ಭಟ್ಕಳದಲ್ಲಿ ಭೀಕರ ದುರಂತ| ಮೃತರ ಸಂಖ್ಯೆ 10ಕ್ಕೆ ಏರಿಕೆ

ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ ಕುಟುಂಬ
ಭಟ್ಕಳ: ತಾಲೂಕಿನ ತಟ್ಟಿಹಕ್ಕಲು ಸಮೀಪದ ವೆಂಕಟಾಪುರ ನದಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ದುರಂತದಲ್ಲಿ ಕಪ್ಪೆಚಿಪ್ಪು (ಮಳ್ವಿ) ಸಂಗ್ರಹಿಸಲು ನದಿಗೆ ಇಳಿದಿದ್ದ ಒಟ್ಟು 14 ಮಂದಿಯಲ್ಲಿ ಎಂಟು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದರು. ಇದರಲ್ಲಿ ಸಂಜೆಯ ವೇಳೆಗೆ ಮತ್ತಿಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ನಾಪತೆಯಾದವರಲ್ಲಿ ಮಾದೇವ ಭೈರಪ್ಪ ನಾಯ್ಕ, ಮಂಜಮ್ಮ ಗೊಯ್ದ ನಾಯ್ಕ ಹಾಗೂ ನಾಗರತ್ನ ಪರಮೇಶ್ವರ್ ನಾಯ್ಕೆ ಸೇರಿದ್ದರು. ಇವರಲ್ಲಿ ಇಬ್ಬರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story






