Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ನಮಗೆ ಮುಸ್ಲಿಮರು ಅಥವಾ ಕ್ರೈಸ್ತರಿಂದ...

ನಮಗೆ ಮುಸ್ಲಿಮರು ಅಥವಾ ಕ್ರೈಸ್ತರಿಂದ ಅಪಾಯ ಬಂದಿಲ್ಲ: ಅನಂತ್ ಕುಮಾರ್ ಹೆಗಡೆ

ವಾರ್ತಾಭಾರತಿವಾರ್ತಾಭಾರತಿ8 March 2026 10:00 PM IST
share
ನಮಗೆ ಮುಸ್ಲಿಮರು ಅಥವಾ ಕ್ರೈಸ್ತರಿಂದ ಅಪಾಯ ಬಂದಿಲ್ಲ: ಅನಂತ್ ಕುಮಾರ್ ಹೆಗಡೆ
ಭಟ್ಕಳದಲ್ಲಿ 'ಹಿಂದೂ ಸಂಗಮ' ಸಮ್ಮೇಳನ

ಭಟ್ಕಳ: ಹಿಂದೂ ಧರ್ಮವು ಇಂದು ಜಾತಿ-ಜಾತಿಯಲ್ಲಿ ಬಿದ್ದು ಹೊರಳಾಡುತ್ತಿದೆ. ನಮಗೆ ಮುಸ್ಲಿಮರು ಅಥವಾ ಕ್ರೈಸ್ತರಿಂದ ಅಪಾಯ ಬಂದಿಲ್ಲ, ಬದಲಾಗಿ ನಮ್ಮೊಳಗಿನವರಿಂದಲೇ ನಮಗೆ ಹೆಚ್ಚಿನ ಅಪಾಯ ಎದುರಾಗಿದೆ ಎಂದು ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದರು.

ನಗರದಲ್ಲಿ ಆಯೋಜಿಸಲಾಗಿದ್ದ 'ಹಿಂದೂ ಸಂಗಮ' ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಮಾಜವನ್ನು ಕಾಡುತ್ತಿರುವ ಜಾತಿ ಪದ್ಧತಿಯ ವಿರುದ್ಧ ವಾಗ್ದಾಳಿ ನಡೆಸಿದರು.

ವೇದಿಕೆಗಳಲ್ಲಿ ಒಗ್ಗಟ್ಟಿನ ಮಾತುಗಳನ್ನಾಡುತ್ತೇವೆ, ಆದರೆ ಅಲ್ಲಿಂದ ಹೊರಹೋದ ತಕ್ಷಣ ಜಾತಿ ಹುಳ ನಮ್ಮ ತಲೆಯಲ್ಲಿ ತುಂಬಿಕೊಂಡು ತಿನ್ನಲು ಶುರು ಮಾಡುತ್ತದೆ. ಇದಕ್ಕಿಂತ ದೊಡ್ಡ ವಿಷದ ಚಿಂತನೆ ಮತ್ತೊಂದಿಲ್ಲ ಎಂದು ಹೇಳಿದರು.

ಹಿಂದೂ ಸಮಾಜದ ಹಿನ್ನಡೆಗೆ ಹೊರಗಿನ ಶಕ್ತಿಗಳಿಗಿಂತ ಆಂತರಿಕ ದ್ರೋಹವೇ ಕಾರಣ ಎಂದು ವಿಶ್ಲೇಷಿಸಿದ ಅವರು, "ಮುಸಲ್ಮಾನರಾಗಲಿ, ಕ್ರೈಸ್ತರಾಗಲಿ ನಮ್ಮನ್ನು ಸೋಲಿಸಲು ಸಾಧ್ಯವಿರಲಿಲ್ಲ. ಆದರೆ ಇತಿಹಾಸದುದ್ದಕ್ಕೂ ನಮ್ಮವರೇ ಬೆನ್ನಿಗೆ ಚೂರಿ ಹಾಕಿದ್ದಾರೆ. ಕಿತ್ತೂರು ಚೆನ್ನಮ್ಮನನ್ನು ಬ್ರಿಟಿಷರು ಸೋಲಿಸಲಿಲ್ಲ, ಬದಲಾಗಿ ಮಲ್ಲಪ್ಪ ಶೆಟ್ಟಿ ಸೋಲಿಸಿದ. ಸಮಾಜವನ್ನು ಒಡೆದಿದ್ದು ಜಯಚಂದ್ರನೇ ಹೊರತು ಅನ್ಯರಲ್ಲ" ಎಂದರು.

"ನಮ್ಮ ಯಾವುದೇ ಧರ್ಮಗ್ರಂಥಗಳಲ್ಲಿ ಜಾತಿ ವ್ಯವಸ್ಥೆಯ ಉಲ್ಲೇಖವಿಲ್ಲ. ನದಿ ಹರಿಯುವಾಗ ಕೊಳಕು ಸೇರಿ ಕೊಂಡಂತೆ, ಕಾಲಕ್ರಮೇಣ ಜಾತಿ ಎಂಬ ಕೊಳಕು ನಮ್ಮಲ್ಲಿ ಸೇರಿಕೊಂಡಿದೆ. ಅದನ್ನು ಸ್ವಚ್ಛಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಪ್ರಸ್ತುತ ಕಾಲಘಟ್ಟದಲ್ಲಿ ಕೇವಲ ತಮ್ಮ ಜಾತಿಯವರನ್ನು ಮಾತ್ರ ಗೌರವಿಸುವ 'ಜಾತಿ ಸಮ್ಮೇಳನಗಳು' ಫ್ಯಾಶನ್ ಆಗಿರುವುದು ಸಮಾಜದ ಏಕತೆಗೆ ಮಾರಕ ಎಂದು ಅವರು ಅಭಿಪ್ರಾಯಪಟ್ಟರು.

ಆರ್‌ಎಸ್‌ಎಸ್ ನೂರು ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಭಾರತವು ಜಗತ್ತಿನ 'ಗುರು'ವಾಗಿ ಹೊರ ಹೊಮ್ಮುತ್ತಿದೆ. ಈ ಹಿಂದೆ ನಮ್ಮನ್ನು ಹಾವಾಡಿಗರ ದೇಶ ಎಂದು ಜರಿಯುತ್ತಿದ್ದ ಜಗತ್ತು ಇಂದು ಯೋಗ ಮತ್ತು ಆಯುರ್ವೇದವನ್ನು ಅಪ್ಪಿಕೊಳ್ಳುತ್ತಿದೆ. ಐನ್ಸ್ಟೀನ್ ನಂತಹ ವಿಜ್ಞಾನಿಗಳೂ ಭಾರತದ ಗಣಿತದ ಶ್ರೇಷ್ಠತೆಯನ್ನು ಒಪ್ಪಿಕೊಂಡಿದ್ದಾರೆ. ಇಂತಹ ಶ್ರೇಷ್ಠ ಪರಂಪರೆ ಇರುವ ನಾವು ಜಾತಿಯ ಸಂಕೋಲೆಯಿಂದ ಹೊರಬಂದು ಶಕ್ತಿಶಾಲಿಯಾಗಿ ಎದ್ದು ನಿಲ್ಲಬೇಕಿದೆ ಎಂದು ಕರೆ ನೀಡಿದರು.

ಬಂಟ್ವಾಳದ ಮಾಣಿಲದ ಶ್ರೀಧಾಮದ ಶ್ರೀಮೋಹನದಾಸ ಪರಮಹಂಸ ಸ್ವಾಮಿಜಿ ಹಿಂದೂ ಸಮಾವೇಶದ ಸಾನಿಧ್ಯ ವಹಿಸಿದ್ದರು. ನಗರ ಹಿಂದೂ ಸಂಗಮ ಸಮಿತಿ ಅಧ್ಯಕ್ಷ ಶ್ರೀಧರ್ ನಾಯ್ಕ, ನಾಗಯಕ್ಷೆಯ ಧರ್ಮದರ್ಶಿ ರಾಮದಾಸ್ ಪ್ರಭು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags

dangerMuslimsChristiansAnanth Kumar Hegade
share
ವಾರ್ತಾಭಾರತಿ
ವಾರ್ತಾಭಾರತಿ
Next Story
X