Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ...

ವಿಜಯನಗರ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 2,944 ಕೋಟಿ ರೂ. ಬಿಡುಗಡೆ: ಪಿ.ಟಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ3 Aug 2026 7:29 PM IST
share
ವಿಜಯನಗರ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 2,944 ಕೋಟಿ ರೂ. ಬಿಡುಗಡೆ: ಪಿ.ಟಿ.ಪರಮೇಶ್ವರ್

ವಿಜಯನಗರ (ಹೊಸಪೇಟೆ), ಆ.3: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಡಿ ಕಳೆದ ಮೂರು ವರ್ಷಗಳಲ್ಲಿ ವಿಜಯನಗರ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಒಟ್ಟು 2,944 ಕೋಟಿ ರೂ. ಅನುದಾನ ನೇರವಾಗಿ ಬಿಡುಗಡೆ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರಲ್ಲಿ ಸರ್ಕಾರ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜಾರಿಗೊಳಿಸಲಾಗಿದ್ದು, ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳ ಲಾಭ ತಲುಪಿಸುವ ಉದ್ದೇಶದಿಂದ ಅನುಷ್ಠಾನಗೊಳಿಸಲಾಗಿದೆ. ಯೋಜನೆಗಳಲ್ಲಿರುವ ಕೆಲ ಲೋಪಗಳನ್ನು ಸರಿಪಡಿಸಿ ಇನ್ನಷ್ಟು ಪರಿಣಾಮಕಾರಿಯಾಗಿ ಅರ್ಹರಿಗೆ ತಲುಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಸುಮಾರು 3.47 ಲಕ್ಷ ಕುಟುಂಬಗಳಿಗೆ 2023ರ ಆಗಸ್ಟ್‌ನಿಂದ 2024ರ ಡಿಸೆಂಬರ್‌ವರೆಗೆ ಡಿಬಿಟಿ ಮೂಲಕ 285 ಕೋಟಿ ರೂ. ಪಾವತಿಸಲಾಗಿದೆ. ನಂತರ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ 3,21,966 ಫಲಾನುಭವಿಗಳಿಗೆ 2023ರ ಜೂನ್‌ನಿಂದ 2026ರ ಜೂನ್‌ವರೆಗೆ 468.26 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 2,03,766 ಸ್ಥಾವರಗಳ ಸಮೀಕ್ಷೆ ಗುರಿಯಿದ್ದು, ಇದುವರೆಗೆ 1,35,311 ಸ್ಥಾವರಗಳ ಸಮೀಕ್ಷೆ ನಡೆಸಿ ಶೇ.66.40ರಷ್ಟು ಪ್ರಗತಿ ಸಾಧಿಸಲಾಗಿದೆ. ಮರುಸಮೀಕ್ಷೆ ಮೂಲಕ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸಲಾಗುವುದು ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯ 3,02,017 ನೋಂದಾಯಿತ ಫಲಾನುಭವಿಗಳಿಗೆ 2023ರ ಆಗಸ್ಟ್‌ನಿಂದ 2026ರ ಮೇವರೆಗೆ 1,727 ಕೋಟಿ ರೂ. ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಜೂನ್ ತಿಂಗಳ 31.38 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದರು.

ರಾಜ್ಯಾದ್ಯಂತ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು 117 ಕೋಟಿ ರೂ. ಪಾವತಿಯಾಗಿದ್ದು, ಇದರಲ್ಲಿ 20 ಕೋಟಿ ರೂ. ವನ್ನು ಈಗಾಗಲೇ ಸರ್ಕಾರದ ಖಜಾನೆಗೆ ಹಿಂದಿರುಗಿಸಲಾಗಿದೆ ಎಂದು ವಿವರಿಸಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 2026ರ ಜೂನ್‌ವರೆಗೆ 10.76 ಕೋಟಿ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದು, ಇದಕ್ಕಾಗಿ 430 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅಲ್ಲದೆ, ಸರ್ಕಾರದ ಹೊಸ ಯೋಜನೆಯಡಿ ಬಾಲಕರು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೆ 14,638 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗಿದೆ ಎಂದು ತಿಳಿಸಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 12,982 ಮಂದಿ ನೋಂದಾಯಿಸಿಕೊಂಡಿದ್ದು, ಇವರಲ್ಲಿ 12,688 ಪದವೀಧರರು ಹಾಗೂ 294 ಡಿಪ್ಲೊಮಾ ಪದವೀಧರರು ಸೇರಿದ್ದಾರೆ. ಯೋಜನೆಯಡಿ 32.93 ಕೋಟಿ ರೂ. ಸಹಾಯಧನ ವಿತರಿಸಲಾಗಿದೆ. ಆದರೆ ಜಿಲ್ಲೆಯ ಯುವನಿಧಿ ನೋಂದಣಿ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶಿವಮೂರ್ತಿ, ಉಪಾಧ್ಯಕ್ಷರಾದ ಬಡಾವಲಿ, ಹಡಗಲಿ ಶಾಂತನಗೌಡ, ಚಂದ್ರಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X