ರಾಜ್ಯ ಮಟ್ಟದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಭಟ್ಕಳ: ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರದಲ್ಲಿ ನಡೆದ ರಾಜ್ಯ ಮಟ್ಟದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರದಲ್ಲಿ ಭಟ್ಕಳದ ಪತ್ರಕರ್ತ ಮನಮೋಹನ ನಾಯ್ಕ ಇವರ ಮಗ ಸುಜನ್ ನಾಯ್ಕ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದಾನೆ.
ಇತ್ತೀಚಿಗೆ ಪ್ರಖ್ಯಾತ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರದಲ್ಲಿ ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ 95 ಕ್ಕಿಂತ ಹೆಚ್ಚು ಅಂಕ ಪಡೆದ ಸುಜನ್ ಮನಮೋಹನ ನಾಯ್ಕ ಇವರನ್ನು ರಾಜ್ಯ ಪಶುಸಂಗೋಪನಾ ಇಲಾಖೆಯ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ ರವರು ಗೌರವಿಸಿ ಪ್ರತಿಭಾ ಪುರಸ್ಕಾರ ನೀಡಿದರು. ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮುಖ್ಯಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ, ಸಾಲೂರು ಮಠದ ಮಲ್ಲಿಕಾರ್ಜುನ ಸ್ವಾಮಿಜಿ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ,ಎಂ.ಆರ್. ಮಂಜುನಾಥ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿ ಶಿಲ್ಪಾನಾಗ್, ಪೊಲೀಸ್ ವರೀಷ್ಠಾಧಿಕಾರಿ ಬಿ.ಟಿ..ಕವಿತಾ, ಉತ್ತರಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಬ್ರಾಯ ಭಟ್, ರಾಜ್ಯ ಸಂಘದ ಪಧಾಧಿಕಾರಿಗಳು ಸೇರಿದಂತೆ ರಾಜ್ಯದ ವಿವಿದೆಡೆಯಿಂದ ಆಗಮಿಸಿದ ಪತ್ರಕರ್ತರು ಉಪಸ್ಥಿತರಿದ್ದರು.





