಪಡೆದ ನಂತರ ಪಾಲಕರಿಗೆ ಗೌರವ ಕೊಡುವ ಕೆಲಸ ಮಾಡಬೇಕು ಎಂದರು.

ವೇದಿಕೆಯಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಹಾಗೂ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಲೆ ಸಾಹಿತ್ಯ ಹಾಗೂ ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಸಮಾಜದ ಪ್ರತಿಭೆಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ವಿಶ್ರಾಂತ ಜಿಲ್ಲಾ ನ್ಯಾಯಾಧೀಶರಾದ ರವಿ ಎಂ.ನಾಯ್ಕ ನಾಯ್ಕ ಹಾಗೂ ಉಪನ್ಯಾಸಕ ಮಂಜುನಾತ ನಾಯ್ಕ ಇವರನ್ನು ಸಮಾಜದ ಪರವಾಗಿ ಗೌರವಿಸಲಾಯಿತು.

ಮಂಜುನಾತ ನಾಯ್ಕ ಪ್ರಾರ್ಥನೆ ಹಾಡಿದರು. ಗುರುಮಠದ ಕಾರ್ಯದರ್ಶಿ ಡಿ.ಎಲ್.ನಾಯ್ಕ ಪ್ರಾಸ್ತಾವಿಕ ವಾಗಿ ಮಾತನಾಡಿದರು. ವೇದಿಕೆಯಲ್ಲಿ ಸಮಾಜದ ಉಪಾದ್ಯಕ್ಷರಾದ ಎಂ.ಕೆ.ನಾಯ್ಕ, ಉಪಸ್ಥಿತರಿದ್ದರು. ಶಿಕ್ಷಕರಾದ ಗಂಗಾಧರ ನಾಯ್ಕ ಹಾಗೂ ನಾರಾಯಣ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ಡಿ.ಬಿ. ನಾಯ್ಕ, ಶಾಂತಾರಾಮ ನಾಯ್ಕ, ಗುರುಮಠ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X