Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ನ. 21ರಂದು ವಿಶ್ವ ಮೀನುಗಾರಿಕಾ...

ನ. 21ರಂದು ವಿಶ್ವ ಮೀನುಗಾರಿಕಾ ದಿನಾಚರಣೆ: ಸಚಿವ ಮಾಂಕಾಳ್ ವೈದ್ಯ

ವಾರ್ತಾಭಾರತಿವಾರ್ತಾಭಾರತಿ19 Nov 2023 8:43 PM IST
share
ನ. 21ರಂದು ವಿಶ್ವ ಮೀನುಗಾರಿಕಾ ದಿನಾಚರಣೆ: ಸಚಿವ ಮಾಂಕಾಳ್ ವೈದ್ಯ

ಭಟ್ಕಳ: ರಾಜ್ಯದಲ್ಲಿ ಪ್ರಥಮ ಬಾರಿಗೆ ಎನ್ನುವಂತೆ ನ.21 ರಂದು ರಾಜ್ಯಮಟ್ಟದ ವಿಶ್ವ ಮೀನುಗಾರಿಕಾ ದಿನಾಚರಣೆ ಆಚರಿಸುತ್ತಿದ್ದು 300 ಪರಿಸರ ಸ್ನೇಹಿ ತ್ರೀಚಕ್ರ ವಾಹನ ಮತ್ಸ್ಯ ವಾಹಿನಿ ವಿತರಣೆ ಮಾಡಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಮಾಂಕಾಳ್ ವೈದ್ಯ ಹೇಳಿದರು.

ಅವರು ರವಿವಾರ ಭಟ್ಕಳದಲ್ಲಿ ಸಚಿವರ ಕಾರ್ಯಲಯದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ-2023ರ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾಹಿತಿ ನೀಡಿದರು.

ಮತ್ಸ್ಯೋದ್ಯಮಕ್ಕೆ ಪ್ರೋತ್ಸಾಹ ಹಾಗೂ ನಿರೂದ್ಯೋಗ ನಿವಾರಣೆಯ ದೃಷ್ಟಿಯಿಂದ ರಾಜ್ಯದಲ್ಲಿ 300 ಮತ್ಸ್ಯ ವಾಹಿನಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿತರಿಸಲಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಪ್ರತಿ ವಾರ್ಡುಗಳಲ್ಲಿ ಮತ್ಸ್ಯವಾಹಿನಿ ಕಾರ್ಯಚರಿಸಲಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಗತ್ಯನುಸಾರ ಮತ್ಸ್ಯವಾಹಿನಿ ವಿತರಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಸುಮಾರು 8ಲಕ್ಷಕ್ಕೂ ಅಧಿಕ ಮೌಲ್ಯದ ಈ ವಾಹಿನಿಯಲ್ಲಿ ಮೀನು ಮಾರಾಟ ಮಾಡಲು ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ಕಚ್ಚಾಮೀನು ಅಲ್ಲದೆ ಮೀನು ಪ್ರೈ ಮಾಡಿ ಮಾರಾಟಕ್ಕೂ ಕೂಡ ವ್ಯವಸ್ಥೆ ಇದೆ ಎಂದರು.

ಐದು ಗ್ಯಾರಂಟಿಗಳನ್ನು ಜನರಿಗೆ ತಲುಪಿಸಲು ಇಡೀ ಮಂತ್ರಿಮಂಡಲವೇ ಶ್ರಮಪಡುತ್ತಿದೆ. ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಐದನೆ ಗ್ಯಾರಂಟಿ ಯುವನಿಧಿಯನ್ನು ರಾಜ್ಯದ ಯುವಜನತೆಗೆ ಹೊಸವರ್ಷದ ಕೊಡುಗೆಯಾಗಿ ನೀಡಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಗೃಹಲಕ್ಷ್ಮಿ ಯೋಜನೆ ಸಮರ್ಪ ಕವಾಗಿ ಜಾರಿಯಾಗುತ್ತಿದೆ. ಕೆಲ ತಾಂತ್ರಿಕತೊಂದರೆಗಳ ಹೊರತು ಪಡಿಸಿ ಎಲ್ಲರಿಗೂ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ದೊರೆಯುತ್ತಿದೆ ಎಂದರು.

ಪಂಚರಾಜ್ಯಗಳ ಚುನಾವಣೆಯನ್ನು ಕಾಂಗ್ರೇಸ್ ಪಕ್ಷ ಗೆಲ್ಲುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಅಲ್ಲೋ ವರ್ಕ್ ಮಾಡಿವೆ. ಪಂಚರಾಜ್ಯಗಳಷ್ಟೇ ಅಲ್ಲದೆ ಮುಂದಿನ ಲೋಕಸಭೆ ಚುನಾವಣೆಯನ್ನೂ ನಾವೇ ಗೆಲ್ಲುತ್ತೇವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಭಟ್ಕಳ ಹೆಬಳ ಪಂಚಾಯತ್ ವ್ಯಾಪ್ತಿಯ ತ್ಯಜ್ಯವಿಲೇವಾರಿ ಸಮಸ್ಯೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ತಾಲೂಕು ಪಂಚಾಯತ್ ಮಟ್ಟದಲ್ಲಿ 5ಎಕರೆ ಭೂಮಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಪ್ರಸ್ತಾವನೆ ಕಳುಹಿಸಲಾಗಿದೆ ಇದರಿಂದಾಗಿ ಎಲ್ಲ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಬಗೆಹರಿಯಲಿದೆ ಎಂದರು.

ಜಿಲ್ಲೆಯಲ್ಲಿ ಅತಿಕ್ರಮಣ ಸಮಸ್ಯೆ, ಭಟ್ಕಳ ಮಲ್ಲಿಗೆ, ಹಾಗೂ ಮತ್ಸ್ಯ ಕ್ಷಾಮದ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಭಟ್ಕಳ ಬ್ಲಾಕ್ ಕಾಂಗ್ರೇಸ್ ಮಾಜಿ ಅಧ್ಯಕ್ಷ ವಿಠಲ್ ನಾಯ್ಕ, ಮಹಿಳಾ ಘಟಕದ ಅಧ್ಯಕ್ಷ ನಯನಾ, ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯ್ಕ ಮತ್ತಿತರರು ಇದ್ದರು.

ಇತ್ತಿಚೆಗೆ ತಂಝೀಮ್ ಸಂಸ್ಥೆಯು ಆಯೋಜಿಸಿದ್ದ ಪ್ಯಾಲೆಸ್ತೇನಿಯನ್ನರ ಪರ ಮೌನ ಪ್ರತಿಭಟನೆಯನ್ನು ಉ.ಕ ಜಿಲ್ಲಾ ಬಿಜೆಪಿ ಘಟಕ ವಿರೋಧ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಆದರೆ ಮೋದಿಯವರೇ ಸ್ವತಃ ಪ್ಯಾಲೇಸ್ತೇನಿಯನ್ನರ ಪರವಾಗಿದ್ದಾರೆ ಇದಕ್ಕೆ ತಮ್ಮ ಪ್ರತಿಕ್ರಿಯೆ ಏನು ಎಂದು ಮಾಧ್ಯಮ ಪ್ರತಿನಿಧಿಗಳು ಸಚಿವರನ್ನು ಕೇಳಿದ್ದು ಇದಕ್ಕೆ ನೇರವಾಗಿ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರ ಸರ್ಕಾರ ಪ್ಯಾಲೆಸ್ತೀನ್ ಪರವಾಗಿದ್ದರೆ ಉ.ಕ ಜಿಲ್ಲಾ ಬಿಜೆಪಿಗರು ಬೇರೆಯೇ ಲೋಕದಲ್ಲಿದ್ದಾರೆ. ಇಡೀ ದೇಶದ ಬಿಜೆಪಿ ಒಂದೆಡೆ ಇದ್ದರೆ ಕರಾವಳಿಯ ಬಿಜೆಪಿಯೆ ಬೇರೆಯಾಗಿದೆ. ಜಗತ್ತಿನಲ್ಲಿ ಶಾಂತಿ ನೆಲಸಬೇಕು ಎಂಬುದು ಎಲ್ಲ ಭಾರತೀಯರ ಬಯಕೆ, ಅಮಾಯಕರ ಜೀವ ಬಲಿಯಾಗುತ್ತಿದೆ. ಇಂತಹ ಸಂದರ್ಭ ಸಂತೃಸ್ತರ ಪರವಾಗಿ ನಿಲ್ಲುವುದು ಸಹನುಭೂತಿ ವ್ಯಕ್ತಪಡಿಸುವುದು ಯಾವುದೇ ದೃಷ್ಟಿಯಿಂದಲೂ ತಪ್ಪಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಚಾಳಿ ಕೆಲವರಿಗೆ ಇದೆ. ಅದು ಅಭ್ಯಾಸಬಲ. ಇದಕ್ಕೇನು ಮಾಡಲು ಸಾಧ್ಯವಿಲ್ಲ ಎಂದು ಸಚಿವ ಮಾಂಕಾಳ್ ವೈದ್ಯ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X