ಹೊಸಪೇಟೆ | ರಸ್ತೆ ಕಾಮಗಾರಿಗಳಿಗೆ ಶಾಸಕ ಹೆಚ್.ಆರ್. ಗವಿಯಪ್ಪ ಭೂಮಿ ಪೂಜೆ

ಹೊಸಪೇಟೆ; ಹೊಸಪೇಟೆ ನಗರಸಭೆ ವ್ಯಾಪ್ತಿಗೆ ಒಳಪಡುವ ವಿವಿಧ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಹೆಚ್.ಆರ್ ಗವಿಯಪ್ಪ ಭೂಮಿ ಪೂಜೆ ನೆರವೇರಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಹೊಸಪೇಟೆ ನಗರದ ಹಂಪಿ ರಸ್ತೆ ವಾಸವಿ ದೇವಸ್ಥಾನದ ಬಳಿಯ ರಸ್ತೆ, ಎಂಪಿ ಪ್ರಕಾಶ ನಗರ ಕಮಾನು ಹತ್ತಿರದ ರಸ್ತೆ ಹಾಗೂ ಎನ್ ಸಿ ಕಾಲೋನಿ ಬಳಿ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದ ಬಳಿ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಹೆಚ್.ಆರ್ ಗವಿಯಪ್ಪ ಅವರು ಭೂಮಿ ಪೂಜೆ ನೆರವೇರಿಸಿ ಗುದ್ದಲಿ ಹಾಕುವುದರ ಮೂಲಕ ಚಾಲನೆ ನೀಡಿದರು.
ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಗುಣಮಟ್ಟದ ರಸ್ತೆಯನ್ನು ನಿರ್ಮಿಸಬೇಕೆಂದು ಗುತ್ತಿಗೆದಾರರು, ನಗರಸಭೆ ಅಧಿಕಾರಿಗಳಿಗೆ ಶಾಸಕ ಗವಿಯಪ್ಪ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ನಗರಯೋಜನಾಭಿವೃದ್ಧಿ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಶಿವಕುಮಾರ ಯರಗುಡಿ, ನಗರಸಭೆ ಮುಖ್ಯ ಇಂಜಿನೀಯರ್ ಖಾಜಾ, ಎಇಇ ಸಯ್ಯದ್ ಮನ್ಸೂರ್ ಅಹ್ಮದ್ ಸೇರಿದಂತೆ ನಗರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಅಧಿಕಾರಿ ಚುನಾಯಿತ ಹಾಗೂ ನಾಮನಿರ್ದೇಶಿತ ಸದಸ್ಯರುಗಳು, ಯೋಜನಾ ಅಧಿಕಾರಿಗಳು, ಆಯುಕ್ತರು ಸೇರಿದಂತೆ ನಗರಸಭೆಯ ಸಿಬ್ಬಂದಿಗಳು ಹಾಗೂ ಮುಖಂಡರುಗಳು ಹಾಜರಿದ್ದರು.







