Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಶಿರೂರು ಗುಡ್ಡ ಕುಸಿತ ತಡೆಗೆ...

ಶಿರೂರು ಗುಡ್ಡ ಕುಸಿತ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ವಾರ್ತಾಭಾರತಿವಾರ್ತಾಭಾರತಿ6 Feb 2025 1:37 PM IST
share
ಶಿರೂರು ಗುಡ್ಡ ಕುಸಿತ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಶಿರೂರುನಲ್ಲಿ ಪ್ರಸಕ್ತ ಮಳೆಗಾಲದ ಸಂದರ್ಭದಲ್ಲಿ ಪುನಃ ಗುಡ್ಡ ಕುಸಿದು ಯಾವುದೇ ಅನಾಹುತವಾಗದಂತೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶಿರೂರಿನಲ್ಲಿ ಈ ಮಳೆಗಾಲದ ಸಂದರ್ಭದಲ್ಲಿ ಪುನ: ಗುಡ್ಡ ಕುಸಿದು ಯಾವುದೇ ಅನಾಹುತವಾಗದಂತೆ ಕುರಿತಂತೆ ಜಿ.ಎಸ್.ಐ. ಅಧಿಕಾರಿಗಳು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿ, ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಿಗಧಿಪಡಿಸಿದ ಅವಧಿಯೊಳಗೆ ರಾಷ್ಟ್ರೀಯ ಹೆದ್ದಾರಿಯ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಕುರಿತಂತೆ ತಮ್ಮ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಬಾಕಿ ಇರುವ ಅಗತ್ಯ ಅನುಮತಿಗಳನ್ನು ಪಡೆದು, ನಿಗಧಿತ ಅವಧಿಯೊಳಗೆ ಮುಕ್ತಾಯಗೊಳಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮತ್ತು ಇತರೇ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್ ಗಳ ಬಳಿ ತುರ್ತು ಸಂದರ್ಭದಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಲು ಅನುಕೂಲವಾಗುವಂತೆ ಮೊಬೈಲ್ ಟವರ್ ಗಳನ್ನು ತಪ್ಪದೇ ಅಳವಡಿಸುವಂತೆ ಬಿಎಸ್ಸೆನ್ನೆಲ್ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಯಲ್ಲಾಪುರ ಬಳಿ ಇತ್ತೀಚೆಗೆ ನಡೆದ ಅಪಘಾತದಲ್ಲಿ ಗಾಯಳುಗಳು ತಕ್ಷಣಕ್ಕೆ ಪೊಲೀಸರನ್ನು ಸಂಪರ್ಕಿಸಲು ಅಥವಾ ಇತರ ಯಾರನ್ನೂ ಸಂಪರ್ಕಿಸಲು ಪ್ರಯತ್ನಿಸಿದರೂ ಮೊಬೈಲ್ ಸಿಗ್ನಲ್ ದೊರಕದೆ ಇದ್ದುದು ಕಂಡು ಬಂದಿದ್ದು, ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಗುರುತಿಸಿರುವ ಅಪಘಾತ ವಲಯದಲ್ಲಿ ಬಿಎಸ್ಸೆನ್ನೆಲ್ ವತಿಯಿಂದ ಮೊಬೈಲ್ ಟವರ್ ಅಳವಡಿಸುವ ಕಾರ್ಯವನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಬ್ಲಾಕ್ ಸ್ಪಾಟ್ ಸ್ಥಳಗಳಲ್ಲಿ ಅಪಘಾತ ಮುನ್ನೆಚರಿಕೆ ಕುರಿತಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು, ಈ ಪ್ರದೇಶದಲ್ಲಿ ರಾತ್ರಿಯಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಇರಬೇಕು ಮತ್ತು ತುರ್ತು ಸಹಾಯವಾಣಿ ಸಂಖ್ಯೆಗಳ ವಿವರಗಳನ್ನು ನಮೂದಿಸಿದ ಫಲಕಗಳನ್ನು ಅಳವಡಿಸುವಂತೆ ಹಾಗೂ ಆ ಪ್ರದೇಶಗಳನ್ನು ಅಪಘಾತ ರಹಿತವನ್ನಾಗಿ ಮಾಡಲು ಪೊಲೀಸ್ ಇಲಾಖೆ ಸೂಚಿಸುವ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಮಾತನಾಡಿ, ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೊಲೀಸ್ ಇಲಾಖೆ ಸೂಚಿಸುವ ಸ್ಥಳದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು ಹಾಗೂ ಪೊಲೀಸ್ ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಬೇಕು. ಜಿಲ್ಲೆಗೆ ಒಳ ಬರುವ ಮತ್ತು ಜಿಲ್ಲೆಯಿಂದ ಹೊರ ಹೋಗುವ ಎಲ್ಲಾ ಗಡಿ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಕೆ ಮಾಡುವಂತೆ ಮತ್ತು ಅಗತ್ಯ ಸ್ಥಳಗಳಲ್ಲಿ ಹೈಮಾಸ್ಟ್ ದೀಪಗಳನ್ನು ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್ ಹಾಗೂ ಪೊಲೀಸ್, ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X