Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮುರ್ಡೇಶ್ವರ: ಪ್ರವಾಸಿಗರ ಸುರಕ್ಷತೆಗಾಗಿ...

ಮುರ್ಡೇಶ್ವರ: ಪ್ರವಾಸಿಗರ ಸುರಕ್ಷತೆಗಾಗಿ ಸಮುದ್ರ ದಡದಲ್ಲಿ ಸೂಚನಾ ಫಲಕ

ವಾರ್ತಾಭಾರತಿವಾರ್ತಾಭಾರತಿ19 Jun 2025 6:51 PM IST
share
ಮುರ್ಡೇಶ್ವರ: ಪ್ರವಾಸಿಗರ ಸುರಕ್ಷತೆಗಾಗಿ ಸಮುದ್ರ ದಡದಲ್ಲಿ ಸೂಚನಾ ಫಲಕ

ಭಟ್ಕಳ: ಮುರ್ಡೇಶ್ವರದಲ್ಲಿ ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ, ಪ್ರವಾಸಿಗರ ಸುರಕ್ಷತೆಯನ್ನು ಖಾತ್ರಿಪಡಿಸಲು ಮುರ್ಡೇಶ್ವರ ಪೊಲೀಸ್ ಠಾಣೆಯು ಪ್ರವಾಸೋದ್ಯಮ ಇಲಾಖೆ ಮತ್ತು ಮಾವಳ್ಳಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸಮುದ್ರ ದಡದಲ್ಲಿ ಸೂಚನಾ ಫಲಕಗಳನ್ನು ಒಳಗೊಂಡ ಬ್ಯಾನರ್‌ಗಳನ್ನು ಅಳವಡಿಸಿದೆ.

ಈ ಕ್ರಮವು ಪ್ರವಾಸಿಗರಿಗೆ ಸಮುದ್ರದಲ್ಲಿ ಇಳಿಯದಂತೆ ಎಚ್ಚರಿಕೆ ನೀಡುವ ಉದ್ದೇಶವನ್ನು ಹೊಂದಿದೆ.

ಮಳೆಗಾಲದಲ್ಲಿ ಸಮುದ್ರದ ಅಲೆಗಳು ಆಕಸ್ಮಿಕವಾಗಿ ತೀವ್ರಗೊಂಡು ಅಪಾಯಕಾರಿಯಾಗಬಹುದು. ಇದರಿಂದಾಗಿ ಈ ಪ್ರದೇಶಕ್ಕೆ ಆಗಮಿಸುವ ಸಾವಿರಾರು ಪ್ರವಾಸಿಗರ ಜೀವಕ್ಕೆ ಸಂಚಕಾರ ಉಂಟಾಗಬ ಹುದು. ಈ ಹಿನ್ನೆಲೆಯಲ್ಲಿ, ಮುರ್ಡೇಶ್ವರ ಪೊಲೀಸ್ ಠಾಣೆಯ ಉಪನಿರೀಕ್ಷಕರ ನೇತೃತ್ವದಲ್ಲಿ, ಪ್ರಮುಖ ಸಮುದ್ರ ತೀರದ ಸ್ಥಳಗಳಾದ ಶಿವನ ಪ್ರತಿಮೆಯ ಸಮೀಪ, ದೇವಸ್ಥಾನದ ಸುತ್ತಮುತ್ತ ಮತ್ತು ಇತರ ಪ್ರವಾಸಿಗರ ಗುಂಪು ಸೇರುವ ಸ್ಥಳಗಳಲ್ಲಿ ಈ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. “ಮಳೆಗಾಲದಲ್ಲಿ ಸಮುದ್ರದಲ್ಲಿ ಇಳಿಯಬೇಡಿ, ನಿಮ್ಮ ಸುರಕ್ಷತೆ ನಿಮ್ಮ ಕೈಯಲ್ಲಿದೆ” ಎಂಬ ಸಂದೇಶವನ್ನು ಕನ್ನಡ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಫಲಕಗಳಲ್ಲಿ ಒದಗಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆಯ ಸ್ಥಳೀಯ ಅಧಿಕಾರಿಗಳ ಪ್ರಕಾರ, ಮುರ್ಡೇಶ್ವರಕ್ಕೆ ವರ್ಷಪೂರ್ತಿ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅನಿಶ್ಚಿತತೆ ಯಿಂದಾಗಿ ಈ ಎಚ್ಚರಿಕೆಯ ಕ್ರಮ ಅಗತ್ಯವಾಗಿತ್ತು. ಇದರ ಜೊತೆಗೆ, ಸ್ಥಳೀಯ ಗ್ರಾಮ ಪಂಚಾಯತ್‌ನ ಸದಸ್ಯರು ಮತ್ತು ಸಿಬ್ಬಂದಿಯು ಸಮುದ್ರ ತೀರದಲ್ಲಿ ಗಸ್ತು ತಿರುಗುವ ಮೂಲಕ ಪ್ರವಾಸಿಗರಿಗೆ ಸೂಕ್ತ ಮಾಹಿತಿ ನೀಡುವ ಕಾರ್ಯವನ್ನು ಕೈಗೊಂಡಿದ್ದಾರೆ.

ಹೆಚ್ಚುವರಿಯಾಗಿ, ಕರಾವಳಿ ಕಾವಲು ಪಡೆಯ ಸಹಯೋಗದೊಂದಿಗೆ ತುರ್ತು ಸಂದರ್ಭಗಳಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸಿದ್ಧತೆ ನಡೆಸಲಾಗಿದೆ. ಪೊಲೀಸ್ ಇಲಾಖೆಯು ಸ್ಥಳೀಯ ಮೀನುಗಾರರ ತಂಡ ದೊಂದಿಗೆ ಸಮನ್ವಯ ಸಾಧಿಸಿ, ಅಗತ್ಯವಿದ್ದರೆ ರಕ್ಷಣಾ ಕಾರ್ಯಕ್ಕೆ ಸಹಕಾರ ಪಡೆಯುವ ಯೋಜನೆಯನ್ನು ರೂಪಿಸಿದೆ. ಇದರಿಂದಾಗಿ ಮುರುಡೇಶ್ವರದಲ್ಲಿ ಪ್ರವಾಸಕ್ಕೆಂದು ಬಂದು ಸಮುದ್ರದಲ್ಲಿ ಈಜಲು ಹೋಗಿ ತಮ್ಮ ಅಮೂಲ್ಯ ಜೀವವನ್ನು ಕಳೆದುಕೊಳ್ಳುವುದನ್ನು ತಪ್ಪಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X