ಎಸ್ ಎಸ್ ಎಲ್ ಸಿ ಪರೀಕ್ಷೆ: ಅಲ್- ಫಲಾಹ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

ಶಿರಸಿ: 2024- 25ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಿರಸಿಯ ಅಲ್- ಫಲಾಹ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ನೀಡಿದ್ದಾರೆ.
ನಿದಾ ಅಬ್ದುಲ್ ಹೈ 98% ಅಂಕ ಪಡೆದು ಪ್ರಥಮ ಸ್ಥಾನ , ಶಾದ್ ಅಬ್ದುಲ್ ಸಲಾಂ 94% ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಆಯೇಷಾ ತಯ್ಯಬ 93% ಅಂಕ ಪಡೆದು ತೃತೀಯ ಸ್ಥಾನ ಹಾಗು ಹಫ್ಸಾ ಶೇಖ್ 90.8% ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯೋಪಾಧ್ಯಾಯರು ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿರುತ್ತಾರೆ.
Next Story





