ಶಿರಸಿ | ಎರಡು ಬಸ್ಸುಗಳು ಮುಖಾಮುಖಿ ಢಿಕ್ಕಿ: ಹಲವು ಪ್ರಯಾಣಿಕರಿಗೆ ಗಾಯ
ಶಿರಸಿ: ಎರಡು ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶಿರಸಿ ತಾಲೂಕಿನ ಇಸಳೂರು ಸಮೀಪ ರವಿವಾರ ಬೆಳಗ್ಗೆ ನಡೆದಿದೆ.
ಶಿರಸಿಯಿಂದ ಹೊರಟಿದ್ದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೆಂಗಳೂರಿಂದ ಬರುತ್ತಿದ್ದ ಗ್ರೀನ್ ಲೈನ್ ಖಾಸಗಿ ಬಸ್ಸೊಂದರ ನಡುವೆ ಈ ಅಪಘಾತ ಸಂಭವಿಸಿದೆ.
ಮುಖಾಮುಖಿ ಢಿಕ್ಕಿಯಲ್ಲಿ ಎರಡೂ ಬಸ್ ಗಳಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡವರನ್ನು ಶಿರಸಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story