Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ನಾಮಧಾರಿ ಸಮಾಜದ ಪ್ರತಿಭಾ...

ಭಟ್ಕಳ: ನಾಮಧಾರಿ ಸಮಾಜದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ20 July 2025 10:56 PM IST
share
ಭಟ್ಕಳ: ನಾಮಧಾರಿ ಸಮಾಜದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಭಟ್ಕಳ: ನಾಮಧಾರಿ ಸಮಾಜದ ಗುರುಮಠ ವ್ಯಾಪ್ತಿಯ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ರವಿವಾರ ಬೆಳಿಗ್ಗೆ ನಗರದ ಆಸರಕೇರಿಯ ಗುರುಮಠದ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ರಾಣೆ ಬೆನ್ನೂರಿನ ಕೆನರಾ ಇ-ವಿಶನ್‌ನ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಪ್ರಕಾಶ ನಾಯ್ಕ ಉದ್ಘಾಟಿಸಿದರು.

ಉದ್ಘಾಟನಾ ಭಾಷಣದಲ್ಲಿ ಪ್ರಕಾಶ ನಾಯ್ಕ, "ಸಮಾಜದಿಂದ ಪಡೆದ ಪುರಸ್ಕಾರವನ್ನು ಪುನಃ ಸಮಾಜದ ವಿದ್ಯಾರ್ಥಿಗಳಿಗೆ ಕೊಡುವ ಮನೋಭಾವ ಬೆಳೆಸಿಕೊಳ್ಳಬೇಕು. 35 ವರ್ಷಗಳ ಹಿಂದೆ ಈ ಸಭಾಭವನದಲ್ಲಿ ನಾನೂ ಪ್ರತಿಭಾ ಪುರಸ್ಕಾರ ಪಡೆದಿದ್ದೆ. ಇಂದು ನನ್ನ ಸಂಸ್ಥೆಯನ್ನು ಸ್ಥಾಪಿಸಿ, ಸಮಾಜದ ಮುಂದೆ ನಿಲ್ಲಲು ಹೆಮ್ಮೆಯಾಗುತ್ತಿದೆ. ಇದಕ್ಕೆ ಶಿಕ್ಷಣವೇ ಕಾರಣ. ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ಯಲ್ಲಿ ಎರಡು ವರ್ಷಗಳ ಉಚಿತ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಲಾಗುವುದು," ಎಂದರು. ಶಿಕ್ಷಕರು ಮತ್ತು ಪಾಲಕರಿಗೆ ಗೌರವ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಒತ್ತಿ ಹೇಳಿದ ಅವರು, ಸಮಾಜವು ಶಿಕ್ಷಣ ಸಂಸ್ಥೆ ಸ್ಥಾಪಿಸಿದರೆ ತಾವೂ ಸಹಕಾರ ನೀಡಲು ಸಿದ್ಧವಿರುವುದಾಗಿ ತಿಳಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರಿನ ಎಕ್ಸ್‌ಫರ್ಟ್ ಕಾಲೇಜಿನ ಉಪಪ್ರಾಂಶುಪಾಲ ಗುರುದತ್ತ ನಾಯ್ಕ, "ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕವಾಗಿದೆ. ನನಗೆ ಕಲಿ ಸಿದ ಗುರುಗಳ ಜೊತೆ ವೇದಿಕೆ ಹಂಚಿಕೊಳ್ಳುವುದು ಜೀವನದ ಶ್ರೇಷ್ಠ ಕ್ಷಣ. ಶಿಕ್ಷಣವೇ ಜೀವನದ ಅತ್ಯ ಮೂಲ್ಯ ಸಂಪತ್ತು. ಇಂದಿನ ಶಿಕ್ಷಣ ಕೇವಲ ಪ್ರಮಾಣಪತ್ರ ಪಡೆಯುವುದಕ್ಕೆ ಸೀಮಿತವಾಗದೆ, ಜೀವನ ಕಟ್ಟಿಕೊಳ್ಳಲು ಉಪಯುಕ್ತವಾಗಿರಬೇಕು. ಸರಿಯಾದ ನಿರ್ಧಾರ, ಮಾರ್ಗದರ್ಶನ ಮತ್ತು ಗುರಿಯೊಂದಿಗೆ ಶಿಕ್ಷಣ ಪಡೆದರೆ ಯಶಸ್ಸು ಸಾಧ್ಯ," ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಮಧಾರಿ ಸಮಾಜದ ಅಧ್ಯಕ್ಷ ಅರುಣ ನಾಯ್ಕ, "ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧನೆ ಮಾಡಿದಾಗ ತಂದೆ-ತಾಯಿ ಮತ್ತು ಸಮಾಜವನ್ನು ಮರೆಯಬಾರದು. ಪ್ರತಿಭಾ ಪುರಸ್ಕಾರದಿಂದ ಪ್ರೇರಿತರಾಗಿ, ಮುಂದೆ ಸಮಾಜದ ಇತರ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳಬೇಕು," ಎಂದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳು, ಸಾಧಕರು ಹಾಗೂ ಹೊಸದಾಗಿ ಉದ್ಯೋಗಕ್ಕೆ ಸೇರಿದವರನ್ನು ಸನ್ಮಾನಿಸಲಾಯಿತು.

ದುರ್ಗಾದಾಸ ನಾಯ್ಕ ಪ್ರಾರ್ಥನೆ ಹಾಡಿದರು. ಗುರುಮಠ ದೇವಸ್ಥಾನದ ಕಾರ್ಯದರ್ಶಿ ಡಿ.ಎಲ್. ನಾಯ್ಕ ಸ್ವಾಗತಿಸಿದರು. ಉಪಾಧ್ಯಕ್ಷ ಎಂ.ಕೆ. ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ನಾರಾಯಣ ನಾಯ್ಕ ಕಾರ್ಯಕ್ರಮ ನಿರೂಪಿಸಿದರೆ, ಶಂಕರ ನಾಯ್ಕ ವಂದನಾರ್ಪಣೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X