Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಡಿ.ಕೆ. ಶಿವಕುಮಾರ್ ಹೇಳಿಕೆ...

ಭಟ್ಕಳ: ಡಿ.ಕೆ. ಶಿವಕುಮಾರ್ ಹೇಳಿಕೆ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ, ಪ್ರತಿಕೃತಿ ದಹನ

ವಾರ್ತಾಭಾರತಿವಾರ್ತಾಭಾರತಿ26 March 2025 8:03 PM IST
share
ಭಟ್ಕಳ: ಡಿ.ಕೆ. ಶಿವಕುಮಾರ್ ಹೇಳಿಕೆ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ, ಪ್ರತಿಕೃತಿ ದಹನ

ಭಟ್ಕಳ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂವಿಧಾನ ಕುರಿತ ಹೇಳಿಕೆ ವಿರೋಧಿಸಿ ಭಟ್ಕಳ ಬಿಜೆಪಿ ಮಂಡಲವತಿಯಿಂದ ಮಂಗಳವಾರ ಶಂಶುದ್ದೀನ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಗೂ ಮುನ್ನ ಭಟ್ಕಳ ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಗೊಂಡು ಶಂಶುದ್ದೀನ್ ಸರ್ಕಲ್‌ಗೆ ತಲುಪಿತು. ಅಲ್ಲಿ ಪ್ರತಿಕೃತಿಯನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ದಹಿಸಲಾಯಿತು ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ಸುನಿಲ್ ನಾಯ್ಕ, "ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ಹಲವು ಬಾರಿ ಬದಲಾಯಿಸಿದೆ. ಸಂವಿಧಾನವು ಯಾರೊಬ್ಬರ ಆಸ್ತಿಯಲ್ಲ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಭಾರತದ ಜನರಿಗೆ ಶಾಂತಿಯುತ ಜೀವನಕ್ಕಾಗಿ ರಚಿಸಿದ ದಾಖಲೆಯಾಗಿದೆ. ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಎಲ್ಲಾ ಸಮುದಾಯದ ಜನರಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಡಿ.ಕೆ. ಶಿವಕುಮಾರ್ ಅವರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸಿ, ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು" ಎಂದು ಒತ್ತಾಯಿಸಿದರು. "ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನಕ್ಕೆ ವಿರುದ್ಧವಾಗಿದ್ದು, ಕಾಂಗ್ರೆಸ್ ಜನವಿರೋಧಿ ಧೋರಣೆ ತೋರುತ್ತಿದೆ" ಎಂದು ಅವರು ಖಂಡಿಸಿದರು.

ಬಿಜೆಪಿ ಮುಖಂಡ ಗೋವಿಂದ ನಾಯ್ಕ ಮಾತನಾಡಿ, "ಮುಖ್ಯಮಂತ್ರಿಗಳು ಈಗಾಗಲೇ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಕಂಡಿದ್ದೇನೆ. ಆದರೆ ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವಂತಿಲ್ಲ ಎಂದು ಸ್ಪಷ್ಟವಾಗಿದೆ. ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಕಾಂಗ್ರೆಸ್ ಸಂವಿಧಾನ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ" ಎಂದರು. "ಕಾಂಗ್ರೆಸ್ ಹಲವು ಬಾರಿ ಸಂವಿಧಾನವನ್ನು ತಿರುಚಿದೆ. ಬಿಜೆಪಿಯೇ ಅಂಬೇಡ್ಕರ್ ಅವರ ಗೌರವವನ್ನು ಎತ್ತಿಹಿಡಿದಿದೆ. ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಮತ್ತಷ್ಟು ಪ್ರತಿಭಟನೆ ನಡೆಸಲಾಗುವುದು" ಎಂದು ಎಚ್ಚರಿಸಿದರು.

ಮಾಜಿ ಮಂಡಲ ಅಧ್ಯಕ್ಷ ಸುಬ್ರಾಯ್ ದೇವಾಡಿಗ, "1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ಕಾಂಗ್ರೆಸ್ ಅದರ ಮೂಲ ಸ್ವರೂಪವನ್ನು ಹಾಳುಮಾಡಿದೆ. ಆರ್ಟಿಕಲ್ 370, 35A ತಿದ್ದುಪಡಿ, ತುರ್ತು ಪರಿಸ್ಥಿತಿ, ಜಾತ್ಯತೀತ ಪದ ಸೇರ್ಪಡೆ, ಮುಸ್ಲಿಂ ವೈಯಕ್ತಿಕ ಕಾನೂನು ರಚನೆಗೆ ಸಂವಿಧಾನ ಬದಲಾವಣೆ ಮಾಡಿದ್ದು ಕಾಂಗ್ರೆಸ್ ಸರ್ಕಾರಗಳೇ. ಇಂತಹ ಪಕ್ಷವು ಬಿಜೆಪಿ ಮೇಲೆ ಅಪಪ್ರಚಾರ ಮಾಡುತ್ತಿದೆ" ಎಂದು ಆರೋಪಿಸಿದರು. "ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಕ್ತಪಾತದ ಬಗ್ಗೆ ಮಾತನಾಡಿದ್ದಾರೆ. ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಾವೇನು ಉತ್ತರಿಸುತ್ತೀರಿ?" ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶಿವಾನಿ ಶಾಂತಾರಾಂ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಮಾಜಿ ಮಂಡಲ ಅಧ್ಯಕ್ಷ ರಾಜೇಶ ನಾಯ್ಕ, ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X