Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ| ಅಂಜುಮನ್ ಕಾಲೇಜಿನಲ್ಲಿ...

ಭಟ್ಕಳ| ಅಂಜುಮನ್ ಕಾಲೇಜಿನಲ್ಲಿ ಉಪನ್ಯಾಸಕರಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ23 March 2025 11:03 PM IST
share
ಭಟ್ಕಳ| ಅಂಜುಮನ್ ಕಾಲೇಜಿನಲ್ಲಿ ಉಪನ್ಯಾಸಕರಿಂದ ಇಫ್ತಾರ್ ಕೂಟ

ಭಟ್ಕಳ: ಅಂಜುಮನ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜ್ ಹಾಗೂ ಪಿಜಿ ಕೇಂದ್ರದಲ್ಲಿ ಕಾಲೇಜಿನ ಉಪನ್ಯಾಸಕರಿಂದ ತಮ್ಮ ಸಹೋದ್ಯೋಗಿಗಳಿಗೆ ಇಫ್ತಾರ್ ಕೂಟವನ್ನು ರವಿವಾರ ಆಯೋಜಿಸಲಾಯಿತು.

ಈ ಸಂದರ್ಭ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಹಿಬ್ಬಾನ್ ಶಾಬಂದ್ರಿ, "ಅಂಜುಮನ್‌ ಶಿಕ್ಷಣ ಸಂಸ್ಥೆಯ ಇತಿಹಾಸದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ನಮ್ಮೊಂದಿಗೆ ಕೆಲಸ ಮಾಡುವ ಹಿಂದೂ ಸಹೋದ್ಯೋಗಿಗಳು ರಮಝಾನ್ ತಿಂಗಳಲ್ಲಿ ತಮ್ಮ ಮುಸ್ಲಿಂ ಸಹಪಾಠಿಗಳಿಗಾಗಿ ಇಫ್ತಾರ್ ಪಾರ್ಟಿ ಮತ್ತು ರಾತ್ರಿಯ ಭೋಜನವನ್ನು ಆಯೋಜಿಸಿದ್ದಾರೆ. ಇದು ಪರಸ್ಪರ ಸೌಹಾರ್ದತೆ ಮತ್ತು ಸಹೋದರತೆಗೆ ಒಂದು ಉತ್ತಮ ಉದಾಹರಣೆಯಾಗಿದೆ. ಅಂಜುಮನ್‌ನ ಎಲ್ಲಾ ಸಂಸ್ಥೆಗಳಲ್ಲಿ ಇತರ ಧರ್ಮದ ಉಪನ್ಯಾಸಕರು ಮತ್ತು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಯಾವಾಗಲೂ ಸೌಹಾರ್ದತೆಯ ವಾತಾವರಣವಿತ್ತು. ಇಂದಿನ ಈ ಇಫ್ತಾರ್ ಪಾರ್ಟಿಯು ಆ ಸಹೋದರತೆಯ ವಾತಾವರಣಕ್ಕೆ ಸಾಕ್ಷಿಯಾಗಿದೆ. ಎಲ್ಲಾ ಧರ್ಮದ ಜನರು ಇಲ್ಲಿ ಕೆಲಸ ಮಾಡುತ್ತಾರೆ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿದ್ದಾರೆ. ಈ ಸಹೋದರತೆಯ ವಾತಾವರಣ ಸಮಾಜದಲ್ಲಿ ಸಾಮಾನ್ಯವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಇಫ್ತಾರ್‌ಗೆ ಮೊದಲು ಬಿಬಿಎ ಕಾಲೇಜಿನ ಪ್ರೊ. ಮೌಲಾನಾ ಮೊಹಮ್ಮದ್ ಜಾಫರ್ ನದ್ವಿ ಅವರು ಪ್ರಾರ್ಥನೆ ಸಲ್ಲಿಸಿದರು. ನಮಾಝ್ ಬಳಿಕ ಉತ್ತಮ ರಾತ್ರಿ ಭೋಜನದ ವ್ಯವಸ್ಥೆಯೂ ಇತ್ತು. ಎಲ್ಲಾ ಸಹೋದ್ಯೋಗಿಗಳು ಒಟ್ಟಾಗಿ ಸಂತೋಷದಲ್ಲಿ ಭಾಗವಹಿಸಿದರು. ವಿಶೇಷವಾಗಿ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಆರ್.ಎಸ್. ನಾಯಕ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಪ್ರಭು, ಕನ್ನಡ ಉಪನ್ಯಾಸಕ ಪ್ರೊ. ದಾಮೋದರ ನಾಯಕ್ ಸೇರಿದಂತೆ ಎಲ್ಲಾ ಹಿಂದೂ ಉಪನ್ಯಾಸಕರು ಮತ್ತು ಪ್ರಾಧ್ಯಾಪಕರು ಇಫ್ತಾರ್ ಪಾರ್ಟಿಯ ಆಯೋಜನೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಕೆ. ಶೇಖ್ ಅವರು ಸುಂದರ ಇಫ್ತಾರ್ ಪಾರ್ಟಿಯ ಆಯೋಜನೆಗಾಗಿ ಸಹೋದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದರು.

"ಕಳೆದ ಹಲವು ವರ್ಷಗಳಿಂದ ಮುಸ್ಲಿಂ ಉಪನ್ಯಾಸಕರು ನಮ್ಮ ಕಾಲೇಜಿನಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸುತ್ತಿದ್ದರು. ಆದರೆ ಈ ಬಾರಿ ಅಂಜುಮನ್ ಪದವಿ ಮಹಾವಿದ್ಯಾಲಯದ ಹಿಂದೂ ಉಪನ್ಯಾಸಕರು ಇಫ್ತಾರ್ ಕೂಟವನ್ನು ಆಯೋಜಿಸುವ ಮೂಲಕ ಹಿಂದೂ-ಮುಸ್ಲಿಂ ಸೌಹಾರ್ದತೆಯ ಪರಂಪರೆಗೆ ಒಂದು ಹೊಸ ಆಯಾಮವನ್ನು ಸೇರಿಸಿದ್ದಾರೆ," ಎಂದು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಆರ್.ಎಸ್. ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು.

"ಈ ಇಫ್ತಾರ್ ಆಯೋಜನೆಯಿಂದ ನಾವು ಕೂಡ ರಮಜಾನ್ ಹಬ್ಬದ ಸಂತೋಷದಲ್ಲಿ ಭಾಗಿಯಾಗುವ ಅವಕಾಶ ಪಡೆದಿದ್ದೇವೆ. ಅಂಜುಮನ್ ಸಂಸ್ಥೆಯಲ್ಲಿ ಎಲ್ಲ ಜಾತಿ-ಧರ್ಮದ ಉಪನ್ಯಾಸಕರು ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದೇಶದಲ್ಲಿ ಏನೇ ಘಟನೆಗಳು ನಡೆದರೂ, ಇಲ್ಲಿ ನಾವು ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ಇದು ಒಂದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಒಂದು ಶಿಕ್ಷಣ ಸಂಸ್ಥೆಯಲ್ಲಿ ಹಿಂದೂ ಮತ್ತು ಮುಸ್ಲಿಮರು ಒಟ್ಟಾಗಿ ರಮಝಾನ್ ಉಪವಾಸವನ್ನು ಆಚರಿಸುವುದು ಕೋಮು ಸೌಹಾರ್ದತೆ ಮತ್ತು ಸಹೋದರತ್ವವನ್ನು ಬೆಳೆಸಲು ಕಾರಣವಾಗುತ್ತದೆ. ಇದು ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿ ಯಾಗಬಲ್ಲದು. ಸಮಾಜದಲ್ಲಿ ಎಲ್ಲೆಡೆ ಹಿಂದೂ-ಮುಸ್ಲಿಂ ಎಂದು ಧ್ರುವೀಕರಣ ಮಾಡುವಾಗ, ಈ ಕಾರ್ಯಕ್ರಮವು ಸಮಾಜಕ್ಕೆ ಒಂದು ಒಳ್ಳೆಯ ಸಂದೇಶವನ್ನು ನೀಡಿದೆ. ಮುಂದಿನ ದಿನಗಳಲ್ಲಿ ಈ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗಬೇಕು," ಎಂದು ಅವರು ಒತ್ತಿ ಹೇಳಿದರು.

"ದೇಶದಲ್ಲಿ ಮಾತ್ರವಲ್ಲ, ಜಗತ್ತಿನಾದ್ಯಂತ ಧರ್ಮ ಮತ್ತು ಭಾಷೆಗಳನ್ನು ಮುಂದಿಟ್ಟುಕೊಂಡು ಗಲಭೆಗಳು ಮತ್ತು ಗೊಂದಲಗಳು ಸೃಷ್ಟಿಯಾಗುತ್ತಿವೆ. ಯುವ ಸಮುದಾಯವು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಕೋಮು ಧ್ರುವೀಕರಣದ ತಪ್ಪು ನಿರೂಪಣೆಯಿಂದ ಹೊರಬರಬೇಕು. ನಾವೆಲ್ಲರೂ ಮನುಷ್ಯರೆಂಬ ಏಕತೆಯ ಭಾವನೆಯಲ್ಲಿ ಪ್ರೀತಿ, ಪ್ರೇಮ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು," ಎಂದು ಪ್ರೊ. ನಾಯಕ್ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X