Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಜಾಲಿ ಪಟ್ಟಣ ಪಂಚಾಯತ್‌ ನೂತನ ಕಟ್ಟಡ...

ಜಾಲಿ ಪಟ್ಟಣ ಪಂಚಾಯತ್‌ ನೂತನ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ25 Feb 2025 8:21 PM IST
share
ಜಾಲಿ ಪಟ್ಟಣ ಪಂಚಾಯತ್‌ ನೂತನ ಕಟ್ಟಡ ಉದ್ಘಾಟನೆ

ಭಟ್ಕಳ: ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ಉತ್ತರ ಕನ್ನಡ ಜಿಲ್ಲೆ ಪಟ್ಟಣ ಪಂಚಾಯತ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮಂಗಳವಾರ ಜಿಲ್ಲೆಯ ಉಸ್ತುವಾರಿ ಮತ್ತು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಅವರು ಹೂ ಕುಂಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನಾ ಕಾರ್ಯವನ್ನು ನೆರವೇರಿಸಿದರು.

ಈ ಸಂದರ್ಭ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯನ್ನು ಮಾದರಿ ಪಟ್ಟಣ ಪಂಚಾಯತವಾಗಿ ರೂಪಿಸಲು ಒತ್ತಾಯಿಸಿ, ಪಟ್ಟಣ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಸುಮಾರು 167 ಕೋಟಿ ರೂ. ಅನುದಾನ ಮಂಜೂರಿಗಾಗಿ ಮನವಿ ಸಲ್ಲಿಸಿದರು.

ಸಚಿವ ಮಂಕಾಳ ವೈದ್ಯ ಮಾತನಾಡಿ, "ಶಾಸಕರಾಗಿದ್ದ ಕಾಲದಲ್ಲಿ ಪಟ್ಟಣ ಪಂಚಾಯತವನ್ನು ಮೇಲ್ದರ್ಜೆಗೇರಿಸಲು ನಾವು ಪ್ರಯತ್ನಿಸಿದ್ದೇವೆ. ಈ ನೂತನ ಕಟ್ಟಡದ ಜಾಗದ ಸಮಸ್ಯೆ ಪರಿಹರಿಸಿ, ಮುಖ್ಯಮಂತ್ರಿಗಳಿಂದ 1 ಕೋಟಿ ರೂ. ಅನುದಾನ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದೇವೆ." ಹಾಗೆಯೇ, 86 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಯೋಜನೆ ಕಾರ್ಯಗತಗೊಳ್ಳಲಿದೆ. ಈ ಯೋಜನೆ ರಾಜ್ಯ ಬಜೆಟ್‌ನಲ್ಲಿ ಅನುಮೋದನೆ ಪಡೆಯುವ ನಿರೀಕ್ಷೆಯಲ್ಲಿದೆ. ಸಚಿವರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಾರ್ವಜನಿಕ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಸೂಚಿಸಿದರು.

ಅಲ್ಲದೆ, ನಾನು ನಿರ್ಮಾಣ ಮಾಡಿದ ಸಾಗರ ರಸ್ತೆಯ ಪಾರ್ಕ್ ನಿರ್ವಹಣೆಯ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಅದರ ದುರಸ್ತಿ ಕಾರ್ಯ ಕೂಡ ಹಮ್ಮಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿಕಲಚೇತನರಿಗೆ ಹಾಗೂ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ಚೆಕ್ ವಿತರಿಸಲಾಯಿತು.

ಈ ಸಮಾರಂಭದಲ್ಲಿ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಪುರಸಭೆ ಪ್ರಭಾರಿ ಅಧ್ಯಕ್ಷ ಅಲ್ತಾಪ್ ಖರೂರಿ, ಜಾಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಶ್ರೀಮತಿ ಅಪ್ಸಾ ಹುಝೈಫಾ ಖಾಜಿಯಾ, ಉಪಾಧ್ಯಕ್ಷ ಸೈಯ್ಯದ್ ಇಮ್ರಾನ್ ಲಂಕಾ, ಸ್ಥಾಯಿ ಸಮಿತಿ ಅಧ್ಯಕ್ಷ ಈಶ್ವರ ಮೊಗೇರ, ಕಾರವಾರ ಎ.ಇ.ಇ. ಭಾಸ್ಕರ ಗೌಡ, ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿ‌ ಕಾರಿ ಮಂಜಪ್ಪ ಎನ್., ಪಟ್ಟಣ ಪಂಚಾಯತ ಇಂಜಿನಿಯರ್ ಅರವಿಂದ ಸೇರಿದಂತೆ ಹಲವಾರು ಗಣ್ಯರು ಹಾಗೂ ಸದಸ್ಯರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X