ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಿಂದ ಸಾರ್ವಜನಿಕರಿಗೆ ಮಹತ್ವದ ಸೂಚನೆ

ಸಾಂದರ್ಭಿಕ ಚಿತ್ರ
ಭಟ್ಕಳ: ಮಳೆಗಾಲದ ಆರಂಭದೊಂದಿಗೆ ರಾತ್ರಿ ವೇಳೆಯಲ್ಲಿ ಕಳ್ಳತನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯು ಸಾರ್ವಜನಿಕರಿಗೆ ಕೆಲವು ಮಹತ್ವದ ಸುರಕ್ಷತಾ ಸೂಚನೆಗಳನ್ನು ತಿಳಿಸಿದೆ.
ಪೊಲೀಸ್ ಇನ್ಸ್ಪೆಕ್ಟರ್ರಿಂದ ಜಾರಿಯಾಗಿರುವ ಪ್ರಕಟಣೆಯ ಪ್ರಕಾರ, ನಾಗರಿಕರು ತಮ್ಮ ಬೆಲೆಬಾಳುವ ವಸ್ತುಗಳಾದ ಚಿನ್ನಾಭರಣ ಹಾಗೂ ಹಣವನ್ನು ಮನೆಯಲ್ಲಿ ಇಡದೇ, ಬ್ಯಾಂಕ್ನ ಸೇಫ್ ಲಾಕರ್ನಲ್ಲಿ ಇಡುವಂತೆ ಸೂಚಿಸಲಾಗಿದೆ. ಮನೆಯಿಂದ ಹೊರಗೆ ಹೋಗುವಾಗ ತಮ್ಮ ನೆರೆಹೊರೆಯವರಿಗೆ ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಅವಶ್ಯಕ ಎಂದು ತಿಳಿಸಲಾಗಿದೆ.
ಇದರ ಜೊತೆಗೆ, ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಗಳು ಅಥವಾ ವಾಹನಗಳ ಓಡಾಟ ಕಂಡುಬಂದಲ್ಲಿ ತಕ್ಷಣ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ (ಸಂಪರ್ಕ ಸಂಖ್ಯೆ: 08085-227303, ಮೊಬೈಲ್: 9480805202, ಇ-ಮೇಲ್: bhatkalruralkwr@ksp.gov.in) ಮಾಹಿತಿ ನೀಡುವಂತೆ ಕೋರಲಾಗಿದೆ.
ಸುರಕ್ಷತೆಯ ದೃಷ್ಟಿಯಿಂದ, ಮನೆಗಳು ಮತ್ತು ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಗೂ ಬರ್ಗಲರ್ ಅಲಾರಂ ಸಿಸ್ಟಮ್ಗಳನ್ನು ಅಳವಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆಯು ಸಾರ್ವಜನಿಕರಲ್ಲಿ ಮನವಿ ಮಾಡಿದೆ.







