Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ ಜಿಲ್ಲೆಯಲ್ಲಿ 30,622 ನೋಟಿಸ್...

ವಿಜಯನಗರ ಜಿಲ್ಲೆಯಲ್ಲಿ 30,622 ನೋಟಿಸ್ ವಿತರಣೆ : 30,081 ನೋಟಿಸ್‌ಗಳ ವಿಚಾರಣೆ ಪೂರ್ಣ ವಿಜಯನಗರ ಜಿಲ್ಲೆಯಲ್ಲಿ 30,622 ನೋಟಿಸ್ ವಿತರಣೆ : 30,081 ನೋಟಿಸ್‌ಗಳ ವಿಚಾರಣೆ ಪೂರ್ಣ

ವಾರ್ತಾಭಾರತಿವಾರ್ತಾಭಾರತಿ14 Oct 2026 6:48 PM IST
share
ವಿಜಯನಗರ ಜಿಲ್ಲೆಯಲ್ಲಿ 30,622 ನೋಟಿಸ್ ವಿತರಣೆ : 30,081 ನೋಟಿಸ್‌ಗಳ ವಿಚಾರಣೆ ಪೂರ್ಣ    ವಿಜಯನಗರ ಜಿಲ್ಲೆಯಲ್ಲಿ 30,622 ನೋಟಿಸ್ ವಿತರಣೆ : 30,081 ನೋಟಿಸ್‌ಗಳ ವಿಚಾರಣೆ ಪೂರ್ಣ

ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಒಟ್ಟು 30,622 ನೋಟಿಸ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ 30,081 ನೋಟಿಸ್‌ಗಳಿಗೆ ಸಂಬಂಧಿಸಿದಂತೆ ವಿಚಾರಣೆ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಎಸ್‌ಐಆರ್ ಪ್ರಕ್ರಿಯೆ ಕುರಿತು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜೂನ್ 15ರಿಂದ ಸೆಪ್ಟೆಂಬರ್ 23ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿವಿಧ ನಮೂನೆಗಳಲ್ಲಿ ಒಟ್ಟು 1,97,700 ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳಲ್ಲಿ 1,48,593 ಅರ್ಜಿಗಳನ್ನು ಆಫ್‌ಲೈನ್ ಮೂಲಕ ಹಾಗೂ 49,107 ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ನಮೂನೆ-6ರಲ್ಲಿ 10,046 ಅರ್ಜಿಗಳ ಅಂಗೀಕಾರ :

ಹೊಸ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಮೂನೆ-6ರಡಿ ಒಟ್ಟು 11,862 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 10,046 ಅರ್ಜಿಗಳನ್ನು ಅಂಗೀಕರಿಸಿ ಮತದಾರರ ಪಟ್ಟಿಯಲ್ಲಿ ನವೀಕರಿಸಲಾಗಿದೆ. 1,793 ಅರ್ಜಿಗಳು ತಿರಸ್ಕೃತಗೊಂಡಿದ್ದು, 23 ಅರ್ಜಿಗಳು ಬಾಕಿ ಉಳಿದಿವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ನಮೂನೆ-7ರಡಿ 1.49 ಲಕ್ಷಕ್ಕೂ ಹೆಚ್ಚು ಅರ್ಜಿಗಳ ವಿಲೇವಾರಿ :

ಮತದಾರರ ಪಟ್ಟಿಯಲ್ಲಿನ ಹೆಸರುಗಳ ಅಳಿಸುವಿಕೆ ಹಾಗೂ ಆಕ್ಷೇಪಣೆಗಳಿಗೆ ಸಂಬಂಧಿಸಿದ ನಮೂನೆ-7ರಡಿ ಒಟ್ಟು 1,50,050 ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳಲ್ಲಿ 1,49,463 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 586 ಅರ್ಜಿಗಳು ತಿರಸ್ಕೃತಗೊಂಡಿದ್ದು, ಒಂದು ಅರ್ಜಿ ಬಾಕಿ ಉಳಿದಿದೆ ಎಂದು ತಿಳಿಸಿದರು.

ನಮೂನೆ-8ರಲ್ಲಿ 34,205 ಅರ್ಜಿಗಳ ನವೀಕರಣ :

ಮತದಾರರ ವಿವರಗಳ ತಿದ್ದುಪಡಿ ಹಾಗೂ ಇತರ ಬದಲಾವಣೆಗಳಿಗೆ ಸಂಬಂಧಿಸಿದ ನಮೂನೆ-8ರಡಿ 35,781 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 34,205 ಅರ್ಜಿಗಳನ್ನು ಮತದಾರರ ಪಟ್ಟಿಯಲ್ಲಿ ನವೀಕರಿಸಲಾಗಿದೆ. 1,536 ಅರ್ಜಿಗಳು ತಿರಸ್ಕೃತಗೊಂಡಿದ್ದು, 40 ಅರ್ಜಿಗಳು ಬಾಕಿ ಉಳಿದಿವೆ ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಮುಂದುವರಿದಿದ್ದು, ಅರ್ಜಿಗಳ ವಿಲೇವಾರಿ ಹಾಗೂ ವಿಚಾರಣೆ ಪ್ರಕ್ರಿಯೆಯ ಮೂಲಕ ಪಟ್ಟಿಯನ್ನು ಪರಿಷ್ಕರಿಸಲಾಗುತ್ತಿದೆ. ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X