Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಬೆಳಗಾವಿ ಯುವಕನ ಹತ್ಯೆ ರಹಸ್ಯ ಭೇದಿಸಿದ...

ಬೆಳಗಾವಿ ಯುವಕನ ಹತ್ಯೆ ರಹಸ್ಯ ಭೇದಿಸಿದ ಉತ್ತರ ಕನ್ನಡ ಪೊಲೀಸರು: ಮೂವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ18 April 2026 11:20 PM IST
share
ಬೆಳಗಾವಿ ಯುವಕನ ಹತ್ಯೆ ರಹಸ್ಯ ಭೇದಿಸಿದ ಉತ್ತರ ಕನ್ನಡ ಪೊಲೀಸರು: ಮೂವರು ಆರೋಪಿಗಳ ಬಂಧನ

ಕಾರವಾರ, ಎ.18: ರಸ್ತೆ ಅಪಘಾತದಂತೆ ಬಿಂಬಿಸಿ ಬೆಳಗಾವಿಯ ಯುವಕನನ್ನು ಕಾರು ಸಮೇತ ಸುಟ್ಟು ಹಾಕಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದ ಭೀಕರ ಕೊಲೆ ಪ್ರಕರಣವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.

ಈ ಸಂಬಂಧ ಹಳೇ ಹುಬ್ಬಳ್ಳಿಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇದೊಂದು ವೈಯಕ್ತಿಕ ದ್ವೇಷಕ್ಕಾಗಿ ನಡೆದ ಪೂರ್ವ ಯೋಜಿತ ಕೃತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ, ಎಪ್ರಿಲ್ 8ರಂದು ಮುಂಜಾನೆ ಯಲ್ಲಾಪುರದ ತಾಳೆಕುಂಬ್ರಿ ಬಸ್ ನಿಲ್ದಾಣದ ಸಮೀಪದ ರಸ್ತೆಯ ತಗ್ಗಿನಲ್ಲಿ ಕಾರೊಂದು (ಕೆಎ-04/ಎಂಜೆ-8996) ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಾರಿನೊಳಗೆ ಕೇವಲ ಮಾನವ ಅವಶೇಷ ಮಾತ್ರ ಉಳಿದಿದ್ದರಿಂದ, ಮೇಲ್ನೋಟಕ್ಕೆ ಇದು ಅತಿವೇಗದ ಚಾಲನೆಯಿಂದ ಸಂಭವಿಸಿದ ಅಪಘಾತ ಎಂದು ಭಾವಿಸಲಾಗಿತ್ತು. ಮೃತ ನಿತೀಶ್ ಧಾಪಲೆಯ ತಂದೆ ಜಗನ್ನಾಥ ಧಾಪಳೆ ಅವರು ನೀಡಿದ ಆರಂಭಿಕ ದೂರಿನಂತೆ ಯಲ್ಲಾಪುರ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿತ್ತು. ಆದರೆ, ತನ್ನ ಮಗನ ಸಾವು ಆಕಸ್ಮಿಕವಲ್ಲ. ಇದರಲ್ಲಿ ಯಾರೋ ಸಂಚು ರೂಪಿಸಿದ್ದಾರೆ ಎಂದು ತಂದೆ ಸಂಶಯ ವ್ಯಕ್ತಪಡಿಸಿದ ನಂತರ ತನಿಖೆಯ ದಿಕ್ಕು ಬದಲಾಯಿತು ಎಂದು ವಿವರಿಸಿದರು.

ಪ್ರಕರಣದ ಗಂಭೀರತೆಯನ್ನು ಅರಿತು ಯಲ್ಲಾಪುರ ಇನ್ಸ್‌ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ತಾಂತ್ರಿಕ ಮಾಹಿತಿ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಇದೊಂದು ವ್ಯವಸ್ಥಿತವಾಗಿ ನಡೆದ ಹತ್ಯೆ ಎಂಬ ಆಘಾತಕಾರಿ ಸತ್ಯ ಬಯಲಾಯಿತು.

ಹಳೇ ಹುಬ್ಬಳ್ಳಿಯ ಚಿಕನ್ ವ್ಯಾಪಾರಿಗಳಾದ ಅಬ್ದುಲ್ ರಹೀಮ್ ಬಶೀರ್ ಅಹ್ಮದ್ ಮುಜಾವರ್ (32), ಮೌಲಾಸಾಬ್ ಬಾವಾಹಾನ್ ವಾಡ (36) ಮತ್ತು ದಾದಾಪೀರ್ ಅಲಿಯಾಸ್ ಅಫ್ತಾಬ್ ಮೆಹಬೂಬ್ ಸಾಬ್ ಬಾಳಸಂಗಿ (22) ಎಂಬವರೇ ಈ ಕೃತ್ಯದ ರೂವಾರಿಗಳೆಂದು ಪೊಲೀಸರು ಪತ್ತೆ ಹಚ್ಚಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಕಾರು ಹಾಗೂ ಎರಡು ಸ್ಕೂಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಿತೀಶ್ ಥಾಪಲೆಯನ್ನು ಕೊಲೆ ಮಾಡಿದ ಆರೋಪಿಗಳು, ಅದನ್ನು ಅಪಘಾತವೆಂದು ಬಿಂಬಿಸಲು ಮೃತದೇಹದ ಸಮೇತ ಕಾರಿಗೆ ಬೆಂಕಿ ಹಚ್ಚಿರುವುದು ಸಾಬೀತಾಗಿದೆ. ಅತ್ಯಂತ ಸಂಕೀರ್ಣವಾಗಿದ್ದ ಈ ಹತ್ಯೆ ಪ್ರಕರಣವನ್ನು ಕ್ಷಿಪ್ರವಾಗಿ ಭೇದಿಸಿದ ಇನ್‌ಸ್ಪ್ಪೆಕ್ಟರ್ ರಮೇಶ್ ಹನಾಪುರ, ಪಿಎಸ್ಸೈಗಳಾದ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ ಹಾಗೂ ಇಡೀ ತಂಡದ ಕಾರ್ಯಕ್ಷಮತೆ ಶ್ಲಾಘನೀಯ ಎಂದು ಎಸ್ಪಿ ಹೇಳಿದರು.

Tags

Uttara Kannadapolicecrackmurdercaseyoung manBelgaum
share
ವಾರ್ತಾಭಾರತಿ
ವಾರ್ತಾಭಾರತಿ
Next Story
X